For Quick Alerts
ALLOW NOTIFICATIONS  
For Daily Alerts
 

RCB vs RR: ಬೆಂಗಳೂರಿಗೆ ಇಂದು ರಾಯಲ್ಸ್ ಸವಾಲು: ಆಘಾತದಿಂದ ಹೊರಬರುತ್ತಾ ಫಾಫ್ ಪಡೆ!

IPL 2022: Royal Challengers Bangalore will face Rajasthan Royals at MCA Pune
RCB ವಿರುದ್ಧ ಸೇಡು ತೀರಿಸಿಕೊಳ್ಳೋದಕ್ಕೆ ರಾಜಸ್ತಾನ್ ರಾಯಲ್ಸ್ ಮಾಸ್ಟರ್ ಪ್ಲ್ಯಾನ್ | Oneindia Kannada

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಕಳೆದ ಶನಿವಾರ ನಡೆದ ಮುಖಾಮುಖಿಯಲ್ಲಿ ಆರ್‌ಸಿಬಿ ತಂಡದ ಅತ್ಯಂತ ಕೆಟ್ಟ ಪ್ರದರ್ಶನವನ್ನು ನೀಡಿದ್ದು ಭಾರೀ ಅಂತರದ ಸೋಲು ಅನುಭವಿಸಿದೆ. ಈ ಸೋಲಿನಿಂದಾಗಿ ತಂಡದ ಆತ್ಮವಿಸ್ವಾಸದ ಮೇಲೆ ಏಟು ಬಿದ್ದಂತಾಗಿದೆ. ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡುತ್ತಿರುವ ಆರ್‌ಸಿಬಿ ಈ ರೀತಿಯ ಪ್ರದರ್ಶನದಿಂದ ಸಹಜವಾಗಿಯೇ ಆಘಾತಗೊಂಡಿದೆ. ಆದರೆ ಪ್ರತಿಭಾನ್ವಿತ ಆಟಗಾರರ ಪಡೆಯನ್ನು ಹೊಂದಿರುವ ಫಾಫ್ ಬಳಗಕ್ಕೆ ಈ ಸೋಲಿನಿಂದ ಹೊರಬರುವುದು ದೊಡ್ಡ ಸಂಗತಿಯಲ್ಲ.

ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸವಾಲೆಸೆಯುತ್ತಿರುವುದು ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ. ಆರ್‌ಆರ್ ಪಡೆ ಕೂಡ ಅದ್ಭಯತ ಲಯದಲ್ಲಿದ್ದು ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡಿಕೊಂಡು ಬಂದಿದೆ. ಅತ್ಯುತ್ತಮ ಆಟಗಾರರ ದೊಡ್ಡ ಬಳಗವನ್ನು ಹೊಂದಿದೆ ರಾಜಸ್ಥಾನ್ ರಾಯಲ್ಸ್. ಹೀಗಾಗಿ ಈ ಸವಾಲು ಕೂಡ ಆರ್‌ಸಿಬಿಗೆ ಕಠಿಣವಾಗಿರುವುದರಲ್ಲಿ ಅನುಮಾನವಿಲ್ಲ.

ರಾಜಸ್ಥಾನ್ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳುರು ತಂಡಗಳು ಈ ಬಾರಿಯ ಟೂರ್ನಿಯಲ್ಲಿ ಎರಡನೇ ಬಾರಿ ಮುಖಾಮುಖಿಯಾದಂತಾಗುತ್ತದೆ. ಮನೊದಲ ಮುಖಾಮುಖಿಯಲ್ಲಿ ಆರ್‌ಸಿಬಿ ಪಡೆ ಭರ್ಜರಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ ಆ ಪ್ರದರ್ಶನವನ್ನು ಮತ್ತೊಮ್ಮೆ ಪ್ರದರ್ಶಿಸುವ ಇರಾದೆಯಲ್ಲಿದೆ.

ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಹಿಂದಿನ ಮುಖಾಮುಖಿಯಲ್ಲಿ ಆರ್‌ಆರ್ ಪಡೆ ಮೊದಲಿಗೆ ಬ್ಯಾಟಿಂಗ್ ನಡೆಸಿತ್ತು. ಜೋಸ್ ಬಟ್ಲರ್ ಅವರ ಅಬ್ಬರದ 70 ರನ್‌ಗಳ ಕೊಡುಗೆಯ ಹೊರತಾಗಿಯೂ ಆರ್‌ಆರ್ ಆ ಪಂದ್ಯದಲ್ಲಿ 169 ರನ್‌ಗಳನ್ನು ಗಳಿಸಲು ಸಾಧ್ಯವಾಗಿತ್ತು. ಇದನ್ನು ಬೆನ್ನಟ್ಟಿದ ಆರ್‌ಸಿಬಿ ದಿನೇಶ್ ಕಾರ್ತಿಕ್ ಹಾಗೂ ಹರ್ಷಲ್ ಪಟೇಲ್ ಅವರ ಅದ್ಭುತ ಹೋರಾಟದ ನೆರವಿನಿಂದಾಗಿ ಭರ್ಜರಿಯಾಗಿ ಗೆದ್ದು ಬೀಗಿತ್ತು. ಈ ಮೂಲಕ ಆರ್‌ಸಿಬಿ ಈ ಬಾರಿಯ ಟೂರ್ನಿಯಲ್ಲಿ ಆರ್‌ಆರ್ ವಿರುದ್ಧ ಮೊದಲ ಪಂದ್ಯದಲ್ಲಿ ಮುನ್ನಡೆ ಪಡೆದಂತಾಗಿದೆ.

ರಾಜಸ್ಥಾನ್ ರಾಯಲ್ಸ್ ತಂಡ ಕಳೆದ ಎರಡು ಪಂದ್ಯಗಳಲ್ಲಿ ಸತತ ಗೆಲುವು ಸಾಧಿಸಿ ಲಯದಲ್ಲಿದೆ. ಅದರಲ್ಲೂ ಆರಂಭಿಕ ಆಟಗಾರ ಜೋಸ್ ಬಟ್ಲರ್ ಅಮೋಘ ಫಾರ್ಮ್‌ನಲ್ಲಿರುವುದು ತಂಡದ ಸಕಾರಾತ್ನ ಅಂಶವಾಗಿದೆ. ಬೌಲಿಂಗ್ ವಿಭಾಗ ಕೂಡ ನೆರವು ನೀಡುತ್ತಿರುವುದು ಮತ್ತೊಂದು ಪ್ರಮುಖ ಅಂಶವಾಗಿದೆ.

ರಾಜಸ್ಥಾನ್ ರಾಯಲ್ಸ್ ಸಂಪೂರ್ಣ ಸ್ಕ್ವಾಡ್: ಸಂಜು ಸ್ಯಾಮ್ಸನ್ (ನಾಯಕ), ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಶಿಮ್ರಾನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಹಾಲ್, ರಿಯಾನ್ ಪರಾಗ್, ಕೆಸಿ ಕಾರಿಯಪ್ಪ, ನವದೀಪ್ ಸೈನಿ, ಓಬೇದ್ ಮೆಕಾಯ್, ಅನುನಯ್ ಸಿಂಗ್, ಕುಲದೀಪ್ ಸೇನ್, ಕರುಣ್ ನಾಯರ್, ಧ್ರುವ್ ಜುರೆಲ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಶುಭಂ ಗರ್ವಾಲ್, ಜೇಮ್ಸ್ ನೀಶಮ್, ನಾಥನ್ ಕೌಲ್ಟರ್-ನೈಲ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಡೇರಿಲ್ ಮಿಚೆಲ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಪೂರ್ಣ ಸ್ಕ್ವಾಡ್: ಫಾಫ್ ಡು ಪ್ಲೆಸಿಸ್ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ರಜತ್ ಪಾಟಿದಾರ್, ಅನುಜ್ ರಾವತ್, ವಿರಾಟ್ ಕೊಹ್ಲಿ, ಶೆರ್ಫೇನ್ ರುದರ್‌ಫೋರ್ಡ್, ಚಾಮ ವಿ ಮಿಲಿಂದ್, ಶಹಬಾಜ್ ಅಹ್ಮದ್, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಆಕಾಶ್ ದೀಪ್, ಸಿದ್ದಾರ್ಥ್ ಕೌಲ್, ಕರ್ಣ್ ಶರ್ಮಾ, ಡೇವಿಡ್ ವಿಲ್ಲಿ, ಜೋಶ್ ಹೇಜಲ್‌ವುಡ್, ಮಹಿಪಾಲ್ ಲೊಮ್ರೋರ್, ಫಿನ್ ಅಲೆನ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್

Story first published: Tuesday, April 26, 2022, 9:43 [IST]
Other articles published on Apr 26, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+