For Quick Alerts
ALLOW NOTIFICATIONS  
For Daily Alerts
 

GT vs RCB: ಆರ್‌ಸಿಬಿಯ ಮಾಡು ಇಲ್ಲವೇ ಮಡಿ ಪಂದ್ಯದ ಟಾಸ್ ವರದಿ; ತಂಡದಲ್ಲಿ ಮಹತ್ವದ ಬದಲಾವಣೆ

IPL 2022: Royal Challengers Bangalore vs Gujarat Titans toss report and playing 11

ಕಳೆದ ಮಾರ್ಚ್ ತಿಂಗಳ ಅಂತಿಮ ವಾರದಲ್ಲಿ ಅರಂಭವಾದ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಇದೀಗ ಮುಕ್ತಾಯದ ಹಂತಕ್ಕೆ ತಲುಪಿದ್ದು, ಪ್ಲೇಆಫ್ ಸುತ್ತಿಗೆ ಅರ್ಹತೆ ಪಡೆದುಕೊಳ್ಳಲು ಫಾಫ್ ಡು ಪ್ಲೆಸಿಸ್ ಪಡೆ ಇಂದು ( ಮೇ 19 ) ಅಗ್ನಿಪರೀಕ್ಷೆಗೆ ಇಳಿದಿದೆ. ಹೌದು, ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಲೀಗ್ ಹಂತದಲ್ಲಿನ ತನ್ನ ಅಂತಿಮ ಪಂದ್ಯದಲ್ಲಿ ಬಲಿಷ್ಠ ಗುಜರಾತ್ ಟೈಟನ್ಸ್ ವಿರುದ್ಧ ಸೆಣಸಾಟ ನಡೆಸಲು ಕಣಕ್ಕಿಳಿದಿದೆ.

ಇನ್ನು ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಆಡುವ ಬಳಗಗಳು:

ಗುಜರಾತ್ ಟೈಟನ್ಸ್ ಆಡುವ ಬಳಗ: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭಮನ್ ಗಿಲ್, ಮ್ಯಾಥ್ಯೂ ವೇಡ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಲಾಕಿ ಫರ್ಗುಸನ್, ಯಶ್ ದಯಾಳ್, ಮೊಹಮ್ಮದ್ ಶಮಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೊರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಸಿದ್ದಾರ್ಥ್ ಕೌಲ್, ಜೋಶ್ ಹ್ಯಾಜಲ್‌ವುಡ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಡುವ ಬಳಗದಲ್ಲಿ ಮಹತ್ವದ ಬದಲಾವಣೆಯನ್ನು ಮಾಡಲಾಗಿದ್ದು, ತಂಡದಿಂದ ಮೊಹಮ್ಮದ್ ಸಿರಾಜ್ ಹೊರಬಿದ್ದಿದ್ದು, ಬದಲಾಗಿ ಸಿದ್ಧಾರ್ಥ್ ಕೌಲ್ ಸೇರ್ಪಡೆಗೊಂಡಿದ್ದಾರೆ.

ಇನ್ನು ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದರೆ ತನ್ನ ಪ್ಲೇಆಫ್ ಆಸೆಯನ್ನು ಜೀವಂತವಾಗಿ ಇರಿಸಿಕೊಳ್ಳಲಿದೆ ಅಥವಾ ಸೋತರೆ ಪ್ಲೇಆಫ್ ರೇಸ್‌ನಿಂದ ಬಹುತೇಕ ಹೊರಬೀಳಲಿದೆ. ಇನ್ನು ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲ್ಲುವುದರ ಜೊತೆಗೆ ಶನಿವಾರ ನಡೆಯಲಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಯಾವುದೇ ಅಡೆತಡೆ ಇಲ್ಲದೇ ಪ್ಲೇಆಫ್ ಪ್ರವೇಶಿಸಲಿದ್ದು, ಸನ್ ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಪ್ಲೇಆಫ್ ಸುತ್ತಿನಿಂದ ಹೊರಬೀಳಲಿವೆ. ಒಂದುವೇಳೆ ಇನ್ನು ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋತರೆ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಪ್ಲೇಆಫ್ ಹಾದಿ ಸುಲಭವಾಗಲಿದ್ದು, ಡೆಲ್ಲಿ ತನ್ನ ಮುಂದಿನ ಪಂದ್ಯದಲ್ಲಿ ಗೆದ್ದರೆ ಯಶಸ್ವಿಯಾಗಿ ಪ್ಲೇಆಫ್ ಸುತ್ತಿಗೆ ಲಗ್ಗೆ ಇಡಲಿದೆ.

Story first published: Friday, May 20, 2022, 9:38 [IST]
Other articles published on May 20, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+