ಟೀಮ್ ಇಂಡಿಯಾ ಮುಂದಿನ ನಾಯಕನ ಸ್ಥಾನಕ್ಕೆ ಈತ ಪ್ರಬಲ ಅಭ್ಯರ್ಥಿ: ಶೋಯೆಬ್ ಅಖ್ತರ್

ಈ ಬಾರಿಯ ಐಪಿಎಲ್‌ನಲ್ಲಿ ಅನೇಕ ಹೊಸ ಪ್ರತಿಭೆಗಳು ಬೆಳಕಿಗೆ ಬಂದಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಯುವ ಆಟಗಾರರು ಭಾರತೀಯ ಕ್ರಿಕೆಟ್ ಲೋಕದಲ್ಲಿ ಹೊಸ ಭರವಸೆ ಮೂಡಿಸಿದ್ದಾರೆ. ಈ ಮಧ್ಯೆ ಭಾರತದ ನಾಯಕತ್ವದ ಸ್ಥಾನಕ್ಕೂ ಈ ಬಾರಿಯ ಐಪಿಎಲ್‌ನಿಂದ ಹೊಸ ಆಯ್ಕೆಯೊಂದು ತೆರೆದುಕೊಂಡಿದೆ. ಈ ಬಾರಿಯ ಐಪಿಎಲ್‌ನಲ್ಲಿ ನಾಯಕನಾಗಿ ನೀಡಿದ ಪ್ರದರ್ಶನವನ್ನು ಮೆಚ್ಚಿ ಪಾಕಿಸ್ತಾನದ ಮಾಜಿ ಆಟಗಾರ ಶೋಯೆಬ್ ಅಖ್ತರ್ ಈತ ಭಾರತ ಕ್ರಿಕೆಟ್ ತಂಡದ ಭವಿಷ್ಯದ ನಾಯಕನ ಸ್ಫರ್ಧೆಗೆ ಪ್ರಬಲ ಅಭ್ಯರ್ಥಿ ಎಂದು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಈ ಐಪಿಎಲ್ ಆವೃತ್ತಿಯಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಮುನ್ನಡೆಸುವ ಜವಾಬ್ಧಾರಿ ವಹಿಸಿಕೊಂಡ ಹಾರ್ದಿಕ್ ಪಾಂಡ್ಯ ನಾಯಕನಾಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ನಾಯಕತ್ವದೊಂದಿಗೆ ಆಟಗಾರನಾಗಿಯೂ ಮಹತ್ವದ ಕೊಡುಗೆ ನೀಡುವಲ್ಲಿ ಹಾರ್ದಿಕ್ ಪಾಂಡ್ಯ ಯಶಸ್ವಿಯಾದರು. ಈ ಕಾರಣದಿಂದಾಗಿ ಶೋಯೆಬ್ ಅಖ್ತರ್ ಭಾರತ ಕ್ರಿಕೆಟ್ ತಂಡದ ಮುಂದಿನ ನಾಯಕತ್ವಕ್ಕೆ ಹಾರ್ದಿಕ್ ಪಾಂಡ್ಯ ಪ್ರಬಲ ಅಭ್ಯರ್ಥಿ ಎಂದಿದ್ದಾರೆ.

IPL 2022 Final: ಬಲಿಷ್ಠ ಗುಜರಾತ್ ವಿರುದ್ಧ ಕಣಕ್ಕಿಳಿಯುವ ಈ ರಾಜಸ್ಥಾನ್ ರಾಯಲ್ಸ್ ತಂಡ ಗೆಲ್ಲುತ್ತಾ?IPL 2022 Final: ಬಲಿಷ್ಠ ಗುಜರಾತ್ ವಿರುದ್ಧ ಕಣಕ್ಕಿಳಿಯುವ ಈ ರಾಜಸ್ಥಾನ್ ರಾಯಲ್ಸ್ ತಂಡ ಗೆಲ್ಲುತ್ತಾ?

ಫಿಟ್‌ನೆಸ್ ಕಡೆಗೆ ಗಮನ ನೀಡಲು ಸಲಹೆ

ಫಿಟ್‌ನೆಸ್ ಕಡೆಗೆ ಗಮನ ನೀಡಲು ಸಲಹೆ

ಶೋಯೆಬ್ ಅಖ್ತರ್ ಈ ಬಾರಿಯ ಐಪಿಎಲ್‌ನಲ್ಲಿ ಹಾರ್ದಿಕ್ ಪಾಂಡ್ಯ ಅದ್ಭುತವಾದ ನಾಯಕತ್ವ ಪ್ರದರ್ಶಿಸುವ ಮೂಲಕ ಭಾರತೀಯ ತಂಡದ ನಾಯಕತ್ವದ ಬಾಗಿಲು ಬಡಿಯುತ್ತಿದ್ದಾರೆ ಎಂದಿದ್ದಾರೆ. ಈ ಸಂದರ್ಭದಲ್ಲಿ ಅವರು ಹಾರ್ದಿಕ್ ಪಾಂಡ್ಯಗೆ ಸಲಹೆಯೊಂದನ್ನು ನೀಡಿದ್ದು ಭಾರತೀಯ ಕ್ರಿಕೆಟ್ ತಂಡದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಬೇಕಾದರೆ ಫಿಟ್‌ನೆಸ್ ಬಹಳ ಮುಖ್ಯವಾಗುತ್ತದೆ. ಹಾಗಾಗಿ ಹಾರ್ದಿಕ್ ಪಾಂಡ್ಯ ತಮ್ಮ ಫಿಟ್‌ನೆಸ್ ಹಾಗೂ ಬೌಲಿಂಗ್‌ನತ್ತ ಹೆಚ್ಚಿನ ಗಮನಹರಿಸಬೇಕು ಎಂದಿದ್ದಾರೆ.

ಜಿಟಿ ತಂಡವನ್ನು ಫೈನಲ್ ಹಂತದವರೆಗೆ ಮುನ್ನಡೆಸಿರುವ ಹಾರ್ದಿಕ್

ಜಿಟಿ ತಂಡವನ್ನು ಫೈನಲ್ ಹಂತದವರೆಗೆ ಮುನ್ನಡೆಸಿರುವ ಹಾರ್ದಿಕ್

ಈ ಬಾರಿಯ ಐಪಿಎಲ್‌ನಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಹಾರ್ದಿಕ್ ಪಾಂಡ್ಯ ಐಪಿಎಲ್‌ನಲ್ಲಿ ಮುನ್ನಡೆಸಿದ್ದು ತಂಡವನ್ನು ಫೈನಲ್ ಹಂತದವರೆಗೂ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಆವೃತ್ತಿಯವರೆಗೆ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿದ್ದ ಹಾರ್ದಿಕ್ ಪಾಂಡ್ಯಗೆ ಯಾವುದೇ ನಾಯಕತ್ವದ ಅನುಭವವಿಲ್ಲದ್ದರೂ ಜಿಟಿ ಫ್ರಾಂಚೈಸಿ ಯುವ ಕ್ರಿಕೆಟಿಗನ ಮೇಲೆ ಭರವಸೆಯಿಟ್ಟು ನಾಯಕತ್ವವನ್ನು ನೀಡಿತ್ತು. ಈ ಭರವಸೆಗೆ ಪೂರಕವಾಗಿ ಪ್ರದರ್ಶಣ ನೀಡಿರುವ ಹಾರ್ದಿಕ್ ಪಾಂಡ್ಯ ನಾಯಕನಾಗಿ ಹಾಗೂ ಬ್ಯಾಟರ್ ಆಗಿಯೂ ಮಿಂಚಿದ್ದಾರೆ.

ನಾಯಕತ್ವದ ಬಾಗಿಲು ಬಡಿಯುತ್ತಿದ್ದಾರೆ

ನಾಯಕತ್ವದ ಬಾಗಿಲು ಬಡಿಯುತ್ತಿದ್ದಾರೆ

ಸ್ಪೋರ್ಟ್ಸ್ ಕೀಡಾಗೆ ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ ಪ್ರತಿಕ್ರಿಯೆ ನೀಡಿದ್ದು ಈ ಸಂದರ್ಭದಲ್ಲಿ ಹಾರ್ದಿಕ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಹೊಸ ಭರವಸೆ ಮೂಡಿಸಿದ್ದಾರೆ ಎಂಬುದು ನಿಜ. ಭಾರತೀಯ ಕ್ರಿಕೆಟ್ ತಂಡದ ನಾಯಕತ್ವಕ್ಕೆ ಈ ಮೂಲಕ ಅವರು ಬಾಗಿಲುಬಡಿಯುತ್ತಿದ್ದಾರೆ. ನಾಯಕನಾಗಿ ರೋಹಿತ್ ಶರ್ಮಾ ಎಷ್ಟು ಸುದೀರ್ಘ ಕಾಲ ಮುಂದುವರಿಯಲಿದ್ದಾರೆ ಎಂಬುಸು ಅನಿಶ್ಚಿತವಾಗಿದೆ" ಎಂದಿದ್ದಾರೆ ಶೋಯೆಬ್ ಅಖ್ತರ್.

ಭಾರತೀಯ ತಂಡದ ನಾಯಕತ್ವ ಸುಲಭವಲ್ಲ

ಭಾರತೀಯ ತಂಡದ ನಾಯಕತ್ವ ಸುಲಭವಲ್ಲ

ಮುಂದುವರಿದು ಮಾತನಾಡಿದ ಶೋಯೆಬ್ ಅಖ್ತರ್ ಭಾರತೀಯ ಕ್ರಿಕೆಟ್ ತಂಡದ ನಾಯಕತ್ವವನ್ನು ವಹಿಸಿಕೊಳ್ಳುವುದು ಸುಲಭದ ಜವಾಬ್ಧಾರಿಯಲ್ಲ. ನಾಯಕನಾಗಿ ಹಾರ್ದಿಕ್ ಪಾಂಡ್ಯ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಆದರೆ ಅವರು ಇನ್ನು ಕೂಡ ಫಿಟ್‌ನೆಸ್ ಹಾಗೂ ಬೌಲಿಂಗ್ ಮೇಲೆ ಹೆಚ್ಚಿನ ನಿಗಾವಹಿಸಬೇಕಿದೆ. ಆತ ಆಲ್‌ರೌಂಡರ್ ಆಗಿ ಯಾವಾಗ ಸಮರ್ಥವಾಗುತ್ತಾರೋ ಆಗ ಭಾರತೀಯ ಕ್ರಿಕೆಟ್ ತಂಡದ ನಾಯಕನ ಸ್ಥಾನಕ್ಕೆ ಸ್ವಾಭಾವಿಕ ಆಯ್ಕೆಯಾಗುತ್ತಾರೆ" ಎಂದಿದ್ದಾರೆ ಶೋಯೆಬ್ ಅಖ್ತರ್.

ಇನ್ನು ಈ ಬಾರಿಯ ಐಪಿಎಲ್‌ನ ಫೈನಲ್‌ನಲ್ಲಿ ಹಾರ್ದಿಲ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ ತಂಡ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ತಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ. ಎರಡು ತಂಡಗಳು ಕೂಡ ಟ್ರೋಫಿಗಾಗಿ ಭಾರೀ ಕಾದಾಟವನ್ನು ನಡೆಸಲಿದ್ದು ಯಾರು ಚಾಂಪಿಯನ್ ಪಟ್ಟಕ್ಕೇರಲಿದ್ದಾರೆ ಎಂಬ ಕುತೂಹಲಕ್ಕೆ ಕಲವೇ ಸಮಯದಲ್ಲಿ ಉತ್ತರ ದೊರೆಯಲಿದೆ.

ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ (ನಾಯಕ), ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಶಿಮ್ರಾನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಹಾಲ್, ರಿಯಾನ್ ಪರಾಗ್, ಕೆಸಿ ಕಾರಿಯಪ್ಪ, ನವದೀಪ್ ಸೈನಿ, ಓಬೇದ್ ಮೆಕಾಯ್, ಅನುನಯ್ ಸಿಂಗ್, ಕುಲದೀಪ್ ಸೇನ್, ಕರುಣ್ ನಾಯರ್, ಧ್ರುವ್ ಜುರೆಲ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಶುಭಂ ಗರ್ವಾಲ್, ಜೇಮ್ಸ್ ನೀಶಮ್, ನಾಥನ್ ಕೌಲ್ಟರ್-ನೈಲ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಡೇರಿಲ್ ಮಿಚೆಲ್

ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ಶುಬ್ಮನ್ ಗಿಲ್, ರಶೀದ್ ಖಾನ್, ಮೊಹಮ್ಮದ್ ಶಮಿ, ಲಾಕಿ ಫರ್ಗುಸನ್, ಅಭಿನವ್ ಸದಾರಂಗನಿ, ರಾಹುಲ್ ತೆವಾಟಿಯಾ, ನೂರ್ ಅಹ್ಮದ್, ಆರ್ ಸಾಯಿ ಕಿಶೋರ್, ಡೊಮಿನಿಕ್ ಡ್ರೇಕ್ಸ್, ಜಯಂತ್ ಯಾದವ್, ವಿಜಯ್ ಶಂಕರ್, ದರ್ಶನ್ ನಲ್ಕಂಡೆ, ಯಶ್ ದಯಾಳ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಗುರುಕೀರತ್ ಸಿಂಗ್, ವರುಣ್ ಆರೋನ್, ಬಿ ಸಾಯಿ ಸುದರ್ಶನ್, ರಹಮಾನುಲ್ಲಾ ಗುರ್ಬಾಜ್

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Sunday, May 29, 2022, 17:29 [IST]
Other articles published on May 29, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X