For Quick Alerts
ALLOW NOTIFICATIONS  
For Daily Alerts
 

RR vs SRH: ಪಿಚ್ ಆಗಿ ಹಿಡಿದ ಬಾಲ್‌ಗೆ ಕೇನ್ ವಿಲಿಯಮ್ಸನ್ ಔಟ್!?: ವಿಡಿಯೋ

IPL 2022, RR vs SRH: Kane Williamson controversial dismissal: video

ರಾಜಸ್ಥಾನ್ ರಾಯಲ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಐಪಿಎಲ್ 15ನೇ ಆವೃತ್ತಿಯ 5ನೇ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದು 211 ರನ್‌ಗಳ ಬೃಹತ್ ಮೊತ್ತದ ಗುರಿಯನ್ನು ನಿಗದಿಪಡಿಸಿದೆ. ಇದನ್ನು ಬೆನ್ನಟ್ಟಿದ ಸನ್‌ರೈಸರ್ಸ್ ಹೈದರಾಬಾದ್ ತಂಡ ಆರಂಭದಲ್ಲಿಯೇ ಒಂದರ ನಂತರ ಮತ್ತೊಂದರಂತೆ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು. ಈ ಪೈಕಿ ಕೇನ್ ವಿಲಿಯಮ್ಸನ್ ಔಟಾದ ರೀತಿ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ರಾಜಸ್ಥಾನ್ ರಾಯಲ್ಸ್ ತಂಡ ನೀಡಿದ 211 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಎಸ್‌ಆರ್‌ಹೆಚ್ ತಂಡದ ಪರವಾಗಿ ಆಂಭಿಕರಾಗಿ ನಾಯಕ ಕೇನ್ ವಿಲಿಯಮ್ಸನ್ ಹಾಗೂ ಅಭಿಶೇಕ್ ಶರ್ಮಾ ಕಣಕ್ಕಿಳಿದರು. ಪಂದ್ಯದ ಎರಡನಲ್ಲಿ ಕನ್ನಡಿಗ ಪ್ರಸಿದ್ಧ್ ಕೃಷ್ಣ ಬೌಲಿಂಗ್ ದಾಳಿಗೆ ಇಳಿದಿದ್ದರು. ಈ ಓವರ್‌ನ ನಾಲ್ಕನೇ ಎಸೆತದಲ್ಲಿ ನಾಯಕ ಕೇನ್ ವಿಲಿಯಮ್ಸನ್ ಬ್ಯಾಟ್‌ಗೆ ಸವರಿಕೊಂಡು ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್‌ರತ್ತ ಸಾಗಿತ್ತು. ಆದರೆ ಸಂಜು ಸ್ಯಾಮ್ಸನ್ ಕೈಯಿಂದ ಹಾರಿದ ಚೆಂಡನ್ನು ಮೊದಲ ಸ್ಲಿಪ್‌ನಲ್ಲಿದ್ದ ಪಡಿಕ್ಕಲ್ ಡೈವ್ ಮಾಡಿ ಹಿಡಿದಿದ್ದರು.

ಈ ಸಂದರ್ಭದಲ್ಲಿ ಮಯದಾನದಲ್ಲಿದ್ದ ಅಂಪಾಯರ್ ಥರ್ಡ್ ಅಂಪಾಯರ್‌ಗೆ ತೀರ್ಪು ವರ್ಗಾಯಿಸಿದರು. ಬೇರೆ ಬೇರೆ ಕೋನಗಳಿಂದ ಈ ಕ್ಯಾಚ್ ಪಡೆದ ವಿಡಿಯೋ ಪರಿಶೀಲಿಸಿದ ಥರ್ಡ್ ಅಂಪಾಯರ್ ದೇವದತ್ ಪಡಿಕ್ಕಲ್ ಹಿಡಿದ ಕ್ಯಾಚ್‌ಗೆ ಮನ್ನಣೆ ನೀಡಿ ಔಟ್ ಎಂದು ತೀರ್ಪು ನೀಡಿದರು. ಆದರೆ ಕ್ಯಾಮರಾಗಳ ದೃಶ್ಯಗಳಲ್ಲಿ ಚೆಂಡು ಮೈದಾನವನ್ನು ಸ್ಪರ್ಶಿಸುವುದು ಸ್ಪಷ್ಟವಾಗಿತ್ತು.

ಥರ್ಡ್ ಅಂಪಾಯರ್ ನೀಡಿದ ಈ ತೀರ್ಪಿಗೆ ಸಾಕಷ್ಟು ಕ್ರಿಕೆಟ್ ಪ್ರೇಮಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಂತ್ರಜ್ಞಾನಗಳು ಇದ್ದರೂ ಇಷ್ಟು ಕೆಟ್ಟ ತೀಪು ನೀಡುವುದು ಹೇಗೆ ಸಾಧ್ಯ ಎಂದು ಪ್ರಶ್ನಿಸುತ್ತಿದ್ದಾರೆ ಕ್ರಿಕೆಟ್ ಪ್ರೇಮಿಗಳು. ಹೀಗೆ ನಾನಾ ರೀತಿಯಾಗಿ ಅಂಪಾಯರ್ ತೀರ್ಮಾನದ ಬಗ್ಗೆ ಕಿಡಿಕಾರುತ್ತಿದ್ದಾರೆ.

ಇನ್ನು ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ 61 ರನ್‌ಗಳ ಅಂತರದಿಂದ ಬೃಹತ್ ಗೆಲುವು ಸಾಧಿಸಿದೆ. ಮೊದಲಿಗೆ ಬ್ಯಾಟಿಂಗ್ ಮಾಡಿದ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ ಮೊದಲಿಗೆ ಬ್ಯಾಟಿಂಗ್ ಮಾಡಿದ್ದು 210 ರನ್‌ಗಳನ್ನು ಗಳಿಸಿತು. ನಾಯಕ ಸಂಜು ಸ್ಯಾಮ್ಸನ್ ಅರ್ಧ ಶತಕ ಸಿಡಿಸಿದರೆ ದೇವದತ್ ಪಡಿಕ್ಕಲ್, ಶಿಮ್ರಾನ್ ಹೇಟ್ಮೇಯರ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ ಬೃಹತ್ ಮೊತ್ತಕ್ಕೆ ಕಾರಣವಾದರು.

ಇದನ್ನು ಬೆನ್ನಟ್ಟಿದ ಸನ್‌ರೈಸರ್ಸ್ ಹೈದರಾಬಾದ್ ತಂಡದ ಪರವಾಗಿ ಅಗ್ರ ಕ್ರಮಾಂಕ ಸಂಪೂರ್ಣವಾಗಿ ವಿಫಲವಾಯಿತು. ಐಡೆನ್ ಮಾರ್ಕ್ರಮ್ ಹಾಗೂ ವಾಶಿಂಗ್ಟನ್ ಸುಂದರ್ ಮಾತ್ರವೇ ಹೈದರಾಬಾದ್ ಪರವಾಗಿ ಉತ್ತಮವಾಗಿ ಬ್ಯಾಟ್ ಬೀಸಿದರು.

ಸನ್‌ರೈಸರ್ಸ್ ಹೈದರಾಬಾದ್ ಆಡುವ ಬಳಗ: ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಕೇನ್ ವಿಲಿಯಮ್ಸನ್ (ನಾಯಕ), ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಐಡೆನ್ ಮಾರ್ಕ್ರಾಮ್, ಅಬ್ದುಲ್ ಸಮದ್, ವಾಷಿಂಗ್ಟನ್ ಸುಂದರ್, ರೊಮಾರಿಯೋ ಶೆಫರ್ಡ್, ಭುವನೇಶ್ವರ್ ಕುಮಾರ್, ಟಿ ನಟರಾಜನ್, ಉಮ್ರಾನ್ ಮಲಿಕ್
ಬೆಂಚ್: ಮಾರ್ಕೊ ಜಾನ್ಸೆನ್, ರವಿಕುಮಾರ್ ಸಮರ್ಥ್, ಶ್ರೇಯಸ್ ಗೋಪಾಲ್, ಜಗದೀಶ ಸುಚಿತ್, ಗ್ಲೆನ್ ಫಿಲಿಪ್ಸ್, ಶಶಾಂಕ್ ಸಿಂಗ್, ವಿಷ್ಣು ವಿನೋದ್, ಪ್ರಿಯಂ ಗಾರ್ಗ್, ಕಾರ್ತಿಕ್ ತ್ಯಾಗಿ, ಫಜಲ್ಹಕ್ ಫಾರೂಕಿ, ಸೌರಭ್ ದುಬೆ

ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ನಾಥನ್ ಕೌಲ್ಟರ್-ನೈಲ್, ಯುಜ್ವೇಂದ್ರ ಚಾಹಲ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ
ಬೆಂಚ್: ಜೇಮ್ಸ್ ನೀಶಮ್, ನವದೀಪ್ ಸೈನಿ, ಕೆಸಿ ಕಾರಿಯಪ್ಪ, ಕರುಣ್ ನಾಯರ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಡೆರಿಲ್ ಮಿಚೆಲ್, ಒಬೆದ್ ಮೆಕಾಯ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಅನುನಯ್ ಸಿಂಗ್, ಕುಲದೀಪ್ ಸೇನ್, ಧ್ರುವ ಜುರೆಲ್, ಶುಭಂ ಗರ್ವಾಲ್

Story first published: Wednesday, March 30, 2022, 9:51 [IST]
Other articles published on Mar 30, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+