IPL 2022: 10 ತಂಡ, 2 ಗುಂಪು, 58 ದಿನ, 70 ಪಂದ್ಯಗಳು; ಲೀಗ್ ಹಂತದ ಸಂಪೂರ್ಣ ವೇಳಾಪಟ್ಟಿ ಪ್ರಕಟ

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಟ್ರೋಫಿಗಾಗಿ ಒಟ್ಟು 10 ತಂಡಗಳ ನಡುವೆ ಸೆಣಸಾಟ ನಡೆಯಲಿದ್ದು, ಟೂರ್ನಿ ದಿನದಿಂದ ದಿನಕ್ಕೆ ಕುತೂಹಲ ಹಾಗೂ ಕ್ರೇಜ್ ಪಡೆದುಕೊಳ್ಳುತ್ತಿದೆ. ಈಗಾಗಲೇ ಆಟಗಾರರ ಮೆಗಾ ಹರಾಜು ಪ್ರಕ್ರಿಯೆಯೂ ಮುಕ್ತಾಯಗೊಂಡಿದ್ದು, ಮೆಗಾ ಹರಾಜಿನ ನಂತರ ಯಾವ ತಂಡ ಬಲಿಷ್ಠವಾಗಿದೆ, ಈ ಬಾರಿಯ ಟೂರ್ನಿಯಲ್ಲಿ ಯಾವ ತಂಡಗಳು ಯಾವ ತಂಡಗಳನ್ನು ಮುಖಾಮುಖಿಯಾಗಲಿವೆ ಮತ್ತು ಪಂದ್ಯಗಳು ಯಾವ ದಿನಾಂಕಗಳಂದು ಆಯೋಜನೆಯಾಗಲಿದೆ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿದ್ದವು.
ಈ ಎಲ್ಲಾ ಪ್ರಶ್ನೆಗಳಿಗೆ ಇದೀಗ ಬಿಸಿಸಿಐ ಹಾಗೂ ಐಪಿಎಲ್ ಆಡಳಿತ ಮಂಡಳಿ ಉತ್ತರ ನೀಡಿದ್ದು, ಇಂದು ( ಮಾರ್ಚ್ 6 ) ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಒಟ್ಟು 70 ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಬಿಡುಗಡೆಗೊಂಡಿದೆ. ಈ ಕುರಿತಾದ ಮತ್ತಷ್ಟು ಮಾಹಿತಿ ಮುಂದೆ ಇದೆ ಓದಿ.

ಪಂದ್ಯ ಆರಂಭ ಯಾವಾಗ?
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಉದ್ಘಾಟನಾ ಪಂದ್ಯ ಮಾರ್ಚ್ 26ರಂದು ನಡೆಯಲಿದ್ದು, ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತ ನೈಟ್ ರೈಡರ್ಸ್ ತಂಡಗಳು ಸೆಣಸಾಟ ನಡೆಸಲಿವೆ. ಈ ಪಂದ್ಯ ಸಂಜೆ 7.30ಕ್ಕೆ ನಿಗದಿಯಾಗಿದ್ದು ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಒಟ್ಟು 70 ಪಂದ್ಯಗಳು
ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಒಟ್ಟು 10 ತಂಡಗಳು ಭಾಗವಹಿಸುತ್ತಿದ್ದು, ಈ 10 ತಂಡಗಳನ್ನು ಎರಡು ಗುಂಪುಗಳನ್ನಾಗಿ ವಿಭಜಿಸಲಾಗಿದೆ. ಗ್ರೂಪ್ 'ಎ'ನಲ್ಲಿ ಕೋಲ್ಕತಾ ನೈಟ್ ರೈಡರ್ಸ್, ಮುಂಬೈ ಇಂಡಿಯನ್ಸ್, ರಾಜಸ್ತಾನ್ ರಾಯಲ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಹೊಸ ಫ್ರಾಂಚೈಸಿ ಲಕ್ನೋ ಸೂಪರ್ ಜೈಂಟ್ಸ್ ತಂಡಗಳಿದ್ದರೆ, ಗ್ರೂಪ್ 'ಬಿ'ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಚೆನ್ನೈ ಸೂಪರ್ ಕಿಂಗ್ಸ್, ಪಂಜಾಬ್ ಕಿಂಗ್ಸ್, ಸನ್ ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳಿವೆ. ಈ ಬಾರಿಯ ಐಪಿಎಲ್ ಟೂರ್ನಿಯ ಲೀಗ್ ಹಂತದಲ್ಲಿ ಎಲ್ಲಾ ತಂಡಗಳು ತಮ್ಮ ಗುಂಪಿನಲ್ಲಿರುವ ತಂಡಗಳ ವಿರುದ್ಧ 2 ಪಂದ್ಯಗಳಲ್ಲಿ ಸೆಣಸಾಟ ನಡೆಸಿದರೆ, ಇತರೆ ಗುಂಪಿನ ತಂಡಗಳ ಜೊತೆ ಒಂದು ಪಂದ್ಯದಲ್ಲಿ ಸೆಣಸಾಟ ನಡೆಸಲಿವೆ.

ಸಂಪೂರ್ಣ ವೇಳಾಪಟ್ಟಿ
ಸದ್ಯ ಬಿಡುಗಡೆಗೊಂಡಿರುವ ವೇಳಾಪಟ್ಟಿಯ ಪ್ರಕಾರ ಈ ಬಾರಿಯ ಐಪಿಎಲ್ ಟೂರ್ನಿಯ ಲೀಗ್ ಹಂತದ ಎಲ್ಲಾ ಪಂದ್ಯಗಳು ಮಹಾರಾಷ್ಟ್ರದಲ್ಲಿಯೇ ನಡೆಯಲಿದ್ದು, ಮುಂಬೈನ ವಾಂಖೆಡೆ, ಬ್ರಬೋರ್ನ್ ಕ್ರೀಡಾಂಗಣ, ಡಿವೈ ಪಾಟೀಲ್ ಕ್ರೀಡಾಂಗಣ ಮತ್ತು ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ನಡೆಯಲಿವೆ. ಲೀಗ್ ಹಂತದ ಒಟ್ಟು 70 ಪಂದ್ಯಗಳು 58 ದಿನಗಳಲ್ಲಿ ನಡೆಯಲಿದ್ದು, ಲೀಗ್ ಹಂತದ ಮೊದಲ ಪಂದ್ಯ 26ರ ಮಾರ್ಚ್‌ನಲ್ಲಿ ನಡೆದರೆ, ಲೀಗ್ ಹಂತದ ಅಂತಿಮ ಪಂದ್ಯ ಮೇ 22ರಂದು ಸನ್ ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್ ನಡುವೆ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ.
ಸಂಪೂರ್ಣ ವೇಳಾಪಟ್ಟಿ:
26 ಮಾರ್ಚ್ 2022 - 7.30 pm- ಚೆನ್ನೈ ಸೂಪರ್ ಕಿಂಗ್ಸ್ vs ಕೋಲ್ಕತಾ ನೈಟ್ ರೈಡರ್ಸ್
27 ಮಾರ್ಚ್ 2022 - 3.30 pm ದೆಹಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್
27 ಮಾರ್ಚ್ 2022 - 7.30 pm- ಪಂಜಾಬ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು
28 ಮಾರ್ಚ್ 2022 - 7.30 pm - ಗುಜರಾತ್ ಟೈಟಾನ್ಸ್ vs ಲಕ್ನೋ ಸೂಪರ್ ಜೈಂಟ್ಸ್
29 ಮಾರ್ಚ್ 2022 - 7.30 pm - ಸನ್‌ರೈಸರ್ಸ್ ಹೈದರಾಬಾದ್ vs ರಾಜಸ್ಥಾನ್ ರಾಯಲ್ಸ್
30 ಮಾರ್ಚ್ 2022 - 7.30 pm -ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತಾ ನೈಟ್ ರೈಡರ್ಸ್
31 ಮಾರ್ಚ್ 2022 - 7.30 pm - ಲಕ್ನೋ ಸೂಪರ್ ಜೈಂಟ್ಸ್ vs ಚೆನ್ನೈ ಸೂಪರ್ ಕಿಂಗ್ಸ್
1 ಏಪ್ರಿಲ್ 2022- 7.30 pm - ಕೋಲ್ಕತಾ ನೈಟ್ ರೈಡರ್ಸ್ vs ಪಂಜಾಬ್ ಕಿಂಗ್ಸ್
2 ಏಪ್ರಿಲ್ 2022 - 3.30 pm - ಮುಂಬೈ ಇಂಡಿಯನ್ಸ್ vs ರಾಜಸ್ಥಾನ ರಾಯಲ್ಸ್
2 ಏಪ್ರಿಲ್ 2022 - 7.30 pm - ಗುಜರಾತ್ ಟೈಟಾನ್ಸ್ vs ಡೆಲ್ಲಿ ಕ್ಯಾಪಿಟಲ್ಸ್
3 ಏಪ್ರಿಲ್ 2022 - 7.30 pm - ಚೆನ್ನೈ ಸೂಪರ್ ಕಿಂಗ್ಸ್ vs ಪಂಜಾಬ್ ಕಿಂಗ್ಸ್
4 ಏಪ್ರಿಲ್ 2022 - 7.30 pm - ಸನ್ ರೈಸರ್ಸ್ ಹೈದರಾಬಾದ್ vs ಲಕ್ನೋ ಸೂಪರ್ ಜೈಂಟ್ಸ್
