
ಐಪಿಎಲ್ 15ನೇ ಆವೃತ್ತಿಯ 24ನೇ ಪಂದ್ಯದಲ್ಲಿ ಗುರುವಾರ ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಎರಡು ತಂಡಗಳು ಕೂಡ ಉತ್ತಮ ಆರಂಭವನ್ನು ಪಡೆದಿದ್ದು ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ. ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುನ್ನಡೆಸುತ್ತಿದ್ದರೆ ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟನ್ಸ್ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಈ ಎರಡು ತಂಡಗಳ ನಡುವಿನ ಹಣಾಹಣಿ ಸಾಕಷ್ಟು ಕುತೂಹಲ ಮೂಡಿಸಿದೆ. ಪ್ರಸ್ತುತ ರಾಜಸ್ಥಾನ್ ರಾಯಲ್ಸ್ ತಂಡ ನಾಲ್ಕು ಪಂದ್ಯಗಳಲ್ಲಿ ಮೂರು ಗೆಲುವು ಸಾಧಿಸಿದ್ದು ನೆಟ್‌ರನ್‌ರೇಟ್‌ನಲ್ಲಿ ಮುಂದಿರುವ ಕಾರಣ ಅಗ್ರಸ್ಥಾನದಲ್ಲಿದೆ. ಗುಜರಾತ್ ಟೈಟನ್ಸ್ ತಂಡ ಕೂಡ ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರು ಗೆಲುವು ಸಾಧಿಸಿದೆ. ಆದರೆ ನೆಟ್‌ರನ್‌ರೇಟ್‌ನಲ್ಲಿ ಹಿಂದುಳಿದಿರುವ ಕಾರಣ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.
ಅಹ್ಮದಾಬಾದ್ ಮೂಲದ ಗುಜರಾತ್ ಟೈಟನ್ಸ್ ತಂಡ ಆರಂಭಿಕ ಮೂರು ಪಂದ್ಯಗಳಲ್ಲಿ ಗೆಲವುಉ ಸಾಧಿಸಿದ ಬಳಿಕ ಕಳೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಭಾರೀ ಸೋಲು ಅನುಭವಿಸಿತ್ತು. ಈಗ ಬಲಿಷ್ಠ ಆಟಗಾರರ ಪಡೆಯನ್ನು ಹೊಂದಿರುವ ರಾಜಸ್ಥಾನ ರಾಯಲ್ಸ್ ವಿರುದ್ಧ ಕಣಕ್ಕಿಳಿಯುವ ಕಾರಣ ಸಾಕಷ್ಟು ಪೈಪೋಟಿಯನ್ನು ಎದುರಿಸಲಿದೆ.
ಸ್ಕ್ವಾಡ್‌ಗಳು: ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ (ನಾಯಕ), ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಶಿಮ್ರಾನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಹಾಲ್, ರಿಯಾನ್ ಪರಾಗ್, ಕೆಸಿ ಕಾರಿಯಪ್ಪ, ನವದೀಪ್ ಸೈನಿ, ಓಬೇದ್ ಮೆಕಾಯ್, ಅನುನಯ್ ಸಿಂಗ್, ಕುಲದೀಪ್ ಸೇನ್, ಕರುಣ್ ನಾಯರ್, ಧ್ರುವ್ ಜುರೆಲ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಶುಭಂ ಗರ್ವಾಲ್, ಜೇಮ್ಸ್ ನೀಶಮ್, ನಾಥನ್ ಕೌಲ್ಟರ್-ನೈಲ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಡೇರಿಲ್ ಮಿಚೆಲ್
ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ಶುಬ್ಮನ್ ಗಿಲ್, ರಶೀದ್ ಖಾನ್, ಮೊಹಮ್ಮದ್ ಶಮಿ, ಲಾಕಿ ಫರ್ಗುಸನ್, ಅಭಿನವ್ ಸದಾರಂಗನಿ, ರಾಹುಲ್ ತೆವಾಟಿಯಾ, ನೂರ್ ಅಹ್ಮದ್, ಆರ್ ಸಾಯಿ ಕಿಶೋರ್, ಡೊಮಿನಿಕ್ ಡ್ರೇಕ್ಸ್, ಜಯಂತ್ ಯಾದವ್, ವಿಜಯ್ ಶಂಕರ್, ದರ್ಶನ್ ನಲ್ಕಂಡೆ, ಯಶ್ ದಯಾಳ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಗುರುಕೀರತ್ ಸಿಂಗ್, ವರುಣ್ ಆರೋನ್, ಬಿ ಸಾಯಿ ಸುದರ್ಶನ್, ರಹಮಾನುಲ್ಲಾ ಗುರ್ಬಾಜ್
ಪಂದ್ಯದ ದಿನಾಂಕ, ಸಮಯ ಹಾಗೂ ಸ್ಥಳ: ಮುಂಬೈ ಇಂಡಿಯನ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯ ಏಪ್ರಿಲ್ 14 ರಂದು ಗುರುವಾರ ನಡೆಯಲಿದ್ದು ಸಂಜೆ 7:30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಮುಂಬೈನ ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.
ಪಿಚ್ ರಿಪೋರ್ಟ್: ಡಿವೈ ಪಾಟೀಲ್ ಕ್ರೀಡಾಂಗಣದ ಪಿಚ್ ವೇಗಿಗಳಿಗೆ ಉತ್ತಮ ಬೌನ್ಸ್ ನೀಡಲಿದೆ. ಆದರೆ ಈ ಕ್ರೀಡಾಂಗಣದಲ್ಲಿ ಬೃಹತ್ ಮೊತ್ತವನ್ನು ಗಳಿಸುವುದು ಬ್ಯಾಟರ್‌ಗಳಿಗೆ ಸವಾಲಾಗಲಿದೆ. 160-170 ರನ್‌ಗಳನ್ನು ಇಲ್ಲಿ ರಕ್ಷಣೆ ಮಾಡಿಕೊಳ್ಳುವ ಅವಕಾಶವಿದೆ. ಬ್ಯಾಟ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಿಗೂ ಪಿಚ್ ನೆರವು ನೀಡುತ್ತಿದ್ದು ಮುಂದಿನ ಪಂದ್ಯದಲ್ಲಿಯೂ ಪಿಚ್ ಇದೇ ರೀತಿ ವರ್ತಿಸುವ ನಿರೀಕ್ಷೆಯಿದೆ.
ಸಂಭಾವ್ಯ ತಂಡಗಳು: ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ಕುಲದೀಪ್ ಸೇನ್, ರವಿಚಂದ್ರನ್ ಅಶ್ವಿನ್, ಪ್ರಸಿದ್ಧ್ ಕೃಷ್ಣ, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಾಹಲ್
ಗುಜರಾತ್ ಟೈಟಾನ್ಸ್: ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ದರ್ಶನ್ ನಲ್ಕಂಡೆ, ಲಾಕಿ ಫರ್ಗುಸನ್, ಮೊಹಮ್ಮದ್ ಶಮಿ