RR vs SRH Head to Head: ಮುಖಾಮುಖಿ ಪಂದ್ಯಗಳಲ್ಲಿ ಹೆಚ್ಚು ಪಂದ್ಯ ಗೆದ್ದಿರುವ ಬಲಿಷ್ಠ ತಂಡ ಯಾವುದು?

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾಗಿದ್ದು, ಟೂರ್ನಿಯ ಐದನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಸೆಣಸಾಟ ನಡೆಸಲಿವೆ. ಇತ್ತಂಡಗಳ ನಡುವಿನ ಈ ಪಂದ್ಯ ಪುಣೆಯ ಎಂಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಮಾರ್ಚ್ 29ರ ಸಂಜೆ 7.30ಕ್ಕೆ ಆರಂಭವಾಗಲಿದೆ. ಇನ್ನು ಈ ಬಾರಿ ಹಲವು ತಂಡಗಳು ತಮ್ಮ ತಮ್ಮ ತಂಡಗಳ ನಾಯಕರನ್ನು ಬದಲಾಯಿಸಿದರೂ ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮಾತ್ರ ಕಳೆದ ಬಾರಿಯ ಆವೃತ್ತಿಯಲ್ಲಿದ್ದ ನಾಯಕರ ನೇತೃತ್ವದಲ್ಲೇ ಈ ಬಾರಿಯೂ ಕಣಕ್ಕಿಳಿಯಲಿವೆ. ರಾಜಸ್ಥಾನ್ ರಾಯಲ್ಸ್ ತಂಡವನ್ನು ಕೇನ್ ವಿಲಿಯಮ್ಸನ್ ಮುನ್ನಡೆಸಿದರೆ, ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಕೇನ್ ವಿಲಿಯಮ್ಸನ್ ಮುನ್ನಡೆಸಲಿದ್ದಾರೆ.
ಇನ್ನು ಇತ್ತಂಡಗಳ ನಡುವೆ ಇದುವರೆಗೂ ನಡೆದಿರುವ ಪಂದ್ಯಗಳ ಪೈಕಿ ಹೆಚ್ಚು ಪಂದ್ಯ ಗೆದ್ದಿರುವ ತಂಡ ಯಾವುದು ಹಾಗೂ ಈ ಪಂದ್ಯದಲ್ಲಿ ಕಣಕ್ಕಿಳಿಯಬಹುದಾದ ಸಂಭಾವ್ಯ ತಂಡದ ಮಾಹಿತಿ ಈ ಕೆಳಕಂಡಂತಿದೆ.
ಒಟ್ಟಾರೆ ಐಪಿಎಲ್ ಮುಖಾಮುಖಿ:
ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಇದುವರೆಗೂ ಒಟ್ಟು 15 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಈ ಪಂದ್ಯಗಳ ಪೈಕಿ ಸನ್ ರೈಸರ್ಸ್ ಹೈದರಾಬಾದ್ 8 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ರಾಜಸ್ಥಾನ್ ರಾಯಲ್ಸ್ 7 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ಒಟ್ಟಾರೆ ಮುಖಾಮುಖಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ಕೊಂಚ ಮೇಲುಗೈ ಸಾಧಿಸಿದೆ.
ಕಳೆದ ಆವೃತ್ತಿಯ ಮುಖಾಮುಖಿ
ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇತ್ತಂಡಗಳ ನಡುವೆ ನಡೆದಿದ್ದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 55 ರನ್‌ಗಳ ಗೆಲುವನ್ನು ಸಾಧಿಸಿತ್ತು. ಹಾಗೂ ಇತ್ತಂಡಗಳ ನಡುವೆ ನಡೆದಿದ್ದ ಎರಡನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ 7 ವಿಕೆಟ್‌ಗಳ ಗೆಲುವನ್ನು ಸಾಧಿಸಿತ್ತು.
ಸಂಭಾವ್ಯ ತಂಡಗಳು
ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಕಣಕ್ಕಿಳಿಯಬಹುದಾದ ಸಂಭಾವ್ಯ ತಂಡಗಳು ಈ ಕೆಳಕಂಡಂತಿದೆ.
ಸನ್ ರೈಸರ್ಸ್ ಹೈದರಾಬಾದ್: ಐಡೆನ್ ಮಾರ್ಕ್ರಾಮ್, ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್ (ನಾಯಕ), ರಾಹುಲ್ ತ್ರಿಪಾಠಿ, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಅಬ್ದುಲ್ ಸಮದ್, ವಾಷಿಂಗ್ಟನ್ ಸುಂದರ್, ರೊಮಾರಿಯೋ ಶೆಫರ್ಡ್, ಉಮ್ರಾನ್ ಮಲಿಕ್, ಭುವನೇಶ್ವರ್ ಕುಮಾರ್ ಮತ್ತು ಟಿ ನಟರಾಜನ್.
ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್ (ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ಜೇಮ್ಸ್ ನೀಶಮ್ / ನಾಥನ್ ಕೌಲ್ಟರ್-ನೈಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಾಹಲ್ ಮತ್ತು ಪ್ರಸಿದ್ಧ್ ಕೃಷ್ಣ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications