IPL 2022: ಅತಿ ಕೆಟ್ಟ ದಾಖಲೆ ಮಾಡಿದ ಸನ್‌ರೈಸರ್ಸ್ ಹೈದ್ರಾಬಾದ್

ಐಪಿಎಲ್ 2022 ರ ಭಾಗವಾಗಿ ಸೋಮವಾರ ನಡೆದ 12ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋತಿತು. ಹೀಗಾಗಿ ಈ ಋತುವಿನಲ್ಲಿ ಇದುವರೆಗೆ ಆಡಿದ ಎರಡು ಪಂದ್ಯಗಳಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ಎರಡೂ ಪಂದ್ಯದಲ್ಲಿ ಸೋತು ಪಾಯಿಂಟ್ಸ್ ಟೇಬಲ್‌ನಲ್ಲಿ ತಳಮುಟ್ಟಿದೆ.
ಇದ್ರ ಜೊತೆಗೆ ಕೇನ್ ವಿಲಿಯಮ್ಸನ್ ಟೀಮ್ ಕೆಟ್ಟ ದಾಖಲೆಯನ್ನ ಹೆಗಲಿಗೇರಿಸಿಕೊಂಡಿದೆ. 2020 ರಿಂದ ಐಪಿಎಲ್‌ನಲ್ಲಿ ಅತಿ ಹೆಚ್ಚು ಪಂದ್ಯಗಳಲ್ಲಿ ಸೋತ ತಂಡಗಳನ್ನು ಒಮ್ಮೆ ನೋಡಿದರೆ, ಸನ್‌ರೈಸರ್ಸ್ ಹೈದರಾಬಾದ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. 2020 ರಿಂದ ಸನ್‌ರೈಸರ್ಸ್ ಹೈದರಾಬಾದ್ 21 ಪಂದ್ಯಗಳಲ್ಲಿ ಸೋತಿದೆ. ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ 17 ಪಂದ್ಯಗಳಲ್ಲಿ ಸೋತಿದ್ದು ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿವೆ. ನಂತರ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ 16 ಸೋಲುಗಳೊಂದಿಗೆ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿವೆ.

ಕಳೆದ ವರ್ಷ ಸನ್ ರೈಸರ್ಸ್ ಹೈದರಾಬಾದ್ ತಂಡ ನಿರಾಶಾದಾಯಕ ಪ್ರದರ್ಶನ ನೀಡಿ ಪಾಯಿಂಟ್ಸ್ ಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿತ್ತು. ಇದರೊಂದಿಗೆ ಸನ್‌ರೈಸರ್ಸ್ ಈ ವರ್ಷ ಉತ್ತಮ ಪ್ರದರ್ಶನ ನೀಡಲಿ ಎಂದು ಅಭಿಮಾನಿಗಳು ಬಯಸಿದ್ದಾರೆ. ಆದರೆ ಸನ್‌ರೈಸರ್ಸ್ ಈ ಋತುವಿನಲ್ಲಿ ಆಡಿದ ಎರಡೂ ಪಂದ್ಯಗಳಲ್ಲಿ ಸೋತಿದ್ದು, ಪ್ರಸ್ತುತ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.
ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಪರಿಸ್ಥಿತಿಯೂ ಇದೇ ಆಗಿದೆ. ಲೀಗ್‌ನಲ್ಲಿ ಇದುವರೆಗೆ ಆಡಿದ ಎಲ್ಲಾ 3 ಪಂದ್ಯಗಳಲ್ಲಿ ತಂಡ ಸೋತಿದೆ. ಐಪಿಎಲ್ ಇತಿಹಾಸದಲ್ಲಿ ಸಿಎಸ್‌ಕೆ ಸತತ 3 ಆರಂಭಿಕ ಪಂದ್ಯಗಳಲ್ಲಿ ಸೋತಿರುವುದು ಇದೇ ಮೊದಲು. ಐದು ಬಾರಿಯ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ಕೂಡ ಇದುವರೆಗೆ ಆಡಿದ ಎರಡು ಪಂದ್ಯಗಳಲ್ಲಿ ಸೋತಿದೆ.

- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications