RCB vs DC: ಆರ್‌ಸಿಬಿ vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದ ಟಾಸ್ ವರದಿ ಮತ್ತು ಪ್ಲೇಯಿಂಗ್ ಇಲೆವೆನ್

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಏಪ್ರಿಲ್ 16ರ ಶನಿವಾರದಂದು ಒಟ್ಟು 2 ಪಂದ್ಯಗಳು ಆಯೋಜನೆಯಾಗಿದ್ದು, ಪ್ರಥಮ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಸೆಣಸಾಟ ನಡೆಸಿದರೆ ದ್ವಿತೀಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಣಕ್ಕಿಳಿದಿವೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಈ ಪಂದ್ಯ ಈ ಬಾರಿಯ ಐಪಿಎಲ್ ಟೂರ್ನಿಯ 27ನೇ ಪಂದ್ಯವಾಗಿದ್ದು, ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಪಂದ್ಯದಲ್ಲಿ ಟಾಸ್ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಫೀಲ್ಡಿಂಗ್ ಆಯ್ದುಕೊಂಡಿದ್ದು ಎದುರಾಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.

ಆಡುವ ಬಳಗಗಳು
ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ಫಾಫ್ ಡು ಪ್ಲೆಸಿಸ್(ನಾಯಕ), ಅನುಜ್ ರಾವತ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ ( ವಿಕೆಟ್ ಕೀಪರ್), ಸುಯಶ್ ಪ್ರಭುದೇಸಾಯಿ, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್
ಇನ್ನು ಸೋದರಿಯ ಮರಣದ ಕಾರಣದಿಂದ ಕಳೆದ ಪಂದ್ಯಕ್ಕೆ ಅಲಭ್ಯರಾಗಿದ್ದ ಹರ್ಷಲ್ ಪಟೇಲ್ ಇದೀಗ ತಂಡಕ್ಕೆ ಮರಳಿದ್ದು ಆಕಾಶ್ ದೀಪ್ ತಂಡದಿಂದ ಹೊರಬಿದ್ದಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಪೃಥ್ವಿ ಶಾ, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ರಿಷಭ್ ಪಂತ್ (ವಿಕೆಟ್ ಕೀಪರ್/ ನಾಯಕ), ರೋವ್‌ಮನ್ ಪೊವೆಲ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮುಸ್ತಾಫಿಜುರ್ ರೆಹಮಾನ್, ಖಲೀಲ್ ಅಹ್ಮದ್
ಇನ್ನು ಈ ಪಂದ್ಯದಲ್ಲಿ ಕಣಕ್ಕಿಳಿದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಪ್ರಮುಖ ಬದಲಾವಣೆಯೊಂದು ಆಗಿದ್ದು, ಮಿಚೆಲ್ ಮಾರ್ಷ್ ತಂಡ ಸೇರ್ಪಡೆಗೊಂಡು ಸರ್ಫರಾಜ್ ಖಾನ್ ತಂಡದಿಂದ ಹೊರಬಿದ್ದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications