RCB vs SRH: ಇತ್ತಂಡಗಳ ನಡುವಿನ ಒಟ್ಟು 20 ಪಂದ್ಯಗಳಲ್ಲಿ ಕಡಿಮೆ ಗೆದ್ದಿರುವ ಕಳಪೆ ತಂಡ ಯಾವುದು?

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಉತ್ತಮ ಆರಂಭವನ್ನೇ ಪಡೆದುಕೊಂಡಿವೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ಎರಡೂ ತಂಡಗಳೂ ಸಹ ಈ ಬಾರಿಯ ಟೂರ್ನಿಯಲ್ಲಿನ ತಮ್ಮ ಮೊದಲ ಪಂದ್ಯಗಳಲ್ಲಿ ಸೋಲುವುದರ ಮೂಲಕ ಕಹಿ ಆರಂಭವನ್ನು ಪಡೆದುಕೊಂಡವು. ಅದರಲ್ಲಿಯೂ ಸನ್ ರೈಸರ್ಸ್ ಹೈದರಾಬಾದ್ ಸತತ ಎರಡು ಪಂದ್ಯಗಳಲ್ಲಿ ಸೋಲುವ ಮೂಲಕ ಕಳೆದ ಐಪಿಎಲ್ ಟೂರ್ನಿಯ ರೀತಿಯೇ ಈ ಬಾರಿಯೂ ಸಹ ಮುಗ್ಗರಿಸಲಿದೆಯಾ ಎಂಬ ಅನುಮಾನವನ್ನು ಹುಟ್ಟುಹಾಕಿತ್ತು. ಆದರೆ ನಂತರ ನಡೆದ ಸತತ 4 ಪಂದ್ಯಗಳಲ್ಲಿ ಜಯ ಸಾಧಿಸಿದ ಸನ್ ರೈಸರ್ಸ್ ಹೈದರಾಬಾದ್ ಕಮ್‌ಬ್ಯಾಕ್ ಮಾಡಿದೆ.
ಇತ್ತ ಈ ಬಾರಿಯ ಟೂರ್ನಿಯಲ್ಲಿ ನೂತನ ನಾಯಕ ಫಾಫ್ ಡು ಪ್ಲೆಸಿಸ್ ನಾಯಕತ್ವದಲ್ಲಿ ಕಣಕ್ಕಿಳಿದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಾಲು ಸಾಲು ಪಂದ್ಯಗಳಲ್ಲಿ ಜಯ ಸಾಧಿಸಿ ಈ ಬಾರಿ ಯಶಸ್ವಿಯಾಗಿ ಪ್ಲೇಆಫ್ ಪ್ರವೇಶಿಸಬಲ್ಲ ತಂಡಗಳ ಪಟ್ಟಿ ಸೇರಿದೆ. ಇನ್ನು ಈ ಬಾರಿಯ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 7 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು 5 ಪಂದ್ಯಗಳಲ್ಲಿ ಗೆದ್ದು, 2 ಪಂದ್ಯಗಳಲ್ಲಿ ಸೋತಿದ್ದು, 10 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇನ್ನು ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 6 ಪಂದ್ಯಗಳನ್ನಾಡಿರುವ ಸನ್ ರೈಸರ್ಸ್ ಹೈದರಾಬಾದ್ 4 ಪಂದ್ಯಗಳಲ್ಲಿ ಜಯ ಸಾಧಿಸಿ 2 ಪಂದ್ಯಗಳಲ್ಲಿ ಸೋತಿದ್ದು, 8 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
ಹೀಗೆ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಇತ್ತಂಡಗಳು ಟೂರ್ನಿಯ 36ನೇ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ. ಇನ್ನು ಇತ್ತಂಡಗಳ ನಡುವೆ ಇಲ್ಲಿಯವರೆಗೂ ನಡೆದಿರುವ ಪಂದ್ಯಗಳ ಪೈಕಿ ಯಾವ ತಂಡ ಎಷ್ಟು ಪಂದ್ಯಗಳಲ್ಲಿ ಜಯ ಸಾಧಿಸಿದೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ..

ಒಟ್ಟಾರೆ ಐಪಿಎಲ್ ಮುಖಾಮುಖಿ
ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಒಟ್ಟು 20 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪಂದ್ಯಗಳ ಪೈಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 8 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಸನ್ ರೈಸರ್ಸ್ ಹೈದರಾಬಾದ್ 11 ಪಂದ್ಯಗಳಲ್ಲಿ ಗೆದ್ದು ಬೀಗಿದೆ ಹಾಗೂ ಉಳಿದೊಂದು ಪಂದ್ಯ ಯಾವುದೇ ಫಲಿತಾಂಶವಿಲ್ಲದೇ ಅಂತ್ಯಗೊಂಡಿದೆ. ಈ ಮೂಲಕ ಇತ್ತಂಡಗಳ ಐಪಿಎಲ್ ಮುಖಾಮುಖಿ ಪಂದ್ಯಗಳಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹೆಚ್ಚು ಪಂದ್ಯಗಳಲ್ಲಿ ಗೆದ್ದಿರುವ ಬಲಿಷ್ಠ ತಂಡ ಎನಿಸಿಕೊಂಡು ಮೇಲುಗೈ ಸಾಧಿಸಿದೆ.

ಕಳೆದ 5 ಪಂದ್ಯಗಳ ಮುಖಾಮುಖಿ
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಕೊನೆಯ 5 ಐಪಿಎಲ್ ಪಂದ್ಯಗಳ ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 2 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಸನ್ ರೈಸರ್ಸ್ ಹೈದರಾಬಾದ್ 3 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ನಡುವಿನ ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮೇಲುಗೈ ಸಾಧಿಸಿದೆ.

ಕಳೆದ ಆವೃತ್ತಿಯ ಮುಖಾಮುಖಿ
ಇನ್ನು ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಲಿಮಿನೇಟರ್ ಸುತ್ತಿನಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದಿತ್ತು. ಹಾಗೂ ಇತ್ತಂಡಗಳು ಲೀಗ್ ಹಂತದ ಎರಡು ಪಂದ್ಯಗಳ ಪರಸ್ಪರ ಮುಖಾಮುಖಿಯಾಗಿ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಯ ಸಾಧಿಸಿದರೆ, ದ್ವಿತೀಯ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಗೆದ್ದಿತ್ತು. ಈ ಮೂಲಕ ಇತ್ತಂಡಗಳ ನಡುವಿನ ಕಳೆದ ಆವೃತ್ತಿಯ ಮುಖಾಮುಖಿಯಲ್ಲಿ ಎರಡೂ ತಂಡಗಳೂ ಸಹ ಸಮಬಲ ಸಾಧಿಸಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications