Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RR vs PBKS: ರಾಜಸ್ತಾನ್ ರಾಯಲ್ಸ್‌ಗೆ 190 ರನ್ ಟಾರ್ಗೆಟ್ ನೀಡಿದ ಪಂಜಾಬ್ ಕಿಂಗ್ಸ್‌

Punjab kings

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ರಾಜಸ್ತಾನ್‌ ರಾಯಲ್ಸ್‌ ಹಾಗೂ ಪಂಜಾಬ್ ಕಿಂಗ್ಸ್‌ ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ 190 ರನ್ ಟಾರ್ಗೆಟ್ ನೀಡಿದೆ.

ಟಾಸ್‌ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಪಂಜಾಬ್ ಕಿಂಗ್ಸ್‌ ನಿಗದಿತ 20 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 189 ರನ್ ಕಲೆಹಾಕಿದೆ. ಪಂಜಾಬ್ ಪರ ಜಾನಿ ಬೈಸ್ಟ್ರೋವ್ 56, ಧವನ್ 12, ರಾಜಪಕ್ಷೆ 27, ಮಯಾಂಕ್ ಅಗರ್ವಾಲ್ 15, ಜಿತೇಶ್ ಶರ್ಮಾ 38, ಲಿವಿಂಗ್‌ಸ್ಟೋನ್ 22 ರನ್ ಕಲೆಹಾಕಿದ್ದಾರೆ.

ಉತ್ತಮ ಆರಂಭ ಪಡೆದರೂ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳ ವೈಫಲ್ಯದಿಂದ ಹಿನ್ನಡೆ ಅನುಭವಿಸಿದ್ದ ಪಂಜಾಬ್ ಪರ ಜಿತೇಶ್ ಶರ್ಮಾ, ಲಿವಿಂಗ್‌ಸ್ಟೋನ್ ಸ್ಫೋಟಕ ಆಟವಾಡಿ ತಂಡಕ್ಕೆ ಸವಾಲಿನ ಮೊತ್ತವನ್ನ ತಂದುಕೊಟ್ಟರು.

ರಾಜಸ್ತಾನ್ ರಾಯಲ್ಸ್ ಪರ ಯುಜವೇಂದ್ರ 4 ಓವರ್‌ಗಳಲ್ಲಿ 28 ರನ್‌ಗಳನ್ನ ನೀಡಿ 3 ವಿಕೆಟ್‌ ಕಬಳಿಸಿದ್ದಾರೆ. ಪ್ರಸಿದ್ಧ ಕೃಷ್ಣ, ಆರ್‌. ಅಶ್ವಿನ್ ತಲಾ ಒಂದು ವಿಕೆಟ್ ಪಡೆದಿದ್ದಾರೆ.

ಪಂಜಾಬ್ ಕಿಂಗ್ಸ್ : ಜಾನಿ ಬೈರ್‌ಸ್ಟೋವ್, ಶಿಖರ್ ಧವನ್, ಮಯಾಂಕ್ ಅಗರ್ವಾಲ್(ನಾಯಕ), ಭಾನುಕಾ ರಾಜಪಕ್ಸೆ, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ರಿಷಿ ಧವನ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್, ಸಂದೀಪ್ ಶರ್ಮಾ

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI: ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್(ನಾಯಕ/ ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ಕುಲದೀಪ್ ಸೇನ್

Story first published: Saturday, May 7, 2022, 18:02 [IST]
Other articles published on May 7, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+