RR vs DC: ಐಪಿಎಲ್‌ನಲ್ಲಿ ಚೊಚ್ಚಲ ಅರ್ಧಶತಕ ಸಿಡಿಸಿದ ರವಿಚಂದ್ರನ್ ಅಶ್ವಿನ್

ಮುಂಬೈನ ಡಿ.ವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ತಂಡದ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್ ಚೊಚ್ಚಲ ಐಪಿಎಲ್ ಅರ್ಧಶತಕ ದಾಖಲಿಸುವ ಮೂಲಕ ಅಬ್ಬರಿಸಿದ್ದಾರೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ತಾನ್ ರಾಯಲ್ಸ್ ಪರ ಇನ್‌ಫಾರ್ಮ್ ಬ್ಯಾಟ್ಸ್‌ಮನ್ ಜಾಸ್ ಬಟ್ಲರ್ ಕೇವಲ 7ರನ್‌ಗೆ ಚೇತನ್ ಸಕಾರಿಯಾಗೆ ವಿಕೆಟ್ ಒಪ್ಪಿಸಿದ್ರು. ಈ ಮೂಲಕ ರಾಜಸ್ತಾನ್ ರಾಯಲ್ಸ್ ಆರಂಭಿಕ ಆಘಾತ ಅನುಭವಿಸಿತು. ಇದ್ರ ಬೆನ್ನಲ್ಲೇ ಯಶಸ್ವಿ ಜೈಸ್ವಾಲ್ 19ರನ್‌ಗಳಿಸಿ ವಿಕೆಟ್ ಒಪ್ಪಿಸಿದ್ರು.

ಈ ವೇಳೆಯಲ್ಲಿ ಬ್ಯಾಟಿಂಗ್‌ನಲ್ಲಿ ಬಡ್ತಿ ಪಡೆದು ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಇಳಿದ ಅಶ್ವಿನ್ ಕೊಟ್ಟ ಅವಕಾಶದಲ್ಲಿ ಮಿಂಚಿನ ಆಟವಾಡಿದರು. 38 ಎಸೆತಗಳಲ್ಲಿ 50 ರನ್ ಸಿಡಿಸಿದ ಅಶ್ವಿನ್ ಇನ್ನಿಂಗ್ಸ್‌ನಲ್ಲಿ 4 ಬೌಂಡರಿ ಮತ್ತು 2 ಭರ್ಜರಿ ಸಿಕ್ಸರ್‌ಗಳಿದ್ದವು. 131.58ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ ಅಶ್ವಿನ್ ಮಿಚೆಲ್ ಮಾರ್ಷ್ ಬೌಲಿಂಗ್‌ನಲ್ಲಿ ಡೇವಿಡ್ ವಾರ್ನರ್‌ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿಕೊಂಡರು. ಇದು ಐಪಿಎಲ್ ಇತಿಹಾಸದಲ್ಲಿ ಅಶ್ವಿನ್‌ರ ಮೊಟ್ಟ ಮೊದಲ ಅರ್ಧಶತಕವಾಗಿದೆ.
ಎರಡನೇ ವಿಕೆಟ್‌ಗೆ ಯಶಸ್ವಿ ಜೈಸ್ವಾಲ್ ಜೊತೆಗೆ 43 ರನ್‌ಗಳ ಜೊತೆಯಾಟ ಹಾಗೂ ಮೂರನೇ ವಿಕೆಟ್‌ಗೆ ದೇವದತ್ ಪಡಿಕ್ಕಲ್ ಜೊತೆಗೆ 53 ರನ್‌ಗಳ ಜೊತೆಯಾಟದಿಂದಾಗಿ ರಾಜಸ್ತಾನ್ ರಾಯಲ್ಸ್ 15 ಓವರ್‌ಗಳ ಒಳಗೆ 100ರ ಗಡಿದಾಟಲು ಸಾಧ್ಯವಾಯಿತು. ಅಶ್ವಿನ್ ತಮ್ಮ ಚೊಚ್ಚಲ ಅರ್ಧಶತಕ ಸಿಡಿಸಿದ ನಂತರದ ಎಸೆತದಲ್ಲೇ ಔಟಾದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications