RR vs DC: ರಾಜಸ್ಥಾನ್ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ಗೆ ಭರ್ಜರಿ ಜಯ

ಪ್ರಸ್ತುತ ನಡೆಯುತ್ತಿರುವ 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 58ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದು, ರಾಜಸ್ಥಾನ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 8 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿದೆ.
ರಾಜಸ್ಥಾನ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 62 ವಿಕೆಟ್‌ಗಳ ಜಯ ದಾಖಲಿಸಿ ಅಂಕ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿ ಮುಂದುವರೆದಿದೆ. ಇನ್ನು ಈ ಪಂದ್ಯದಲ್ಲಿ ಸೋಲನ್ನು ಅನುಭವಿಸಿರುವ ರಾಜಸ್ಥಾನ ರಾಯಲ್ಸ್ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಐದನೇ ಪರಾಭವವನ್ನು ಕಂಡಿದೆ.
ಮೊದಲು ಬೌಲಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್, ರಾಜಸ್ಥಾನ ರಾಯಲ್ಸ್ ಬೃಹತ್ ಮೊತ್ತ ಗಳಿಸದಂತೆ ಹಿಡಿತ ಸಾಧಿಸಿತ್ತು. ಅದರಂತೆ ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಗೆಲುವು ದಾಖಲಿಸಿದರು.

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ ನಿಗದಿತ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 160 ರನ್ ಕಲೆಹಾಕಿದ್ದು, ಡೆಲ್ಲಿ ಕ್ಯಾಪಿಟಲ್ಸ್ ಗೆಲ್ಲಲು 161 ರನ್‌ಗಳ ಟಾರ್ಗೆಟ್ ನೀಡಿತ್ತು. ಈ ಗುರಿಯನ್ನು ಬೆನ್ನತ್ತುವಲ್ಲಿ ಸಫಲವಾದ ರಿಷಭ್ ಪಂತ್ ಬಳಗ 13.5 ಓವರ್‌ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 161 ರನ್‌ಗಳ ಗುರಿ ತಲುಪಿದರು.
ರಾಜಸ್ಥಾನ ರಾಯಲ್ಸ್ ಬ್ಯಾಟಿಂಗ್
ಮೊದಲು ಬ್ಯಾಟಿಂಗ್ ಮಾಡಿರುವ ರಾಜಸ್ಥಾನ ರಾಯಲ್ಸ್ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 160 ರನ್ ಕಲೆಹಾಕಿದ್ದು, ಡೆಲ್ಲಿ ಕ್ಯಾಪಿಟಲ್ಸ್ ಗೆಲ್ಲಲು 161 ರನ್‌ಗಳ ಟಾರ್ಗೆಟ್ ನೀಡಿತ್ತು.
ರಾಜಸ್ಥಾನ ರಾಯಲ್ಸ್ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಮತ್ತು ಜಾಸ್ ಬಟ್ಲರ್ ಮೊದಲ ವಿಕೆಟ್‌ಗೆ ಉತ್ತಮ ಮೊತ್ತ ಕಲೆ ಹಾಕುವಲ್ಲಿ ಎಡವಿದರು. 2.5 ಓವರ್‌ಗಳಾಗಿದ್ದಾಗ ಜಾಸ್ ಬಟ್ಲರ್ 11 ಎಸೆತಗಳಲ್ಲಿ 7 ರನ್ ಬಾರಿಸಿ ಔಟಾದರು. ಮೂರನೇ ಕ್ರಮಾಂಕದಲ್ಲಿ ಬಡ್ತಿ ಪಡೆದು ಬಂದ ಆರ್. ಅಶ್ವಿನ್ 38 ಎಸೆತಗಳಲ್ಲಿ 50 ರನ್ ಕಲೆ ಹಾಕಿ ಔಟಾದರು. ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 19 ಎಸೆತಗಳಲ್ಲಿ 19 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.
ಇನ್ನುಳಿದಂತೆ ತಂಡದ ನಾಯಕ ಸಂಜು ಸ್ಯಾಮ್ಸನ್ 6 ರನ್ ಗಳಿಸಿ ಔಟಾದರೆ, ರಿಯಾನ್ ಪರಾಗ್ 5 ಎಸೆತಗಳಲ್ಲಿ 9 ರನ್ ಗಳಿಸಿ ಚೇತನ್ ಸಕರಿಯಾಗೆ ವಿಕೆಟ್ ಒಪ್ಪಿಸಿದರು. ದೇವದತ್ ಪಡಿಕ್ಕಲ್ 30 ಎಸೆತಗಳಲ್ಲಿ 48 ರನ್ ಗಳಿಸಿ ಔಟಾದರೆ, ರಸ್ಸೆ ವಾನ್ ಡೆರ್ ಡಸ್ಸೆನ್ 10 ಎಸೆತಗಳಲ್ಲಿ 12 ರನ್ ಗಳಿಸಿ ಅಜೇಯರಾಗುಳಿದರು.
ಹೀಗೆ ರಾಜಸ್ಥಾನ ರಾಯಲ್ಸ್ ತಂಡದ ಪರ ದೇವದತ್ ಪಡಿಕ್ಕಲ್, ಆರ್. ಅಶ್ವಿನ್ ಮತ್ತು ಯಶಸ್ವಿ ಜೈಸ್ವಾಲ್ ಹೊರತುಪಡಿಸಿ ಉಳಿದ ಯಾವುದೇ ಆಟಗಾರರು ಸಹ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುವಲ್ಲಿ ವಿಫಲರಾದರು.

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಬೌಲರ್ ಅನ್ರಿಚ್ ನಾರ್ಟ್ಜೆ ಈ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿ 39 ರನ್ ನೀಡಿ 2 ವಿಕೆಟ್ ಪಡೆದರು. ಇನ್ನುಳಿದಂತೆ ಚೇತನ್ ಸಕರಿಯಾ, ಮಿಚೆಲ್ ಮಾರ್ಷ್ ಕೂಡ ತಲಾ ಎರಡು ವಿಕೆಟ್ ಪಡೆದಿದ್ದರು.
ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್:
ರಾಜಸ್ಥಾನ ರಾಯಲ್ಸ್ ನೀಡಿದ ಉತ್ತಮ ಮೊತ್ತದ ಗುರಿಯನ್ನು ಸುಲಭವಾಗಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಮಿಚೆಲ್ ಮಾರ್ಷ್ ಮತ್ತು ಡೇವಿಡ್ ವಾರ್ನರ್ ಶತಕದ ಜೊತೆಯಾಟ ನೀಡಿದರು. ಮಿಚೆಲ್ ಮಾರ್ಷ್ 62 ಎಸೆತಗಳಲ್ಲಿ 89 ರನ್ ಬಾರಿಸಿ ಔಟಾದರೆ, ಡೇವಿಡ್ ವಾರ್ನರ್ 41 ಎಸೆತಗಳಲ್ಲಿ 52 ರನ್ ಗಳಿಸಿ ಅಜೇಯರಾಗುಳಿದರು. ಆರಂಭಿಕ ಬ್ಯಾಟ್ಸ್‌ಮನ್ ಶ್ರೀಕರ್ ಭರತ್ ಸೊನ್ನೆ ಸುತ್ತಿದರೆ, ನಾಯಕ ರಿಷಭ್ ಪಂತ್ ಕೊನೆಯಲ್ಲಿ 13 ರನ್ ಗಳಿಸಿ ತಂಡವನ್ನು ಗೆಲುವಿನ ಗುರಿ ತಲುಪಿಸಿದರು.
ರಾಜಸ್ಥಾನ ರಾಯಲ್ಸ್ ಬೌಲಿಂಗ್
ರಾಜಸ್ಥಾನ ರಾಯಲ್ಸ್ ತಂಡದ ಪರ ಟ್ರೆಂಟ್ ಬೌಲ್ಟ್ ಹಾಗೂ ಯುಜ್ವೇಂದ್ರ ಚಹಾಲ್ 1 ವಿಕೆಟ್ ಪಡೆದರು. ಉಳಿದಂತೆ ಎಲ್ಲ ಬೌಲರ್‌ಗಳು ದುಬಾರಿಯಾದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications