GT vs RR: ಗೆಲುವಿನ ಲಯಕ್ಕೆ ಮರಳಲು ಪಣತೊಟ್ಟ ಟೈಟನ್ಸ್‌ಗೆ ರಾಯಲ್ಸ್ ಸವಾಲು!

ಐಪಿಎಲ್‌ನಲ್ಲಿ ಇಂದು ಗುಜರಾತ್ ಟೈಟನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ಹಣಾಹಣಿ ನಡೆಯಲಿದೆ. ಎರಡು ತಂಡಗಳು ಕೂಡ ಉತ್ತಮ ಆರಂಭವನ್ನು ಪಡೆದಿದ್ದು ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ. ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುನ್ನಡೆಸುತ್ತಿದ್ದರೆ ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟನ್ಸ್ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಈ ಎರಡು ತಂಡಗಳ ನಡುವಿನ ಹಣಾಹಣಿ ಸಾಕಷ್ಟು ಕುತೂಹಲ ಮೂಡಿಸಿದೆ. ಪ್ರಸ್ತುತ ರಾಜಸ್ಥಾನ್ ರಾಯಲ್ಸ್ ತಂಡ ನಾಲ್ಕು ಪಂದ್ಯಗಳಲ್ಲಿ ಮೂರು ಗೆಲುವು ಸಾಧಿಸಿದ್ದು ನೆಟ್‌ರನ್‌ರೇಟ್‌ನಲ್ಲಿ ಮುಂದಿರುವ ಕಾರಣ ಅಗ್ರಸ್ಥಾನದಲ್ಲಿದೆ. ಗುಜರಾತ್ ಟೈಟನ್ಸ್ ತಂಡ ಕೂಡ ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರು ಗೆಲುವು ಸಾಧಿಸಿದೆ. ಆದರೆ ನೆಟ್‌ರನ್‌ರೇಟ್‌ನಲ್ಲಿ ಹಿಂದುಳಿದಿರುವ ಕಾರಣ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.
ಅಹ್ಮದಾಬಾದ್ ಮೂಲದ ಗುಜರಾತ್ ಟೈಟನ್ಸ್ ತಂಡ ಆರಂಭಿಕ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದ ಬಳಿಕ ಕಳೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಭಾರೀ ಸೋಲು ಅನುಭವಿಸಿತ್ತು. ಈಗ ಬಲಿಷ್ಠ ಆಟಗಾರರ ಪಡೆಯನ್ನು ಹೊಂದಿರುವ ರಾಜಸ್ಥಾನ ರಾಯಲ್ಸ್ ವಿರುದ್ಧ ಕಣಕ್ಕಿಳಿಯುವ ಕಾರಣ ಸಾಕಷ್ಟು ಪೈಪೋಟಿಯನ್ನು ಎದುರಿಸಲಿದೆ.

ಈ ಪಂದ್ಯ ಎರಡೂ ತಂಡಗಳ ಬಲಿಷ್ಠ ವೇಗಿಗಳ ಕದನವಾಗುವುದರಲ್ಲಿ ಅನುಮಾನವಿಲ್ಲ. ಜಿಟಿ ಪಡೆಯಲ್ಲಿ ಲೂಕಿ ಫರ್ಗ್ಯೂಸನ್ ಹಾಗೂ ಮೊಹಮ್ಮದ್ ಶಮಿ ಇದ್ದರೆ ಟ್ರೆಂಟ್ ಬೋಲ್ಟ್ ಹಾಗೂ ಪ್ರಸಿದ್ಧ್ ಕೃಷ್ಣ ರಾಜಸ್ಥಾನ್ ರಾಯಲ್ಸ್ ಪರವಾಗಿ ಕಣಕ್ಕಿಳಿಯುತ್ತಿದ್ದಾರೆ. ಇದು ಈ ಎರಡು ತಂಡಗಳ ನಡುವಿನ ಕದನ ಕುತೂಹಲವನ್ನು ಹೆಚ್ಚಿಸಿದೆ.
ಸಂಭಾವ್ಯ ತಂಡಗಳು: ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ಕುಲದೀಪ್ ಸೇನ್, ರವಿಚಂದ್ರನ್ ಅಶ್ವಿನ್, ಪ್ರಸಿದ್ಧ್ ಕೃಷ್ಣ, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಾಹಲ್
ಗುಜರಾತ್ ಟೈಟಾನ್ಸ್: ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ದರ್ಶನ್ ನಲ್ಕಂಡೆ, ಲಾಕಿ ಫರ್ಗುಸನ್, ಮೊಹಮ್ಮದ್ ಶಮಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications