ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

RCB vs CSK: ಪಂದ್ಯದ ಟಾಸ್ ವರದಿ ಮತ್ತು ಪ್ಲೇಯಿಂಗ್ ಇಲೆವೆನ್

IPL 2022: Royal Challengers Bangalore vs Chennai Super Kings toss report and playing XI

ಈ ಬಾರಿಯ ಐಪಿಎಲ್‌ನ 49ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳುರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೊಸಿಯೇಶನ್‌ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್‌ಸಿಬಿ ಮೊದಲಿಗೆ ಬ್ಯಾಟಿಂಗ್ ನಡೆಸಿ ಎದುರಾಳಿಗೆ ಗುರಿ ನಿಗದಿಪಡಿಸಬೇಕಿದೆ.

ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಮಿಚೆಲ್ ಸ್ಯಾಂಟ್ನರ್ ಈ ಪಂದ್ಯದಲ್ಲಿ ಆಡುವ ಬಳಗದಿಂದ ಹೊರಬಿದ್ದಿದ್ದು ಅವರ ಸ್ಥಾನದಲ್ಲಿ ಅನುಭವಿ ಆಟಗಾರ ಮೊಯೀನ್ ಅಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಯಾವುದೇ ಬದಲಾವಣೆ ಮಾಡಿಕೊಳ್ಳದೆ ಕಣಕ್ಕಿಳಿಯುತ್ತಿದೆ. ಕಳೆದ ಪಂದ್ಯದಲ್ಲಿ ಆಡಿದ ಆಟಗಾರರೊಂದಿಗೆ ಆಡಲಿಳಿಯುತ್ತಿದೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೋರ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್

ಬೆಂಚ್: ಅನುಜ್ ರಾವತ್, ಡೇವಿಡ್ ವಿಲ್ಲಿ, ಸಿದ್ದಾರ್ಥ್ ಕೌಲ್, ಕರ್ಣ್ ಶರ್ಮಾ, ಸುಯಶ್ ಪ್ರಭುದೇಸಾಯಿ, ಜೇಸನ್ ಬೆಹ್ರೆಂಡಾರ್ಫ್, ಚಾಮ ವಿ ಮಿಲಿಂದ್, ಫಿನ್ ಅಲೆನ್, ಶೆರ್ಫೇನ್ ರುದರ್ಫೋರ್ಡ್, ಆಕಾಶ್ ದೀಪ್, ಅನೀಶ್ವರ್ ಗೌತಮ್

ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಮೊಯಿನ್ ಅಲಿ, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ಎಂಎಸ್ ಧೋನಿ (ಸಿ & ವಿಕೆ), ರವೀಂದ್ರ ಜಡೇಜಾ, ಡ್ವೈನ್ ಪ್ರಿಟೋರಿಯಸ್, ಸಿಮರ್ಜೀತ್ ಸಿಂಗ್, ಮುಖೇಶ್ ಚೌಧರಿ, ಮಹೇಶ್ ತೀಕ್ಷಣ
ಬೆಂಚ್: ಶಿವಂ ದುಬೆ, ಡ್ವೇನ್ ಬ್ರಾವೋ, ಕ್ರಿಸ್ ಜೋರ್ಡಾನ್, ತುಷಾರ್ ದೇಶಪಾಂಡೆ, ಹರಿ ನಿಶಾಂತ್, ಎನ್ ಜಗದೀಸನ್, ಸುಭ್ರಾಂಶು ಸೇನಾಪತಿ, ಪ್ರಶಾಂತ್ ಸೋಲಂಕಿ, ಮಥೀಶ ಪತಿರಾನ, ಭಗತ್ ವರ್ಮಾ, ರಾಜವರ್ಧನ್ ಹಂಗರ್ಗೇಕರ್, ಕೆಎಂ ಆಸಿಫ್, ಮಿಚೆಲ್ ಸ್ಯಾಂಟ್ನರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಎರಡನೇ ಬಾರಿಗೆ ಈ ಬಾರಿಯ ಆವೃತ್ತಿಯಲ್ಲಿ ಮುಖಾಮುಖಿಯಾಗಿದೆ. ಆರ್‌ಸಿಬಿ ಉತ್ತಮ ಪ್ರದರ್ಶನ ನೀಡಿದ ಬಳಿಕ ಹ್ಯಾಟ್ರಿಕ್ ಸೋಲು ಅನುಭವಿಸಿದ್ದು ಹಿನ್ನಡೆಗೆ ಕಾರಣವಾಗಿದೆ. ಹೀಗಾಗಿ ಸಿಎಸ್‌ಕೆ ವಿರುದ್ಧದ ಪಂದ್ಯ ತೀವ್ರ ಕುತೂಹಲ ಮೂಡಿಸಿದೆ.

Dhoni ಹಾಗು Faf ನಡುವೆ ಟಾಸ್‌ನಲ್ಲಿ ನಡೆದಿದ್ದೇನು | Oneindia Kannada

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಈ ಬಾರಿಯ ಟೂರ್ನಿಯಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗುದ್ದ ಸಂದರ್ಭದಲ್ಲಿ ಆರ್‌ಸಿಬಿ ಭಾರೀ ಅಂತರದ ಸೋಲು ಅನುಭವಿಸಿತ್ತು. ಹ್ಯಾಟ್ರಿಕ್ ಗೆಲುವಿನಿಂದ ಬೀಗುತ್ತಿದ್ದ ಆರ್‌ಸಿಬಿ ತಂಡದ ಗೆಲುವಿನ ಓಟಕ್ಕೆ ತಡೆಯೊಡ್ಡಿತ್ತು ಸಿಎಸ್‌ಕೆ. ಅಂಕಪಟ್ಟಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 9ನೇ ಸ್ಥಾನದಲ್ಲಿದ್ದರೂ ಕಳೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಉತ್ತಮ ಪ್ರದರ್ಶನ ನೀಡಿ ಗೆಲುವು ಸಾಧಿಸಿದೆ. ಈ ಮೂಲಕ ಟೂರ್ನಿಯಲ್ಲಿ ಮೂರನೇ ಗೆಲುವು ಸಂಪಾದಿಸಿದೆ. ರವೀಂದ್ರ ಜಡೇಜಾ ನಾಯಕತ್ವವನ್ನು ಎಂಎಸ್ ಧೋನಿಗೆ ಮರಳಿಸಿರುವುದು ತಂಡದಲ್ಲಿ ಹೊಸ ಚೈತನ್ಯ ಮೂಡಿಸಿದಂತೆ ಭಾಸವಾಗುತ್ತಿದೆ. ಹೀಗಾಗಿ ಆರ್‌ಸಿಬಿ ಮತ್ತೊಮ್ಮೆ ಸಿಎಸ್‌ಕೆ ಕಠಿಣ ಸವಾಲಾಗುವುದರಲ್ಲಿ ಅನುಮಾನವಿಲ್ಲ.

Story first published: Wednesday, May 4, 2022, 23:24 [IST]
Other articles published on May 4, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X