
ಐಪಿಎಲ್‌ನ 36ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲಿಗೆ ರನ್ ನಿಗದಿಪಡಿಸುವ ಸವಾಲು ಸ್ವೀಕರಿಸಿದೆ.
ಈ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿರುವ ಎರಡು ತಂಡಗಳು ಕೂಡ ಕಳೆದ ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಹೀಗಾಗಿ ಈ ಪಂದ್ಯದಲ್ಲಿ ಗೆಲುವಿನ ಬಳಗದೊಂದಿಗೆ ಕಂಕ್ಕಿಳಿಯಲು ನಿರ್ಧರಿಸಿದೆ. ಎರಡು ತಂಡಗಳು ಕೂಡ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಕಣಕ್ಕಿಳಿಯುತ್ತಿದೆ.
ಸನ್‌ರೈಸರ್ಸ್ ಹೈದರಾಬಾದ್ ತಂಡ ಆರಂಭಿಕ ಎರಡು ಪಂದ್ಯಗಳನ್ನು ಸೋತಿದ್ದು ನಂತರದ ಎಲ್ಲಾ ನಾಲ್ಕು ಪಂದ್ಯಗಳಲ್ಲಿಯೂ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನ ಲಯವನ್ನು ಮುಂದುವರಿಸುವ ವಿಶ್ವಾಸದಲ್ಲಿದೆ ಸನ್‌ರೈಸರ್ಸ್ ಹೈದರಾಬಾದ್. ಮತ್ತೊಂದೆಡೆ ಆರ್‌ಸಿಬಿ ತಂಡ ಕೂಡ ಟೂರ್ನಿಯಲ್ಲಿ ಅದ್ಭುತ ಗೆಲುವುಗಳನ್ನು ಸಾಧಿಸಿದ್ದು ತನ್ನ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುವ ಉತ್ಸಾಹದಲ್ಲಿದೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಸುಯಶ್ ಪ್ರಭುದೇಸಾಯಿ, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್
ಬೆಂಚ್: ಸಿದ್ದಾರ್ಥ್ ಕೌಲ್, ಕರ್ಣ್ ಶರ್ಮಾ, ಡೇವಿಡ್ ವಿಲ್ಲಿ, ಜೇಸನ್ ಬೆಹ್ರೆಂಡಾರ್ಫ್, ಚಾಮ ವಿ ಮಿಲಿಂದ್, ರಜತ್ ಪಾಟಿದಾರ್, ಮಹಿಪಾಲ್ ಲೊಮ್ರೋರ್, ಫಿನ್ ಅಲೆನ್, ಶೆರ್ಫೇನ್ ರುದರ್ಫೋರ್ಡ್, ಆಕಾಶ್ ದೀಪ್, ಅನೀಶ್ವರ್ ಗೌತಮ್
ಸನ್‌ರೈರ್ಸ್ ಹೈದರಾಬಾದ್ ಆಡುವ ಬಳಗ: ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್ (ನಾಯಕ), ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಶಶಾಂಕ್ ಸಿಂಗ್, ಜಗದೀಶ ಸುಚಿತ್, ಭುವನೇಶ್ವರ್ ಕುಮಾರ್, ಮಾರ್ಕೊ ಜಾನ್ಸೆನ್, ಉಮ್ರಾನ್ ಮಲಿಕ್, ಟಿ ನಟರಾಜನ್
ಬೆಂಚ್: ಸೀನ್ ಅಬಾಟ್, ರವಿಕುಮಾರ್ ಸಮರ್ಥ್, ವಾಷಿಂಗ್ಟನ್ ಸುಂದರ್, ಶ್ರೇಯಸ್ ಗೋಪಾಲ್, ಗ್ಲೆನ್ ಫಿಲಿಪ್ಸ್, ವಿಷ್ಣು ವಿನೋದ್, ಪ್ರಿಯಮ್ ಗಾರ್ಗ್, ಕಾರ್ತಿಕ್ ತ್ಯಾಗಿ, ರೊಮಾರಿಯೋ ಶೆಫರ್ಡ್, ಫಜಲ್ಹಕ್ ಫಾರೂಕಿ, ಅಬ್ದುಲ್ ಸಮದ್, ಸೌರಭ್ ದುಬೆ