For Quick Alerts
ALLOW NOTIFICATIONS  
For Daily Alerts
 

RR vs KKR Preview: ಪ್ರಿವ್ಯೂ, ಸಂಭಾವ್ಯ ತಂಡ, ಪಿಚ್ ರಿಪೋರ್ಟ್, ಹವಾಮಾನ ವರದಿ

IPL 2022: RR vs KKR Preview, Predicted Playing 11, Pitch Report, And Weather Forecast

ಐಪಿಎಲ್ 15ನೇ ಆವೃತ್ತಿಯಲ್ಲಿ ಸೋಮವಾರ ಒಂದು ಪಂದ್ಯ ನಡೆಯಲಿದ್ದು ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯ ಈ ಬಾರಿಯ ಟೂರ್ನಿಯ 30ನೇ ಪಂದ್ಯವಾಗಿದೆ. ಎರಡು ತಂಡಗಳು ಕೂಡ ಅದ್ಭುತ ಆರಂಭವನ್ನು ಪಡೆದುಕೊಂಡಿದೆ. ಆದರೆ ಕೊಲ್ಕತ್ತಾ ನೈಟ್ ರೈಡರ್ಸ್ ಕಳೆದ ಎರಡು ಪಂದ್ಯಗಳಲ್ಲಿ ಸತತ ಎರಡು ಸೋಲು ಅನುಭವಿಸಿರುವುದು ತಂಡಕ್ಕೆ ಹಿನ್ನಡೆಯುಂಟು ಮಾಡಿದೆ. ಇತ್ತ ರಾಜಸ್ಥಾನ್ ರಾಯಲ್ಸ್ ತಂಡ ಕೂಡ ಅಂತಿಮ ಪಂದ್ಯದಲ್ಲಿ ಸೋಲು ಅನುಭವಿಸಿದ್ದು ಗೆಲುವಿನ ಲಯಕ್ಕೆ ಮರಳುವ ಪ್ರಯತ್ನದಲ್ಲಿದೆ.

ಶ್ರೇಯಸ್ ಐಯ್ಯರ್ ನೇತೃತ್ವದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಸಾಕಷ್ಟು ಅದ್ಭುತ ಆಟಗಾರರ ಪಡೆಯನ್ನು ಹೊಂದಿದ್ದು ಸೋಲಿನ ಸರಪಳಿ ಮುರಿದು ಮತ್ತೆ ಗೆಲುವಿನ ಹಾದಿಗೆ ಮರಳುವ ಉತ್ಸಾಹದಲ್ಲಿದೆ. ಟಿ20 ಮಾದರಿಗೆ ಹೇಳಿ ಮಾಡಿಸಿದ ಆಟಗಾರರ ದಂಡಿದ್ದರೂ ಸಾಂಘಿಕ ಪ್ರದರ್ಶನದ ಕೊರತೆ ತಂಡಕ್ಕೆ ಕಾಡುತ್ತಿದೆ. ಮತ್ತೊಂದೆಡೆ ರಾಜಸ್ಥಾನ್ ರಾಯಲ್ಸ್ ಐದು ಪಂದ್ಯಗಳಲ್ಲಿ ಮೂರು ಗೆಲುವು ಹಾಗೂ ಎರಡು ಸೋಲು ಅನುಭವಿಸಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಮತ್ತೆ ಅಂಕಪಟ್ಟಿಯಲ್ಲಿ ಉತ್ತಮ ಸ್ಥಾನ ಪಡೆಯುವ ಗುರಿಯಿಟ್ಟುಕೊಂಡಿದೆ.

ಸ್ಕ್ವಾಡ್‌ಗಳು: ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ (ನಾಯಕ), ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಶಿಮ್ರಾನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಹಾಲ್, ರಿಯಾನ್ ಪರಾಗ್, ಕೆಸಿ ಕಾರಿಯಪ್ಪ, ನವದೀಪ್ ಸೈನಿ, ಓಬೇದ್ ಮೆಕಾಯ್, ಅನುನಯ್ ಸಿಂಗ್, ಕುಲದೀಪ್ ಸೇನ್, ಕರುಣ್ ನಾಯರ್, ಧ್ರುವ್ ಜುರೆಲ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಶುಭಂ ಗರ್ವಾಲ್, ಜೇಮ್ಸ್ ನೀಶಮ್, ನಾಥನ್ ಕೌಲ್ಟರ್-ನೈಲ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಡೇರಿಲ್ ಮಿಚೆಲ್

ಕೆಕೆಆರ್: ಆಂಡ್ರೆ ರಸೆಲ್, ವರುಣ್ ಚಕ್ರವರ್ತಿ, ವೆಂಕಟೇಶ್ ಅಯ್ಯರ್, ಸುನಿಲ್ ನರೈನ್, ಶ್ರೇಯಸ್ ಅಯ್ಯರ್(ನಾಯಕ), ಪ್ಯಾಟ್ ಕಮ್ಮಿನ್ಸ್, ಅಭಿಜೀತ್ ತೋಮರ್, ಸ್ಯಾಮ್ ಬಿಲ್ಲಿಂಗ್ಸ್, ಆರೋನ್ ಫಿಂಚ್, ರಮೇಶ್ ಕುಮಾರ್, ಮೊಹಮ್ಮದ್ ನಬಿ, ಅಮನ್ ಖಾನ್, ಉಮೇಶ್ ಯಾದವ್, ನಿತೀಶ್ ರಾಣಾ, ಶಿವಂ ಮಾವಿ, ಶೆಲ್ಡನ್ ಜಾಕ್ಸನ್ , ರಿಂಕು ಸಿಂಗ್, ಅನುಕುಲ್ ರಾಯ್, ರಸಿಖ್ ದಾರ್, ಚಮಿಕಾ ಕರುಣಾರತ್ನೆ, ಬಾಬಾ ಇಂದ್ರಜಿತ್, ಅಶೋಕ್ ಶರ್ಮಾ, ಪ್ರಥಮ್ ಸಿಂಗ್.

IPL 2022: RR vs KKR Preview, Predicted Playing 11, Pitch Report, And Weather Forecast

ಪಂದ್ಯದ ದಿನಾಂಕ, ಸಮಯ ಹಾಗೂ ಸ್ಥಳ: ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯ ಏಪ್ರಿಲ್ 18 ರಂದು ಸೋಮವಾರ ನಡೆಯಲಿದ್ದು ಸಂಜೆ 7:30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಮುಂಬೈನ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ: ಬ್ರೆಬೋರ್ನ್ ಕ್ರೀಡಾಂಗಣದ ಪಿಚ್ ಸಾಮಾನ್ಯವಾಗಿ ಬ್ಯಾಟರ್ ಹಾಗೂ ಬೌಲರ್‌ ಇಬ್ಬರಿಗೂ ಸಮಾನಾಗಿ ಬೆಂಬಲ ನೀಡುವ ಪಿಚ್ ಆಗಿದೆ. ಪಂದ್ಯ ಮುಂದುವರಿಯುತ್ತಿದ್ದಂತೆ ಇಬ್ಬನಿ ಬೀಳುವ ಕಾರಣ ಎರಡನೇ ಸರದಿಯಲ್ಲಿ ಬೌಲಿಂಗ್ ನಡೆಸುವ ತಂಡಗಳು ಸವಾಲನ್ನು ಎದುರಿಸುತ್ತದೆ. ಈ ಅಂಗಳದಲ್ಲಿಮ ಮೊದಲ ಇನ್ನಿಂಗ್ಸ್‌ನ ಸರಾಸರಿ ಮೊತ್ತ 180 ಆಗಿದೆ.

ಸಂಭಾವ್ಯ ಆಡುವ ಬಳಗ: ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ಜೇಮ್ಸ್ ನೀಶಮ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್

ಕೋಲ್ಕತ್ತಾ ನೈಟ್ ರೈಡರ್ಸ್: ಆರೋನ್ ಫಿಂಚ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ಆಂಡ್ರೆ ರಸೆಲ್, ಶೆಲ್ಡನ್ ಜಾಕ್ಸನ್ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್, ಸುನಿಲ್ ನರೈನ್, ಉಮೇಶ್ ಯಾದವ್, ವರುಣ್ ಚಕ್ರವರ್ತಿ

Story first published: Sunday, April 17, 2022, 16:09 [IST]
Other articles published on Apr 17, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+