
ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಅಮೋಘ ಫಾರ್ಮ್‌ನಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ಜೋಸ್ ಬಟ್ಲರ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧಧ ಪಂದ್ಯದಲ್ಲಿಯೂ ಭರ್ಜರಿ ಶತಕ ದಾಖಲಿಸಿದ್ದಾರೆ. ಈ ಮೂಲಕ ಈ ಐಪಿಎಲ್‌ನಲ್ಲಿ ಜೋಸ್ ಬಟ್ಲರ್ ಮೂರನೇ ಶತಕ ಸಿಡಿಸಿದಂತಾಗಿದೆ. ಇನ್ನು ಒಟ್ಟಾರೆ ಐಪಿಎಲ್‌ನಲ್ಲಿ ಬಟ್ಲರ್ ಅವರ 4ನೇ ಶತಕವು ಇದಾಗಿದೆ. ಜೋಸ್ ಬಟ್ಲರ್ ಈ ಭರ್ಜರಿ ಶತಕದ ಸಹಾಯದಿಂದ ರಾಜಸ್ಥಾನ್ ರಾಯಲ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 222 ರನ್ ಗಳಿಸಿದೆ. ಈ ಮೂಲಕ ಈ ಬಾರಿಯ ಐಪಿಎಲ್‌ನ ಬೃಹತ್ ಗುರಿಯನ್ನು ನೀಡಿದೆ.
ರಾಜಸ್ಥಾನ್ ರಾಯಲ್ಸ್ ನೀಡಿದ ಬೃಹತ್ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಅಂತಿಮ ಹಂತದವರೆಗೂ ತನ್ನ ಹೋರಾಟವನ್ನು ಸಡಿಲಗೊಳಿಸಲಿಲ್ಲ. ಅಂತಿಮ ಓವರ್‌ನಲ್ಲಿ 36 ರನ್‌ಗಳಿಸುವ ಅಸಾಧ್ಯ ಗುರಿ ಮುಂದಿದ್ದರೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರ ಪೋವೆಲ್ ಅಂತಿಮ ಓವರ್‌ನ ಆರಂಭಿಕ ಮೂರು ಎಸೆತಗಳನ್ನು ಭರ್ಜರಿಯಾಗಿ ಸಿಕ್ಸರ್‌ಗೆ ಅಟ್ಟಿದ್ದರು. ಹೀಗಾಗಿ ಐಪಿಎಲ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಲಿದೆಯಾ ಎಂಬ ಕುತೂಹಲ ಅಭಿಮಾನಿಗಳನ್ನು ಮೂಡಿತ್ತು. ಅಂತಿಮ ಮೂರು ಎಸೆತಗಳನ್ನು ಉತ್ತಮವಾಗಿ ಮಾಡಿದ ಆರ್ಆರ್ ವೇಗಿ ಒಬೆಡ್ ಮೆಕ್‌ಕಾಯ್ ಮೂರು ಎಸೆತಗಳಲ್ಲಿ ಕೂಡ ನಿಯಂತ್ರಣ ಸಾಧಿಸಿದರು. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಗೆಲುವು ಸಾಧಿಸಿದೆ.
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಪೃಥ್ವಿ ಶಾ, ಡೇವಿಡ್ ವಾರ್ನರ್, ರಿಷಬ್ ಪಂತ್ (ನಾಯಕ & ವಿಕೆಟ್ ಕೀಪರ್), ರೋವ್ಮನ್ ಪೊವೆಲ್, ಸರ್ಫರಾಜ್ ಖಾನ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮುಸ್ತಾಫಿಜುರ್ ರೆಹಮಾನ್, ಖಲೀಲ್ ಅಹ್ಮದ್
ಬೆಂಚ್: ಮನ್‌ದೀಪ್ ಸಿಂಗ್, ಶ್ರೀಕರ್ ಭರತ್, ಲುಂಗಿ ಎನ್‌ಗಿಡಿ, ಅಶ್ವಿನ್ ಹೆಬ್ಬಾರ್, ಪ್ರವೀಣ್ ದುಬೆ, ಅನ್ರಿಚ್ ನೋರ್ಟ್ಜೆ, ಕಮಲೇಶ್ ನಾಗರಕೋಟಿ, ಚೇತನ್ ಸಕರಿಯಾ, ರಿಪಾಲ್ ಪಟೇಲ್, ಯಶ್ ಧುಲ್, ವಿಕ್ಕಿ ಓಸ್ತ್ವಾಲ್
ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮೆಯರ್, ಕರುಣ್ ನಾಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಓಬೇದ್ ಮೆಕಾಯ್, ಯುಜ್ವೇಂದ್ರ ಚಹಾಲ್
ಬೆಂಚ್: ನವದೀಪ್ ಸೈನಿ, ಕೆಸಿ ಕಾರಿಯಪ್ಪ, ಡೆರಿಲ್ ಮಿಚೆಲ್, ಜೇಮ್ಸ್ ನೀಶಮ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಯಶಸ್ವಿ ಜೈಸ್ವಾಲ್, ಅನುನಯ್ ಸಿಂಗ್, ಕುಲದೀಪ್ ಸೇನ್, ಧ್ರುವ್ ಜುರೆಲ್, ಶುಭಂ ಗರ್ವಾಲ್