RCB vs PBKS: ಪಂದ್ಯದ ಟಾಸ್ ವರದಿ ಮತ್ತು ಆಡುವ 11ರ ಬಳಗ

ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಹದಿನೈದನೇ ಆವೃತ್ತಿಯಲ್ಲಿನ 60ನೇ ಪಂದ್ಯದಲ್ಲಿ ಇಂದು (ಮೇ, 13) ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ.
ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಮಯಾಂಕ್ ಅಗರ್ವಾಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.
ಪ್ಲೇಆಫ್ ಹಂತಕ್ಕೇರುವ ಅವಕಾಶವನ್ನು ಹೆಚ್ಚಿಸಿಕೊಳ್ಳಲು ಎರಡೂ ತಂಡಗಳು ಈ ಪಂದ್ಯದಲ್ಲಿ ಜಿದ್ದಾಜಿದ್ದಿನ ಪೈಪೋಟಿಗೆ ಇಳಿಯುವುದರಲ್ಲಿ ಅನುಮಾನವಿಲ್ಲ. ಎರಡೂ ತಂಡಗಳಲ್ಲಿಯೂ ಸಾಕಷ್ಟು ಅದ್ಭುತ ಆಟಗಾರರು ಇರುವುದು ಪಂದ್ಯದ ರೋಚಕತೆಯನ್ನು ಹೆಚ್ಚಿಸಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಿರುವ 12 ಪಂದ್ಯಗಳ ಪೈಕಿ 7 ಗೆಲುವು, 5 ಪಂದ್ಯಗಳ ಸೋಲಿನಿಂದ ಅಂಕಪಟ್ಟಿಯಲ್ಲಿ ಆರ್‌ಸಿಬಿ ಖಾತೆಯಲ್ಲಿ 14 ಅಂಕಗಳಿವೆ. ಮತ್ತೊಂದೆಡೆ ಪಂಜಾಬ್ ಕಿಂಗ್ಸ್ ತಂಡ ಈವರೆಗೆ 11 ಪಂದ್ಯಗಳನ್ನು ಆಡಿದ್ದು 5ರಲ್ಲಿ ಗೆಲುವು ಹಾಗೂ 6 ಸೋಲು ಅನುಭವಿಸಿದೆ.

ಇನ್ನು ಪಂಜಾಬ್ ಕಿಂಗ್ಸ್ ಹಾಗೂ ಆರ್‌ಸಿಬಿ ಈವರೆಗೆ ಒಟ್ಟು 29 ಬಾರಿ ಮುಖಾಮುಖಿಯಾಗಿದ್ದು, ಇದರಲ್ಲಿ 16 ಗೆಲುವು ಸಾಧಿಸಿರುವ ಪಂಜಾಬ್ ಕಿಂಗ್ಸ್ ಮುನ್ನಡೆಯಲ್ಲಿದೆ. ಆರ್‌ಸಿಬಿ 13 ಪಂದ್ಯಗಳನ್ನು ಮಾತ್ರ ಗೆದ್ದುಕೊಂಡಿದೆ. ಈ ಆವೃತ್ತಿಯಲ್ಲಿ ನಡೆದ ಮೊದಲ ಮುಖಾಮುಖಿಯಲ್ಲಿಯೂ ಪಂಜಾಬ್ ತಂಡ 5 ವಿಕೆಟ್‌ಗಳ ಅಂತರದಿಂದ ಗೆದ್ದಿಕೊಂಡಿತ್ತು.
ಆದರೆ ಸದ್ಯ ಅಂಕಪಟ್ಟಿಯಲ್ಲಿ ಪಂಜಾಬ್ ಕಿಂಗ್ಸ್ ಪಡೆಗಿಂತ ಆರ್‌ಸಿಬಿ ಉತ್ತಮ ಸ್ಥಾನದಲ್ಲಿದೆ. ಆದರೆ ಆರ್‌ಸಿಬಿ ಸ್ಥಾನವನ್ನು ಕಿತ್ತುಕೊಳ್ಳಲು ಟೂರ್ನಿಯಿಂದ ಈಗಾಗಲೇ ಹೊರಬಿದ್ದಿರುವ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಹೊರತುಪಡಿಸಿ ಉಳಿದ ಎಲ್ಲಾ ತಂಡಗಳು ಕೂಡ ಸರ್ವ ಪ್ರಯತ್ನವನ್ನು ನಡೆಸುತ್ತಿದೆ.
ಆರ್‌ಸಿಬಿ ತಂಡ ಈ ಪಂದ್ಯದಲ್ಲಿ ಯಾವುದೇ ಬದಲಾವಣೆ ಮಾಡದೇ ಕಣಕ್ಕಿಳಿಯುತ್ತಿದೆ. ಇನ್ನು ಪಂಜಾಬ್ ಕಿಂಗ್ಸ್ ತಂಡದ ಇಂದು ಒಂದು ಬದಲಾವಣೆ ಮಾಡಿದ್ದು, ಸಂದೀಪ್ ಶರ್ಮ ಬದಲಿಗೆ ಹರ್ಪ್ರೀತ್ ಬ್ರಾರ್ ತಂಡಕ್ಕೆ ಸೇರಿದ್ದಾರೆ.
ಆರ್‌ಸಿಬಿ ಆಡುವ 11ರ ಬಳಗ
ಫಾಫ್ ಡುಪ್ಲೆಸಿಸ್(ನಾಯಕ), ವಿರಾಟ್ ಕೊಹ್ಲಿ, ತಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ವನಿಂದು ಹಸರಂಗಾ, ಜೋಶ್ ಹೆಜಲ್‌ವುಡ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್
ಪಂಜಾಬ್ ಕಿಂಗ್ಸ್ ಆಡುವ 11ರ ಬಳಗ
ಜಾನಿ ಬೇರ್‌ಸ್ಟೋವ್, ಶಿಖರ್ ಧವನ್, ಮಯಾಂಕ್ ಅಗರ್ವಾಲ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಭಾನುಕಾ ರಾಜಪಕ್ಸೆ(ವಿಕೆಟ್ ಕೀಪರ್), ಜಿತೇಶ್ ಶರ್ಮ, ಲಿಯಾಮ್ ಲಿವಿಂಗ್‌ಸ್ಟೋನ್, ರಿಷಿ ಧವನ್, ಕಗಿಸೋ ರಬಾಡ, ರಾಹುಲ್ ಚಹರ್, ಹರ್ಪ್ರೀತ್ ಬ್ರಾರ್, ಅರ್ಶದೀಪ್ ಸಿಂಗ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications