For Quick Alerts
ALLOW NOTIFICATIONS  
For Daily Alerts
 

CSK vs GT: ಅಂತೂ ಫಾರ್ಮ್ ಕಂಡುಕೊಂಡ ರುತುರಾಜ್; ಗುಜರಾತ್‌‌ಗೆ 170 ರನ್‌ಗಳ ಗುರಿ ನೀಡಿದ ಸಿಎಸ್‌ಕೆ

IPL 2022: Ruturaj Gaikwads half century helps CSK to mount 169/5 against GT

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 29ನೇ ಪಂದ್ಯ ಇಂದು ( ಏಪ್ರಿಲ್ 17 ) ನಡೆಯುತ್ತಿದ್ದು, ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಕಣಕ್ಕಿಳಿದಿವೆ.

ಇತ್ತಂಡಗಳ ನಡುವಿನ ಈ ಪಂದ್ಯ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ಗುಜರಾತ್ ಟೈಟನ್ಸ್ ತಂಡದ ನಾಯಕ ರಶೀದ್ ಖಾನ್ ಫೀಲ್ಡಿಂಗ್ ಆಯ್ದುಕೊಳ್ಳುವುದರ ಮೂಲಕ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 169 ರನ್ ಕಲೆಹಾಕಿ ಎದುರಾಳಿ ಗುಜರಾತ್ ಟೈಟನ್ಸ್ ತಂಡಕ್ಕೆ 170 ರನ್‌ಗಳ ಗುರಿಯನ್ನು ನೀಡಿದೆ.

ಚೆನ್ನೈ ಸೂಪರ್ ಕಿಂಗ್ಸ್ ಪರ ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅಬ್ಬರಿಸಿ ಆರೆಂಜ್ ಕ್ಯಾಪ್ ವಿಜೇತನಾಗಿ ಹೊರಹೊಮ್ಮಿದ್ದ ರುತುರಾಜ್ ಗಾಯಕ್ವಾಡ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿನ ತಮ್ಮ ಮೊದಲ 5 ಪಂದ್ಯಗಳಲ್ಲಿ ಸಾಲುಸಾಲು ಕಳಪೆ ಪ್ರದರ್ಶನ ನೀಡುವುದರ ಮೂಲಕ ನೆಲಕಚ್ಚಿದ್ದರು. ಸದ್ಯ ಇದೀಗ ಗುಜರಾತ್ ಟೈಟನ್ಸ್ ವಿರುದ್ಧದ ಈ ಪಂದ್ಯದಲ್ಲಿ 48 ಎಸೆತಗಳಿಗೆ 73 ರನ್ ಬಾರಿಸಿರುವ ರುತುರಾಜ್ ಗಾಯಕ್ವಾಡ್ ಫಾರ್ಮ್ ಕಂಡುಕೊಂಡಿದ್ದಾರೆ. ಇನ್ನು ರುತುರಾಜ್ ಗಾಯಕ್ವಾಡ್ ಜತೆ ಆರಂಭಿಕನಾಗಿ ಕಣಕ್ಕಿಳಿದ ರಾಬಿನ್ ಉತ್ತಪ್ಪ 10 ಎಸೆತಗಳಲ್ಲಿ ಕೇವಲ 3 ರನ್ ಗಳಿಸಿ ಔಟ್ ಆದರೆ, ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮೊಯಿನ್ ಅಲಿ 1 ರನ್, ಅಂಬಾಟಿ ರಾಯುಡು 31 ಎಸೆತಗಳಲ್ಲಿ 46 ರನ್ ಮತ್ತು ಶಿವಂ ದುಬೆ 17 ಎಸೆತಗಳಲ್ಲಿ 19 ರನ್ ಸಿಡಿಸಿದರು. ತಂಡದ ನಾಯಕ ರವೀಂದ್ರ ಜಡೇಜಾ 12 ಎಸೆತಗಳಲ್ಲಿ 22 ರನ್ ಬಾರಿಸಿ ಅಜೇಯರಾಗಿ ಉಳಿದರು.

ಗುಜರಾತ್ ಟೈಟನ್ಸ್ ಪರ ಅಲ್ಜಾರಿ ಜೋಸೆಫ್ 2 ವಿಕೆಟ್ ಪಡೆದರೆ, ಮೊಹಮ್ಮದ್ ಶಮಿ ಮತ್ತು ಯಶ್ ದಯಾಳ್ ತಲಾ ಒಂದೊಂದು ವಿಕೆಟ್ ಪಡೆದರು.

ಆಡುವ ಬಳಗಗಳು

ಗುಜರಾತ್ ಟೈಟನ್ಸ್ ಆಡುವ ಬಳಗ: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್‌), ಶುಭಮನ್ ಗಿಲ್, ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ರಶೀದ್ ಖಾನ್ (ನಾಯಕ), ಅಲ್ಜಾರಿ ಜೋಸೆಫ್, ಲಾಕಿ ಫರ್ಗುಸನ್, ಯಶ್ ದಯಾಲ್, ಮೊಹಮ್ಮದ್ ಶಮಿ

ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ರಾಬಿನ್ ಉತ್ತಪ್ಪ, ರುತುರಾಜ್ ಗಾಯಕ್ವಾಡ್, ಮೊಯಿನ್ ಅಲಿ, ಅಂಬಟಿ ರಾಯುಡು, ಶಿವಂ ದುಬೆ, ರವೀಂದ್ರ ಜಡೇಜಾ (ನಾಯಕ), ಎಂಎಸ್ ಧೋನಿ (ವಿಕೆಟ್ ಕೀಪರ್), ಡ್ವೇನ್ ಬ್ರಾವೋ, ಕ್ರಿಸ್ ಜೋರ್ಡಾನ್, ಮಹೇಶ್ ತೀಕ್ಷಣ, ಮುಖೇಶ್ ಚೌಧರಿ

Story first published: Sunday, April 17, 2022, 21:34 [IST]
Other articles published on Apr 17, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+