RCB vs PBKS: ಮುಖಾಮುಖಿಯಲ್ಲಿ ಹೆಚ್ಚು ಪಂದ್ಯಗಳನ್ನು ಗೆದ್ದಿರುವ ಬಲಿಷ್ಟ ತಂಡ ಯಾವುದು?

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 60ನೇ ಪಂದ್ಯ ನಾಳೆ ( ಮೇ 13 ) ನಡೆಯಲಿದ್ದು, ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇತ್ತಂಡಗಳು ಪರಸ್ಪರ ಮುಖಾಮುಖಿಯಾಗಲಿರುವ ಎರಡನೇ ಪಂದ್ಯ ಇದಾಗಿದ್ದು, ಇತ್ತಂಡಗಳ ನಡುವೆ ಮಾರ್ಚ್ 27 ರಂದು ನಡೆದಿದ್ದ 3ನೇ ಪಂದ್ಯದಲ್ಲಿ ಸೆಣಸಾಟ ನಡೆಸಿದ್ದವು. ಟೂರ್ನಿಯಲ್ಲಿ ನಡೆದಿದ್ದ ಈ ಮೂರನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಪಂಜಾಬ್ ಕಿಂಗ್ಸ್ 5 ವಿಕೆಟ್‌ಗಳ ಜಯ ಸಾಧಿಸಿತ್ತು.
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಜತೆ ಪಂಜಾಬ್ ಕಿಂಗ್ಸ್ ಕೂಡ ಪ್ಲೇಆಫ್ ಪ್ರವೇಶಿಸುವ ಆಸೆಯನ್ನು ಜೀವಂತವಾಗಿರಿಸಿಕೊಂಡಿದ್ದು, ಎರಡೂ ತಂಡಗಳಿಗೂ ಈ ಪಂದ್ಯ ನಿರ್ಣಾಯಕವಾಗಿದೆ. ಇನ್ನು ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಲ್ಲಿಯವರೆಗೂ ಒಟ್ಟು 12 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು 14 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದರೆ, 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು , ಉಳಿದ 6 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಂಡಿದ್ದು, ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಈ ಅಂಕಿಅಂಶಗಳನ್ನು ಗಮನಿಸಿದರೆ ಪಂಜಾಬ್ ಕಿಂಗ್ಸ್ ಪ್ಲೇಆಫ್ ಪ್ರವೇಶಿಸುವ ಅವಕಾಶ ಪಡೆದುಕೊಳ್ಳಬೇಕೆಂದರೆ ಇನ್ನುಳಿದ ಎಲ್ಲಾ ಪಂದ್ಯಗಳಲ್ಲಿಯೂ ಗೆಲ್ಲಬೇಕಿದೆ ಹಾಗೂ ಪ್ಲೇಆಫ್ ಪ್ರವೇಶಿಸುವ ಅವಕಾಶವನ್ನು ಹೆಚ್ಚಾಗಿ ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇನ್ನುಳಿದ ಎರಡೂ ಪಂದ್ಯಗಳಲ್ಲಿ ದೊಡ್ಡ ಅಂತರದಲ್ಲಿ ಗೆದ್ದರೆ ಟಾಪ್ 2 ಸ್ಥಾನವನ್ನು ಪಡೆದುಕೊಳ್ಳುವ ಅವಕಾಶವಿದೆ.
ಹೀಗಾಗಿ ಇಂದಿನ ಪಂದ್ಯ ಎರಡೂ ತಂಡಗಳಿಗೂ ಅತ್ಯಮೂಲ್ಯವಾಗಿದ್ದು ಗೆಲುವಿನತ್ತ ಚಿತ್ತ ನೆಟ್ಟಿವೆ. ಇನ್ನು ಇತ್ತಂಡಗಳ ನಡುವೆ ಇಲ್ಲಿಯವರೆಗೂ ನಡೆದಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಮುಖಾಮುಖಿ ಪಂದ್ಯಗಳಲ್ಲಿ ಯಾವ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದಿದೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.

ಒಟ್ಟಾರೆ ಐಪಿಎಲ್ ಮುಖಾಮುಖಿ
ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದುವರೆಗೂ ಒಟ್ಟು 29 ಪಂದ್ಯಗಳು ಜರುಗಿದ್ದು, ಈ ಪೈಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 13 ಪಂದ್ಯಗಳಲ್ಲಿ ಗೆದ್ದಿದ್ದರೆ, ಪಂಜಾಬ್ ಕಿಂಗ್ಸ್ 16 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ನಡುವಿನ ಒಟ್ಟಾರೆ ಇಂಡಿಯನ್ ಪ್ರೀಮಿಯರ್ ಲೀಗ್ ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಪಂಜಾಬ್ ಕಿಂಗ್ಸ್ ಸ್ಪಷ್ಟ ಮೇಲುಗೈ ಸಾಧಿಸಿದೆ.

ಕಳೆದ 5 ಪಂದ್ಯಗಳ ಮುಖಾಮುಖಿ
ಈ ಬಾರಿಯ ಟೂರ್ನಿಯ ಮುಖಾಮುಖಿ ಪಂದ್ಯವೂ ಸೇರಿದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ನಡುವೆ ನಡೆದಿರುವ ಕಳೆದ 5 ಮುಖಾಮುಖಿ ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ 4 ಪಂದ್ಯಗಳಲ್ಲಿ ಗೆದ್ದಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಇನ್ನುಳಿದ ಒಂದು ಪಂದ್ಯದಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ನಡುವೆ ನಡೆದ ಕೊನೆಯ 5 ಮುಖಾಮುಖಿ ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಬೃಹತ್ ಮೇಲುಗೈ ಸಾಧಿಸಿದೆ.

ಕಳೆದ ಆವೃತ್ತಿಯ ಮುಖಾಮುಖಿ
ಇನ್ನು ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದಲ್ಲಿ ಎರಡು ಬಾರಿ ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾದವು. ಈ ಪೈಕಿ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಗೆಲುವು ಸಾಧಿಸಿತ್ತು ಹಾಗೂ ದ್ವಿತೀಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವನ್ನು ಕಂಡಿತ್ತು. ಈ ಮೂಲಕ ಕಳೆದ ಬಾರಿಯ ಟೂರ್ನಿಯ ಮುಖಾಮುಖಿಯಲ್ಲಿ ಇತ್ತಂಡಗಳೂ ಸಹ ಸಮಬಲವನ್ನು ಸಾಧಿಸಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications