CSK vs RCB: ಇಂದು ಆರ್‌ಸಿಬಿ ಪಂದ್ಯ!: ಫಾಫ್ ಪಡೆಯ ಗೆಲುವಿನ ಓಟಕ್ಕೆ ತಡೆಯಾಗುತ್ತಾ ಸಿಎಸ್‌ಕೆ

ಐಪಿಎಲ್ 2022ರ ಆವೃತ್ತಿಯಲ್ಲಿ ಅದ್ಭುತ ಆರಂಭದೊಂದಿಗೆ ಆತ್ಮವಿಶ್ವಾಸದಲ್ಲಿರುವ ಫಾಫ್ ಡು ಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳುರು ತಂಡ ಇಂದು ಮತ್ತೊಂದು ಪಂದ್ಯಕ್ಕೆ ಸಜ್ಜಾಗಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ತಂಡಕ್ಕೆ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಿದೆ. ಈ ಕುತೂಹಲಕಾರಿ ಪಂದ್ಯದಲ್ಲಿ ಯಾರಿಗೆ ಗೆಲುವು ಲಭಿಸಲಿದೆ ಎಂಬುದು ಕಾರಣವಾಗಿದೆ.
ಈ ಬಾರಿಯ ಟೂರ್ನಿಯಲ್ಲಿ ಆರ್‌ಸಿಬಿ ತಂಡ ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಗೆಲುವು ಸಾಧಿಸಿದ್ದರೆ ಚೆನ್ನೈ ಸೂಒರ್ ಕಿಂಗ್ಸ್ ತಂಡ ಆಡಿದ ನಾಲ್ಕು ಪಂದ್ಯಗಳ ಪೈಕಿ ಒಂದರಲ್ಲಿಯೂ ಗೆಲುವು ಕಾಣಲು ಸಾಧ್ಯವಾಗಿಲ್ಲ. ಹೀಗಾಗಿ ಸಿಎಸ್‌ಕೆ ಸೋಲಿನ ಸರಪಳಿಯಿಂದ ಕಳಚಿಕೊಳ್ಳಲಿದೆಯೇ ಎಂಬುದು ಕುತೂಹಲ ಮೂಡಿಸಿದೆ. ಇತ್ತ ಭರ್ಜರಿ ಫಾರ್ಮ್‌ನಲ್ಲಿರುವ ಆರ್‌ಸಿಬಿ ತಂಡದಿಂದ ಯಾವ ರೀತಿಯ ಪ್ರದರ್ಶನ ಬರಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಇನ್ನು ಆರ್‌ಸಿಬಿ ತಂಡದ ಬಹುತೇಕ ಎಲ್ಲಾ ಆಟಗಾರರು ಕೂಡ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಆರಂಭಿಕ ಫಾಫ್ ಡು ಪ್ಲೆಸಿಸ್ ಬ್ಯಾಟ್‌ನಿಂದ ಉತ್ತಮವಾಗಿ ರನ್‌ಗಳು ಹರಿದು ಬರುತ್ತಿದ್ದರೆ ಮತ್ತೋರ್ವ ಯುವ ಆರಂಭಿಕ ಆಟಗಾರ ಅನುಜ್ ರಾವತ್ ಕಳೆದ ಪಂದ್ಯದಲ್ಲಿ ತನ್ನ ಸಾಮರ್ಥ್ಯವನ್ನು ಪ್ರದರ್ಶಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಕಳೆದ ಪಂದ್ಯದಲ್ಲಿ ಉತ್ತಮ ಪ್ರರ್ಶನ ನೀಡಿದ್ದರು.
ಇನ್ನು ಕಳೆದ ಮ್ಯಾಚ್‌ನಲ್ಲಿ ಈ ಬಾರಿಯ ಐಪಿಎಲ್‌ನ ಮೊದಲ ಪಂದ್ಯವನ್ನು ಆಡಿದ ಗ್ಲೆನ್ ಮ್ಯಾಕ್ಸ್‌ವೆಲ್ ಕೂಡ ತನ್ನ ಫಾರ್ಮ್‌ನ ತುಣುಕನ್ನು ಪ್ರದರ್ಶಿಸಿದ್ದು ಫೀಲ್ಡಿಂಗ್‌ನಲ್ಲಿಯೂ ತಾನೆಷ್ಟು ನಿರ್ಣಾಯಕ ಪಾತ್ರವಹಿಸಬಲ್ಲೆ ಎಂಬುದನ್ನು ತೋರ್ಪಡಿಸಿದ್ದಾರೆ. ಮತ್ತೊಂದೆಡೆ ಇನ್ನು ಯುವ ಆಟಗಾರ ಶಹ್ಮಜಾ ಅಹ್ಮದ್ ಈ ಬಾರಿ ಆರ್‌ಸಿಬಿ ತಂಡಕ್ಕೆ ಮತ್ತಷ್ಟು ಬಲ ತುಂಬಿದ್ದು ಯಾವ ಹಂತದಲ್ಲಿಯೂ ತಂಡಕ್ಕೆ ನೆರವಾಗುವ ಸಾಮರ್ಥ್ಯವಿದೆ ಎಂಬುದನ್ನು ವ್ಯಕ್ತಪಡಿಸಿದ್ದಾರೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಶಹ್ಬಾಜ್ ತಂಡಕ್ಕೆ ಬಲ ಹೆಚ್ಚಿಸುವ ಆಟಗಾರನಾಗಿದ್ದಾರೆ.
ಇನ್ನು ಅನುಭವಿ ದಿನೇಶ್ ಕಾರ್ತಿಕ್ ಈ ಬಾರಿಯ ಐಪಿಎಲ್‌ನಲ್ಲಿ ಅಮೋಘ ಫಾರ್ಮ್‌ನಲ್ಲಿರುವುದು ಆರ್‌ಸಿಬಿಯ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಕೊನೆಯ ಕ್ಷಣದಲ್ಲಿ ಕ್ರೀಸ್‌ಗೆ ಇಳಿದು ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡುವ ದಿನೇಶ್ ಕಾರ್ತಿಕ್ ಸ್ಪೋಟಕ ಬ್ಯಾಟಿಂಗ್‌ನಿಂದ ತಂಡವನ್ನು ಗೆಲ್ಲಿಸಿದ್ದಾರೆ. ಟೂರ್ನಿಯಲ್ಲಿ ಈವರೆಗೆ ದಿನೇರ್ಶ ಕಾರ್ತಿಕ್ ಔಟಾಗದೆ ಉಳಿದುಕೊಂಡಿರುವುದು ಅವರ ಬ್ಯಾಟಿಂಗ್ ಪರಾಕ್ರಮಕ್ಕೆ ಸಾಕ್ಷಿಯಾಗಿದೆ.
ಇನ್ನು ಆರ್‌ಸಿಬಿ ತಂಡದ ಬೌಲಿಂಗ್ ವಿಭಾಗ ಕೂಡ ಬಲಶಾಲಿಯಾಗಿದೆ. ಆದರೆ ಪ್ರಮುಖ ವೇಗಿ ಹರ್ಷಲ್ ಪಟೇಲ್ ಕುಟುಂಬದಲ್ಲಿ ಉಂಟಾಗಿರುವ ದುರಂತದಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಭಾಗಿಯಾಗುವುದು ಅನುಮಾನವಾಗಿದೆ. ಹೀಗಾಗಿ ಈ ಸ್ಥಾನದಲ್ಲಿ ಯಾರನ್ನು ಆರ್‌ಸಿಬಿ ಆಡಿಸಲಿದೆ ಎಂಬುದು ಕೂಡ ಕುತೂಹಲ ಮೂಡಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications