Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2022: ಎಸ್‌ಆರ್‌ಎಚ್‌ ಬೌಲಿಂಗ್ ಮತ್ತಷ್ಟು ಬಲಿಷ್ಠ, ಸೀನ್ ಅಬಾಟ್ ತಂಡಕ್ಕೆ ಸೇರ್ಪಡೆ

Sean abbott

ಐಪಿಎಲ್ 2022ರ ಋತುವಿನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಎರಡು ಪಂದ್ಯ ಸೋತ ಬಳಿಕ ಸತತ ಎರಡು ಗೆಲುವು ಪಡೆದಿದೆ. ಬಲಿಷ್ಠ ಗುಜರಾತ್ ಟೈಟನ್ಸ್ ತಂಡವನ್ನೇ ಮಣಿಸಿರುವ ಎಸ್‌ಆರ್‌ಎಚ್, ಹಾರ್ದಿಕ್ ಪಾಂಡ್ಯ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದ್ದಾರೆ. ಹೀಗೆ ಗೆಲುವಿನ ಲಯದಲ್ಲಿರುವ ಎಸ್‌ಆರ್‌ಎಚ್‌ ಬೌಲಿಂಗ್‌ಗೆ ಮತ್ತೊಂದು ಅಸ್ತ್ರ ಸೇರ್ಪಡೆಗೊಂಡಿದೆ.

ಪ್ರಮುಖ ಸ್ಪಿನ್ನರ್ ವಾಷಿಂಗ್ಟನ್ ಸುಂದರ್ ಕೈಗೆ ಗಾಯಗೊಂಡ ಮಾಡಿಕೊಂಡ ಪರಿಣಾಮ ಮುಂದಿನ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಹೀಗಿರುವ ತಂಡಕ್ಕೆ ಆಸ್ಟ್ರೇಲಿಯಾದ ಯುವ ವೇಗಿ ಸೀನ್ ಅಬಾಟ್ ಸೇರ್ಪಡೆಯಾಗಿರುವುದು ತಂಡದ ಬಲ ಹೆಚ್ಚಿಸಿದೆ.

ಶುಕ್ರವಾರ ನಡೆಯಲಿರುವ ತನ್ನ ಮುಂದಿನ ಪಂದ್ಯದಲ್ಲಿ ಕೋಲ್ಕತ್ತಾ ತಂಡ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. ಈ ಹಂತದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ತಂಡವನ್ನು ಮಿಸ್ ಮಾಡಿಕೊಂಡಿದ್ದಾರೆ. ಗಾಯದ ಸಮಸ್ಯೆಯಿಂದ ಅವರು ಉಳಿದ ಪಂದ್ಯಗಳಿಗೆ ಲಭ್ಯರಿರುವುದಿಲ್ಲ. ಕನಿಷ್ಠ ಎರಡು ವಾರಗಳ ಕಾಲ ಅವರು ವಿಶ್ರಾಂತಿ ಪಡೆಯುವ ಸಾಧ್ಯತೆ ಇದೆ.

ಗುಜರಾತ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ವಾಷಿಂಗ್ಟನ್ ಸುಂದರ್ ಗಾಯಗೊಂಡಿದ್ದರು. ಪರಿಣಾಮವಾಗಿ ಅವರು ತಮ್ಮ ನಾಲ್ಕು ಓವರ್‌ಗಳ ಕೋಟಾವನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಏಡೆನ್ ಮಾರ್ಕ್ರಾಮ್ ಉಳಿದ ಒಂದು ಓವರ್ ಅನ್ನು ಪೂರ್ಣಗೊಳಿಸಿದರು. ಸುಂದರ್ ಅವರ ಬಲಗೈ ಹೆಬ್ಬೆರಳು ಮತ್ತು ತೋರುಬೆರಳಿನ ನಡುವೆ ಗಾಯವಾಗಿದೆ ಎಂದು ಸನ್‌ರೈಸರ್ಸ್ ಮ್ಯಾನೇಜ್‌ಮೆಂಟ್ ಬಹಿರಂಗಪಡಿಸಿದೆ.

ಈ ಬೆಳವಣಿಗೆಗಳ ನಡುವೆ ತಂಡಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ಆಸ್ಟ್ರೇಲಿಯಾದ ಆಲ್ ರೌಂಡರ್ ಸೀನ್ ಅಬಾಟ್ ತಂಡವನ್ನು ಸೇರಿಕೊಂಡಿದ್ದಾರೆ. ತರಬೇತಿ ಅವಧಿಗಳಲ್ಲಿ ಭಾಗವಹಿಸಿದ್ದಾರೆ. ಮೂರು ದಿನಗಳ ಕ್ವಾರಂಟೈನ್ ಅವಧಿಯ ಕೊನೆಯಲ್ಲಿ ಅವರು ನೆಟ್ಸ್‌ನಲ್ಲಿ ಕಠಿಣ ಅಭ್ಯಾಸ ಮಾಡುತ್ತಿರುವುದು ಕಂಡುಬಂದಿದೆ. ಸನ್‌ರೈಸರ್ಸ್ ಹೈದರಾಬಾದ್ ಮ್ಯಾನೇಜ್‌ಮೆಂಟ್ ತನ್ನ ಅಧಿಕೃತ ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಟ್ವಿಟರ್‌ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದೆ. ಮೆಗಾ ಹರಾಜಿನಲ್ಲಿ 2.40 ಕೋಟಿ ರೂ.ಗೆ ಈತನನ್ನ ತಂಡಕ್ಕೆ ತೆಗೆದುಕೊಂಡಿದ್ದಾರೆ.

ಸನ್‌ರೈಸರ್ಸ್ ಹೈದರಾಬಾದ್ ತನ್ನ ಮುಂದಿನ ಪಂದ್ಯವನ್ನು ಶುಕ್ರವಾರ ಆಡಲಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೆಣಸಲಿದೆ. ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದೆ. ಈ ಪಂದ್ಯಕ್ಕೆ ಸೀನ್ ಅಬಾಟ್ ಲಭ್ಯರಾಗಲಿದ್ದಾರೆ. ಇವರಿಗೆ ಸೀದಾ ಪ್ಲೇಯಿಂಗ್‌ ಇಲೆವೆನ್‌ನಲ್ಲಿ ಅವಕಾಶ ನೀಡಲಾಗುತ್ತದೆಯೇ ಅಥವಾ ವಿಶ್ರಾಂತಿ ನೀಡಲಾಗುತ್ತದೆಯೇ ಕಾದುನೋಡ್ಬೇಕಿದೆ.

Story first published: Thursday, April 14, 2022, 18:28 [IST]
Other articles published on Apr 14, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+