
ಐಪಿಎಲ್ 15ನೇ ಆವೃತ್ತಿಯ 5ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದು ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಭಾರೀ ಅಂತರದ ಗೆಲುವು ಸಾಧಿಸಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಮಿಂಚಿದ ರಾಜಸ್ಥಾನ್ ರಾಯಲ್ಸ್ ತಂಡ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 61 ರನ್‌ಗಳ ಬೃಹತ್ ಗೆಲುವು ಸಾಧಿಸಿದೆ. ಈ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.
ಬ್ಯಾಟಿಂಗ್‌ನಲ್ಲಿ ಸಂಜು ಪಡೆಯ ಅಬ್ಬರ: ರಾಜಸ್ಥಾನ್ ರಾಯಲ್ಸ್ ಬ್ಯಾಟಿಂಗ್ ವಿಭಾಗ ಅಬ್ಬರಿಸಿತು. ಸನ್‌ರೈಸರ್ಸ್ ಹೈದರಾಬಾದ್ ಬೌಲಿಂಗ್ ವಿಭಾಗವನ್ನು ಮನಬಂದಂತೆ ದಂಡಿಸಿದ ಆರ್‌ಆರ್ ದಾಂಡಿಗರು ಬೃಹತ್ ಮೊತ್ತವನ್ನು ಪೇರಿಸಿದರು. ನಿಗದಿತ 20 ಓವರ್‌ಗಳಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಭರ್ಜರಿ 210 ರನ್‌ಗಳನ್ನು ಗಳಿಸಿದ್ದು ಕೇನ್ ವಿಲಿಯಮ್ಸನ್ ಪಡೆಗೆ ಭಾರೀ ಸವಾಲನ್ನು ನೀಡಿತು. ರಾಜಸ್ಥಾನ್ ರಾಯಲ್ಸ್ ತಂಡದ ಪರವಾಗಿ ನಾಯಕ ಸಂಜು ಸ್ಯಾಮ್ಸನ್ ಸ್ಪೋಟಕ ಅರ್ಧ ಶತಕ ಸಿಡಿಸಿದರೆ ದೇವದತ್ ಪಡಿಕ್ಕಲ್, ಆರಂಭಿಕರಾದ ಜೋಸ್ ಬಟ್ಲರ್ ಹಾಗೂ ಯಶಸ್ವಿ ಜೈಸ್ವಾಲ್ ಮತ್ತು ಶಿಮ್ರಾನ್ ಹೆಟ್ಮೇಯರ್ ಕೂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಸಂಜು ಸ್ಯಾಮ್ಸನ್ 27 ಎಸೆತಗಳಲ್ಲಿ 55 ರನ್ ಗಳಿಸಿದರೆ ದೇವದತ್ ಪಡಿಕ್ಕಲ್ 29 ಎಸೆತಗಳಲ್ಲಿ 41 ರನ್ ಗಳಿಸಿದರು. ಹೇಟ್ಮೇಯರ್ ಕೇವಲ 13 ಎಸೆತಗಳಲ್ಲಿ 32 ರನ್ ಸಿಡಿಸಿ ಮಿಂಚಿದ್ದಾರೆ.
ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ಆರಂಭಿಸಿದ ಸನ್‌ರೈಸ್ ಹೈದರಾಬಾದ್ ತಂಡ ಆರಂಭದಲ್ಲಿಯೇ ಮುಗ್ಗರಿಸಿತು. ನಾಯಕ ಕೇನ್ ವಿಲಿಯಮ್ಸನ್ ವಿವಾದಾತ್ಮಕ ತೀರ್ಪಿಗೆ ಬಲಿಯಾದರೆ ನಂತರ ಒಬ್ಬರ ನಂತರ ಮತ್ತೊಬ್ಬರಂತೆ ಫೆವಿಲಿಯನ್‌ಗೆ ಹೆಜ್ಜೆ ಹಾಕಿದರು. 37 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡಿತ್ತು ಎಸ್‌ಆರ್‌ಹೆಚ್. ಈ ಸಂದರ್ಭದಲ್ಲಿ ಐಡೆನ್ ಮಾರ್ಕ್ರಮ್, ರೊಮ್ಯಾರಿಯೋ ಶೆಫರ್ಡ್ ಹಾಗೂ ವಾಶಿಂಗ್ಟನ್ ಸುಂದರ್ ಅದ್ಭುಬ್ಯಾಟಿಂಗ್ ಪ್ರದರಶಿಸಿದರು. ಆದರೆ ಈ ಬ್ಯಾಟಿಂಗ್‌ನಿಮದಾಗಿ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಸನ್‌ರೈಸರ್ಸ್ ಹೈದರಾಬಾದ್ 61 ರನ್‌ಗಳ ಅಂತರದಿಂದ ಶರಣಾಯಿತು.
ಸನ್‌ರೈಸರ್ಸ್ ಹೈದರಾಬಾದ್ ಆಡುವ ಬಳಗ: ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಕೇನ್ ವಿಲಿಯಮ್ಸನ್ (ನಾಯಕ), ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಐಡೆನ್ ಮಾರ್ಕ್ರಾಮ್, ಅಬ್ದುಲ್ ಸಮದ್, ವಾಷಿಂಗ್ಟನ್ ಸುಂದರ್, ರೊಮಾರಿಯೋ ಶೆಫರ್ಡ್, ಭುವನೇಶ್ವರ್ ಕುಮಾರ್, ಟಿ ನಟರಾಜನ್, ಉಮ್ರಾನ್ ಮಲಿಕ್
ಬೆಂಚ್: ಮಾರ್ಕೊ ಜಾನ್ಸೆನ್, ರವಿಕುಮಾರ್ ಸಮರ್ಥ್, ಶ್ರೇಯಸ್ ಗೋಪಾಲ್, ಜಗದೀಶ ಸುಚಿತ್, ಗ್ಲೆನ್ ಫಿಲಿಪ್ಸ್, ಶಶಾಂಕ್ ಸಿಂಗ್, ವಿಷ್ಣು ವಿನೋದ್, ಪ್ರಿಯಂ ಗಾರ್ಗ್, ಕಾರ್ತಿಕ್ ತ್ಯಾಗಿ, ಫಜಲ್ಹಕ್ ಫಾರೂಕಿ, ಸೌರಭ್ ದುಬೆ

ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ನಾಥನ್ ಕೌಲ್ಟರ್-ನೈಲ್, ಯುಜ್ವೇಂದ್ರ ಚಾಹಲ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ
ಬೆಂಚ್: ಜೇಮ್ಸ್ ನೀಶಮ್, ನವದೀಪ್ ಸೈನಿ, ಕೆಸಿ ಕಾರಿಯಪ್ಪ, ಕರುಣ್ ನಾಯರ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಡೆರಿಲ್ ಮಿಚೆಲ್, ಒಬೆದ್ ಮೆಕಾಯ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಅನುನಯ್ ಸಿಂಗ್, ಕುಲದೀಪ್ ಸೇನ್, ಧ್ರುವ ಜುರೆಲ್, ಶುಭಂ ಗರ್ವಾಲ್