For Quick Alerts
ALLOW NOTIFICATIONS  
For Daily Alerts
 

ನಮ್ಮ ಬಳಿ ಐಪಿಎಲ್‌ನ ಇಬ್ಬರು ಶ್ರೇಷ್ಠ ಸ್ಪಿನ್ನರ್‌ಗಳಿದ್ದಾರೆ: ಆರ್‌ಆರ್ ಕೋಚ್ ಸಂಗಕ್ಕರ ಹೇಳಿಕೆ

IPL 2022: RR coach Sangakkara confident about team we have two best spinners of the IPL

15ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ತಂಡಗಳು ಅಂತಿಮ ಹಂತದ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದೆ. ಎಲ್ಲಾ ತಂಡಗಳ ಬಹುತೇಕ ಆಟಗಾರರು ಈಗಾಗಲೇ ಸ್ಕ್ವಾಡ್ ಸೇರಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಹೆಡ್ ಕೋಚ್ ಕುಮಾರ ಸಂಗಕ್ಕರ ತಮ್ಮ ತಂಡ ಬಲಿಷ್ಠವಾಗಿದೆ ಎಂದು ಅಭಿಪ್ರಾಯಪಟ್ಟಿದ್ದು ಐಪಿಎಲ್ ಟೂರ್ನಿಯ ಇಬ್ಬರು ಶ್ರೇಷ್ಠ ಸ್ಪಿನ್ನರ್‌ಗಳು ನಮ್ಮ ತಂಡದಲ್ಲಿದ್ದಾರೆ, ತಮ್ಮ ಮ್ಯಾನೇಜ್‌ಮೆಂಟ್ ಬಲಿಷ್ಠ ತಂಡವನ್ನು ಕಟ್ಟಿಕೊಳ್ಳುವಲ್ಲಿ ಸಫಲವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

"ನಮ್ಮ ತಂಡಕ್ಕೆ ಸಂಬಂಪಟ್ಟಂತೆ ಆಫ್-ಸೀಸನ್‌ನಲ್ಲಿ ನಾವು ಮತ್ತಷ್ಟು ಸಿದ್ಧತೆಯನ್ನು ಮಾಡಿಕೊಳ್ಳಬೇಕಿದೆ ಎಂಬ ಅರಿವು ನಮಗಿದೆ. ನಾವು ಹೆಚ್ಚಿನ ಗಮನ ನೀಡಬೇಕಾಗಿರುವ ಪ್ರಮುಖ ಕ್ಷೇತ್ರಗಳನ್ನು ಗುರುತಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಹರಾಜಿನಲ್ಲಿ ಆಟಗಾರರನ್ನು ಆಯ್ಕೆಮಾಡುವಾಗ ಸರಿಯಾದ ಹಾದಿಯಲ್ಲಿ ನಡೆದಿದ್ದೇವೆ ಎಂದು ನಾನು ಭಾವಿಸುತ್ತೇನೆ. ಅಂದುಕೊಂಡಿದ್ದ ಆಟಗಾರರನ್ನು ಸೇರ್ಪಡೆಗೊಳಿಸುವಲ್ಲಿ ಬಹುತೇಕ ಯಶಸ್ವಿಯಾಗಿದ್ದೇವೆ. ಈ ರೋಚಕ ಮತ್ತು ಬಲಿಷ್ಠ ತಂಡವನ್ನು ಒಗ್ಗೂಡಿಸಲು ಫ್ರಾಂಚೈಸಿ ಅದ್ಭುತವಾಗಿ ಕಾರ್ಯನಿರ್ವಹಿಸಿದೆ" ಎಂದು ಕುಮಾರ್ ಸಂಗಕ್ಕರ ತಂಡದ ಸಾಮರ್ಥ್ಯದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಟ್ರೋಫಿ ಗೆಲ್ಲುವುದು ಮತ್ತು ಉತ್ತಮ ಕ್ರಿಕೆಟ್ ಆಡುವುದು ಈ ಬಾರಿಯ ಐಪಿಎಲ್‌ನಲ್ಲಿ ರಾಯಲ್ಸ್ ತಂಡದ ಉದ್ದೇಶವಾಗಿದೆ ಎಂದು ಸಂಗಕ್ಕರ ಹೇಳಿದರು. "ನಾವು ನಮ್ಮದೇ ಆದ ಕಾರ್ಯಕ್ಷಮತೆಯ ಸಾಮರ್ಥ್ಯವನ್ನು ಹೊಂದಿದ್ದೇವೆ. ಪ್ರತಿ ಪಂದ್ಯದ ನಂತರ ನಾವು ಪ್ರತಿಯೊಬ್ಬ ವ್ಯಕ್ತಿಯ ಮತ್ತು ತಂಡದ ಪ್ರದರ್ಶನವನ್ನು ಹೊಂದಾಣಿಕೆ ಮಾಡಲಿದ್ದೇವೆ ಎಂದು ಅವರು ಹೇಳಿಕೆ ನೀಡಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ಸಂಗಕ್ಕರ 2008ರ ಐಪಿಎಲ್ ಉದ್ಘಾಟನಾ ಆವೃತ್ತಿಯಲ್ಲಿ ರಾಯಲ್ಸ್‌ಗೆ ತನ್ನ ಏಕೈಕ ಐಪಿಎಲ್ ಟ್ರೋಫಿಯನ್ನು ತಂದುಕೊಟ್ಟ ಶೇನ್ ವಾರ್ನ್‌ಗೆ ಗೌರವ ಸಲ್ಲಿಸಿದರು. "ಅವರ ಅಗಲಿಕೆ ಕ್ರಿಕೆಟ್ ಜಗತ್ತಿಗೆ ಆದ ಬಹು ದೊಡ್ಡ ನಷ್ಟ. ಪ್ರಪಂಚದಾದ್ಯಂತ ಇರುವ ಕ್ರಿಕೆಟಿಗರಿಗೆ ಆದ ನಷ್ಟ ಅದು. ಯಾಕೆಂದರೆ ಅವರು ಅಷ್ಟು ಅದ್ಭುತವಾದ ಜ್ಞಾನವನ್ನು ಹೊಂದಿದ್ದಂತಹ ಆಟಗಾರ ಎಂದು ಸಂಗಕ್ಕರ ಹೇಳಿದರು. "ಅವರು ಬಹಳ ಉತ್ತಮ ಸ್ನೇಹಿತರಾಗಿದ್ದರು. ನಾನು ಅವರೊಂದಿಗೆ ಕಳೆದ ಸಮಯವನ್ನು ಉತ್ತಮವಾಗಿ ಆನಂದಿಸಿದ್ದೇನೆ. ಅವರನ್ನು ಎಲ್ಲರೂ ಮಿಸ್ ಮಾಡಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ" ಎಂದಿದ್ದಾರೆ ಕುಮಾರ್ ಸಂಗಕ್ಕರ.

ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ (ನಾಯಕ), ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೋಲ್ಟ್, ದೇವದತ್ ಪಡಿಕ್ಕಲ್, ಶಿಮ್ರೋನ್ ಹೆಟ್ಮೆಯರ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ರಿಯಾನ್ ಪರಾಗ್, ಕೆಸಿ ಕಾರಿಯಪ್ಪ, ನವದೀಪ್ ಸೈನಿ, ಓಬೇದ್ ಮೆಕಾಯ್, ಅನುನಯ್ ಸಿಂಗ್, ಕುಲದೀಪ್ ಸೇನ್, ಕರುಣ್ ನಾಯರ್, ಧ್ರುವ್ ಜುರೆಲ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಶುಭಂ ಗರ್ವಾಲ್, ಜೇಮ್ಸ್ ನೀಶಮ್, ನಾಥನ್ ಕೌಲ್ಟರ್-ನೈಲ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಡೇರಿಲ್ ಮಿಚೆಲ್

Story first published: Friday, March 18, 2022, 9:58 [IST]
Other articles published on Mar 18, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+