5 ಏಪ್ರಿಲ್ 2022 - 7.30 pm - ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ ರಾಯಲ್ಸ್
6 ಏಪ್ರಿಲ್ 2022 - 7.30 pm - ಮುಂಬೈ ಇಂಡಿಯನ್ಸ್ vs ಕೋಲ್ಕತಾ ನೈಟ್ ರೈಡರ್ಸ್
7 ಏಪ್ರಿಲ್ 2022 - 7.30 pm -ಲಕ್ನೋ ಸೂಪರ್ ಜೈಂಟ್ಸ್ vs ಡೆಲ್ಲಿ ಕ್ಯಾಪಿಟಲ್ಸ್
8 ಏಪ್ರಿಲ್ 2022 -7.30 pm - ಪಂಜಾಬ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್
9 ಏಪ್ರಿಲ್ 2022 - 3.30pm - ಚೆನ್ನೈ ಸೂಪರ್ ಕಿಂಗ್ಸ್ vs ಸನ್ ರೈಸರ್ಸ್ ಹೈದರಾಬಾದ್
9 ಏಪ್ರಿಲ್ 2022 - 7.30 pm- ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್
10 ಏಪ್ರಿಲ್ 2022- 3.30 pm- ಕೋಲ್ಕತಾ ನೈಟ್ ರೈಡರ್ಸ್ vs ದೆಹಲಿ ಕ್ಯಾಪಿಟಲ್ಸ್
10 ಏಪ್ರಿಲ್ 2022 - 7.30 pm- ರಾಜಸ್ಥಾನ ರಾಯಲ್ಸ್ vs ಲಕ್ನೋ ಸೂಪರ್ ಜೈಂಟ್ಸ್
11 ಏಪ್ರಿಲ್ 2022 - 7.30 pm- 7.30 pm- ಸನ್ ರೈಸರ್ಸ್ ಹೈದರಾಬಾದ್ vs ಗುಜರಾತ್ ಟೈಟಾನ್ಸ್
12 ಏಪ್ರಿಲ್ 2022- 7.30 pm- ಚೆನ್ನೈ ಸೂಪರ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು
13 ಏಪ್ರಿಲ್ 2022- 7.30 pm- ಮುಂಬೈ ಇಂಡಿಯನ್ಸ್ vs ಪಂಜಾಬ್ ಕಿಂಗ್ಸ್
14 ಏಪ್ರಿಲ್ 2022- 7.30 pm- ರಾಜಸ್ಥಾನ ರಾಯಲ್ಸ್ vs ಗುಜರಾತ್ ಟೈಟಾನ್ಸ್
15 ಏಪ್ರಿಲ್ 2022 - 7.30 pm - ಸನ್ ರೈಸರ್ಸ್ ಹೈದರಾಬಾದ್ vs ಕೋಲ್ಕತಾ ನೈಟ್ ರೈಡರ್ಸ್
16 ಏಪ್ರಿಲ್ 2022 - 3.30 pm - ಮುಂಬೈ ಇಂಡಿಯನ್ಸ್ vs ಲಕ್ನೋ ಸೂಪರ್ ಜೈಂಟ್ಸ್
16 ಏಪ್ರಿಲ್ 2022-7.30 pm- ಡೆಲ್ಲಿ ಕ್ಯಾಪಿಟಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು
17 ಏಪ್ರಿಲ್ 2022 - ಮಧ್ಯಾಹ್ನ 3.30- ಪಂಜಾಬ್ ಕಿಂಗ್ಸ್ vs ಸನ್ ರೈಸರ್ಸ್ ಹೈದರಾಬಾದ್
17 ಏಪ್ರಿಲ್ 2022- 7.30 pm- ಚೆನ್ನೈ ಸೂಪರ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್
18 ಏಪ್ರಿಲ್ 2022- 7.30 pm- ರಾಜಸ್ಥಾನ ರಾಯಲ್ಸ್ vs ಕೋಲ್ಕತಾ ನೈಟ್ ರೈಡರ್ಸ್
19 ಏಪ್ರಿಲ್ 2022 - 7.30 pm- ಲಕ್ನೋ ಸೂಪರ್ ಜೈಂಟ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು
20 ಏಪ್ರಿಲ್ 2022- ರಾತ್ರಿ 7.30- ದೆಹಲಿ ಕ್ಯಾಪಿಟಲ್ಸ್ vs ಪಂಜಾಬ್ ಕಿಂಗ್ಸ್
21 ಏಪ್ರಿಲ್ 2022- 7.30 pm- ಮುಂಬೈ ಇಂಡಿಯನ್ಸ್ vs ಚೆನ್ನೈ ಸೂಪರ್ ಕಿಂಗ್ಸ್
22 ಏಪ್ರಿಲ್ 2022- ರಾತ್ರಿ 7.30- ದೆಹಲಿ ಕ್ಯಾಪಿಟಲ್ಸ್ vs ರಾಜಸ್ಥಾನ ರಾಯಲ್ಸ್
23 ಏಪ್ರಿಲ್ 2022- 3.30 pm- ಕೋಲ್ಕತಾ ನೈಟ್ ರೈಡರ್ಸ್ vs ಗುಜರಾತ್ ಟೈಟಾನ್ಸ್
23 ಏಪ್ರಿಲ್ 2022- 7.30 pm- ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಸನ್ ರೈಸರ್ಸ್ ಹೈದರಾಬಾದ್
24 ಏಪ್ರಿಲ್ 2022 - 7.30 pm- ಮುಂಬೈ ಇಂಡಿಯನ್ಸ್ vs ಲಕ್ನೋ ಸೂಪರ್ ಜೈಂಟ್ಸ್
25 ಏಪ್ರಿಲ್ 2022 - 7.30 pm- ಪಂಜಾಬ್ ಕಿಂಗ್ಸ್ vs ಚೆನ್ನೈ ಸೂಪರ್ ಕಿಂಗ್ಸ್
26 ಏಪ್ರಿಲ್ 2022- 7.30 pm- ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ ರಾಯಲ್ಸ್
27 ಏಪ್ರಿಲ್ 2022- 7.30 pm- ಗುಜರಾತ್ ಟೈಟಾನ್ಸ್ vs ಸನ್ ರೈಸರ್ಸ್ ಹೈದರಾಬಾದ್
28 ಏಪ್ರಿಲ್ 2022 - 7.30 pm- ದೆಹಲಿ ಕ್ಯಾಪಿಟಲ್ಸ್ vs ಕೋಲ್ಕತಾ ನೈಟ್ ರೈಡರ್ಸ್
29 ಏಪ್ರಿಲ್ 2022- 7.30pm- ಪಂಜಾಬ್ ಕಿಂಗ್ಸ್ vs ಲಕ್ನೋ ಸೂಪರ್ ಜೈಂಟ್ಸ್
30 ಏಪ್ರಿಲ್ 2022- 3.30 pm- ಗುಜರಾತ್ ಟೈಟಾನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು
1 ಮೇ 2022- ಮಧ್ಯಾಹ್ನ 3.30- ದೆಹಲಿ ಕ್ಯಾಪಿಟಲ್ಸ್ vs ಲಕ್ನೋ ಸೂಪರ್ ಜೈಂಟ್ಸ್
1 ಮೇ 2022 - 7.30 pm- ಸನ್ ರೈಸರ್ಸ್ ಹೈದರಾಬಾದ್ vs ಚೆನ್ನೈ ಸೂಪರ್ ಕಿಂಗ್ಸ್
2 ಮೇ 2022 - 7.30 pm- ಕೋಲ್ಕತಾ ನೈಟ್ ರೈಡರ್ಸ್ vs ರಾಜಸ್ಥಾನ ರಾಯಲ್ಸ್
3 ಮೇ 2022- 7.30 pm- ಗುಜರಾತ್ ಟೈಟಾನ್ಸ್ vs ಪಂಜಾಬ್ ಕಿಂಗ್ಸ್
4 ಮೇ 2022- 7.30 pm- ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಚೆನ್ನೈ ಸೂಪರ್ ಕಿಂಗ್ಸ್
5 ಮೇ 2022- 7.30 pm- ದೆಹಲಿ ಕ್ಯಾಪಿಟಲ್ಸ್ vs ಸನ್ ರೈಸರ್ಸ್ ಹೈದರಾಬಾದ್
6 ಮೇ 2022- 7.30 pm- ಗುಜರಾತ್ ಟೈಟಾನ್ಸ್ vs ಮುಂಬೈ ಇಂಡಿಯನ್ಸ್
7 ಮೇ 2022- ಮಧ್ಯಾಹ್ನ 3.30- ಪಂಜಾಬ್ ಕಿಂಗ್ಸ್ vs ರಾಜಸ್ಥಾನ ರಾಯಲ್ಸ್
7 ಮೇ 2022- 7.30 pm - ಲಕ್ನೋ ಸೂಪರ್ ಜೈಂಟ್ಸ್ vs ಕೋಲ್ಕತಾ ನೈಟ್ ರೈಡರ್ಸ್
8 ಮೇ 2022- ಮಧ್ಯಾಹ್ನ 3.30- ಸನ್ ರೈಸರ್ಸ್ ಹೈದರಾಬಾದ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು
8 ಮೇ 2022- 7.30 pm - ಚೆನ್ನೈ ಸೂಪರ್ ಕಿಂಗ್ಸ್ vs ದೆಹಲಿ ಕ್ಯಾಪಿಟಲ್ಸ್
9 ಮೇ 2022- 7.30 pm- ಮುಂಬೈ ಇಂಡಿಯನ್ಸ್ vs ಕೋಲ್ಕತಾ ನೈಟ್ ರೈಡರ್ಸ್
10 ಮೇ 2022- 7.30- ಲಕ್ನೋ ಸೂಪರ್ ಜೈಂಟ್ಸ್ vs ಗುಜರಾತ್ ಟೈಟಾನ್ಸ್
11 ಮೇ 2022-7.30 pm- ರಾಜಸ್ಥಾನ ರಾಯಲ್ಸ್ vs ದೆಹಲಿ ಕ್ಯಾಪಿಟಲ್ಸ್
12 ಮೇ 2022- 7.30 pm- ಚೆನ್ನೈ ಸೂಪರ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್
13 ಮೇ 2022- 7.30 pm- ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್
14 ಮೇ 2022- 7.30 pm- ಕೋಲ್ಕತಾ ನೈಟ್ ರೈಡರ್ಸ್ vs ಸನ್ ರೈಸರ್ಸ್ ಹೈದರಾಬಾದ್
15 ಮೇ 2022- ಮಧ್ಯಾಹ್ನ 3.30- ಚೆನ್ನೈ ಸೂಪರ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್
15 ಮೇ 2022- 7.30 pm- ಲಕ್ನೋ ಸೂಪರ್ ಜೈಂಟ್ಸ್ vs ರಾಜಸ್ಥಾನ ರಾಯಲ್ಸ್
16 ಮೇ 2022- ರಾತ್ರಿ 7.30- ಪಂಜಾಬ್ ಕಿಂಗ್ಸ್ vs ದೆಹಲಿ ಕ್ಯಾಪಿಟಲ್ಸ್
17 ಮೇ 2022- ರಾತ್ರಿ 7.30- ಮುಂಬೈ ಇಂಡಿಯನ್ಸ್ vs ಸನ್ ರೈಸರ್ಸ್ ಹೈದರಾಬಾದ್
18 ಮೇ 2022- 7.30 pm- ಕೋಲ್ಕತಾ ನೈಟ್ ರೈಡರ್ಸ್ vs ಲಕ್ನೋ ಸೂಪರ್ ಜೈಂಟ್ಸ್
19 ಮೇ 2022- 7.30pm- ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಟೈಟಾನ್ಸ್
20 ಮೇ 2022- 7.30pm- ರಾಜಸ್ಥಾನ ರಾಯಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್
21 ಮೇ 2022- ಸಂಜೆ 7.30- ಮುಂಬೈ ಇಂಡಿಯನ್ಸ್ vs ದೆಹಲಿ ಕ್ಯಾಪಿಟಲ್ಸ್
22 ಮೇ 2022- 7.30- ಸನ್ ರೈಸರ್ಸ್ ಹೈದರಾಬಾದ್ vs ಪಂಜಾಬ್ ಕಿಂಗ್ಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications