IPL 2022: RCB vs SRH; ಪಂದ್ಯದ ಟಾಸ್ ವರದಿ ಮತ್ತು ಪ್ಲೇಯಿಂಗ್ ಇಲೆವೆನ್

ಐಪಿಎಲ್ 2022ರ ಸೀಸನ್‌ನ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ಭಾನುವಾರ ಸೆಣಸಾಟ ನಡೆಸುತ್ತಿವೆ.
ಇಂದು ಡಬಲ್ ಹೆಡ್ಡರ್ ಪಂದ್ಯಗಳು ನಡೆಯುತ್ತಿದ್ದು, ಮೊದಲಿಗೆ ಆರ್‌ಸಿಬಿ ಹಾಗೂ ಎಸ್‌ಆರ್‌ಎಚ್ ತಂಡಗಳು ಮುಖಾಮುಖಿಯಾಗಿವೆ. ಆರ್‌ಸಿಬಿ ತಂಡದ ಆಟಗಾರರು ಹಸಿರು ಜೆರ್ಸಿ ಧರಿಸಿ ಕಣಕ್ಕಿಳಿಯಲಿದ್ದಾರೆ.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಕೇನ್ ವಿಲಿಯಮ್ಸನ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡ ಬೌಲಿಂಗ್ ದಾಳಿ ನಡೆಸಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಪಂದ್ಯದಲ್ಲಿ ಯಾವುದೇ ಬದಲಾವಣೆಯಿಲ್ಲದೆ ಕಣಕ್ಕಿಳಿಯುತ್ತಿದೆ. ಆದರೆ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಇಂದು ಒಂದು ಬದಲಾವಣೆ ಮಾಡಿಕೊಳ್ಳಲಾಗಿದೆ. ಕನ್ನಡಿಗ ಕರುಣ್ ನಾಯರ್ ಆಡುವ ಬಳಗದಿಂದ ಹೊರಬಿದ್ದಿದ್ದಾರೆ. ಅವರ ಸ್ಥಾನದಲ್ಲಿ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಆಡುವ ಬಳಗದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್
ಬೆಂಚ್:
ಸಿದ್ದಾರ್ಥ್ ಕೌಲ್, ಕರ್ಣ್ ಶರ್ಮಾ, ಡೇವಿಡ್ ವಿಲ್ಲಿ, ಜೇಸನ್ ಬೆಹ್ರೆಂಡಾರ್ಫ್, ಚಾಮ ವಿ ಮಿಲಿಂದ್, ರಜತ್ ಪಾಟಿದಾರ್, ಮಹಿಪಾಲ್ ಲೊಮ್ರೋರ್, ಫಿನ್ ಅಲೆನ್, ಶೆರ್ಫೇನ್ ರುದರ್ಫೋರ್ಡ್, ಆಕಾಶ್ ದೀಪ್, ಅನೀಶ್ವರ್ ಗೌತಮ್
ಸನ್‌ರೈರ್ಸ್ ಹೈದರಾಬಾದ್ ಆಡುವ ಬಳಗ:
ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್ (ನಾಯಕ), ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಶಶಾಂಕ್ ಸಿಂಗ್, ಜಗದೀಶ ಸುಚಿತ್, ಭುವನೇಶ್ವರ್ ಕುಮಾರ್, ಕಾರ್ತಿಕ್ ತ್ಯಾಗಿ, ಫಜಲ್ಹಕ್ ಫಾರೂಕಿ, ಉಮ್ರಾನ್ ಮಲಿಕ್,
ಬೆಂಚ್:
ಸೀನ್ ಅಬಾಟ್, ರವಿಕುಮಾರ್ ಸಮರ್ಥ್, ವಾಷಿಂಗ್ಟನ್ ಸುಂದರ್, ಶ್ರೇಯಸ್ ಗೋಪಾಲ್, ಗ್ಲೆನ್ ಫಿಲಿಪ್ಸ್, ವಿಷ್ಣು ವಿನೋದ್, ಪ್ರಿಯಮ್ ಗಾರ್ಗ್, ಕಾರ್ತಿಕ್ ತ್ಯಾಗಿ, ರೊಮಾರಿಯೋ ಶೆಫರ್ಡ್, ಫಜಲ್ಹಕ್ ಫಾರೂಕಿ, ಅಬ್ದುಲ್ ಸಮದ್, ಸೌರಭ್ ದುಬೆ
ಈ ಋತುವಿನಲ್ಲಿ ಆರ್‌ಸಿಬಿ ಮತ್ತು ಎಸ್‌ಆರ್‌ಎಚ್ ನಡುವೆ ಈ ಮೊದಲು ಮುಖಾಮುಖಿಯಾಗಿತ್ತು. ಆ ಪಂದ್ಯದಲ್ಲಿ ಆರ್‌ಸಿಬಿ ತಂಡ ಹೀನಾಯವಾಗಿ ಸೋತಿತ್ತು. ಮೊದಲು ಬ್ಯಾಟ್ ಮಾಡಿದ್ದ ಆರ್‌ಸಿಬಿ 16.1 ಓವರ್‌ಗಳಲ್ಲಿ ಕೇವಲ 69 ರನ್‌ಗಳಿಗೆ ಆಲೌಟ್ ಆಗಿತ್ತು. ಇದನ್ನು ಬೆನ್ನತ್ತಿದ ಎಸ್‌ಆರ್‌ಎಚ್ ತಂಡ 8 ಓವರ್‌ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 72 ರನ್ ಗಳಿಸಿ ಗೆಲುವಿನ ಕೇಕೆ ಹಾಕಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications