RCB vs RR: ಪಂದ್ಯದ ಟಾಸ್ ವರದಿ ಮತ್ತು ಪ್ಲೇಯಿಂಗ್ ಇಲೆವೆನ್ ಮಾಹಿತಿ ಇಲ್ಲಿದೆ

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 13ನೇ ಪಂದ್ಯ ಇಂದು ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಿವೆ.
ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೌಲಿಂಗ್ ಆಯ್ದುಕೊಂಡಿದ್ದು, ಎದುರಾಳಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.
ಆಡುವ ಬಳಗಗಳು
ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶೆರ್ಫಾನ್ ರುದರ್‌ಫೋರ್ಡ್, ಶಹಬಾಜ್ ಅಹ್ಮದ್, ವನಿಂದು ಹಸರಂಗಾ, ಡೇವಿಡ್ ವಿಲ್ಲಿ, ಹರ್ಷಲ್ ಪಟೇಲ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್
ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ ( ನಾಯಕ/ ವಿಕೆಟ್ ಕೀಪರ್ ), ಶಿಮ್ರೋನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ನವದೀಪ್ ಸೈನಿ, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಹಾಲ್
ಆಸ್ಟ್ರೇಲಿಯಾ ಅಂತರರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುವ ಯಾವುದೇ ಆಟಗಾರರಿಗೂ ಸಹ ಏಪ್ರಿಲ್ 6ರವರೆಗೆ ಆಡುವ ಅವಕಾಶವಿರದ ಕಾರಣ ಗ್ಲೆನ್ ಮ್ಯಾಕ್ಸ್‌ವೆಲ್ ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯದೇ ಇದ್ದು, ಏಪ್ರಿಲ್ 9ರಂದು ಮುಂಬೈ ಇಂಡಿಯನ್ಸ್ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಆಡಲಿದ್ದಾರೆ.
ಇನ್ನು ಪಂದ್ಯ ಆರಂಭಕ್ಕೂ ಮುನ್ನ ಪಿಚ್ ವೀಕ್ಷಣೆ ಮಾಡಿದ ಹಿರಿಯ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ಪಿಚ್ ವರದಿಯನ್ನು ತಿಳಿಸಿದ್ದು, ಪಿಚ್ ಖಂಡಿತವಾಗಿಯೂ ಕಡಿಮೆ ಹುಲ್ಲಿನಿಂದ ಕೂಡಿದ್ದು ಈ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚಿನ ಅನುಕೂಲಕರವಾಗಿರಲಿದೆ ಎಂದಿದ್ದಾರೆ. ಹಾಗೂ ಇಂದಿನ ಪಂದ್ಯದಲ್ಲಿ 160ಕ್ಕೂ ಹೆಚ್ಚಿನ ರನ್‌ಗಳನ್ನು ತಂಡಗಳು ಗಳಿಸಲಿವೆ ಎಂದು ಮ್ಯಾಥ್ಯೂ ಹೇಡನ್ ತಿಳಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications