For Quick Alerts
ALLOW NOTIFICATIONS  
For Daily Alerts
 

GT vs SRH Preview: ಪ್ರಿವ್ಯೂ, ಪಿಚ್ ರಿಪೋರ್ಟ್, ಸಂಭಾವ್ಯ ತಂಡ, ಹವಾಮಾನ ವರದಿ

IPL 2022: SRH vs GT Preview, Predicted Playing 11, Pitch Report, And Weather Forecast

ಐಪಿಎಲ್‌ನಲ್ಲಿ ಬುಧವಾರ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗತ್ತಿದೆ. ಎರಡು ತಂಡಗಳು ಕೂಡ ಅದ್ಭುತವಾದ ಫಾರ್ಮ್‌ನಲ್ಲಿದ್ದು ಸತತ ಗೆಲುವಿನೊಂದಿಗೆ ಮುನ್ನುಗ್ಗುತ್ತಿದೆ. ಸನ್‌ರೈಸರ್ಸ್ ಹೈದರಾಬಾದ್ ಆರ್‌ಸಿಬಿ ತಂಡವನ್ನು 68 ರನ್‌ಗಳಿಗೆ ಕಟ್ಟಿ ಹಾಕಿ ಸುಲಭ ಗೆಲುವು ದಾಖಲಿಸುವ ಜೊತೆಗೆ ತನ್ನ ಬೌಲಿಂಗ್ ಸಾಮರ್ಥ್ಯವನ್ನು ಬಹಿರಂಗಪಡಿಸಿದೆ. ಮತ್ತೊಂದೆಡೆ ಗುಜರಾತ್ ಟೈಟನ್ಸ್ ಕೂಡ ಕೆಕೆಆರ್ ವಿರುದ್ಧ ಅಂತಿಮ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದೆ.

ಜಿಟಿ ಹಾಗೂ ಎಸ್‌ಆರ್‌ಹೆಚ್ ಈ ಎರಡು ತಂಡಗಳು ಟೂರ್ನಿಯ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ತಂಡಗಳಾಗಿದೆ. ಆಡಿದ 7 ಪಂದ್ಯಗಳಲ್ಲಿ ಒಂದು ಸೋಲು ಅನುಭವಿಸಿದ್ದು 6 ಗೆಲುವುಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಸೋಲು ಕಂಡಿರುವ ಒಂದು ಪಂದ್ಯ ಕೂಡ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧವೇ ಆಗಿರುವುದು ವಿಶೇಷವಾಗಿದೆ. ಇದೀಗ ಟೂರ್ನಿಯಲ್ಲಿ ಎರಡನೇ ಬಾರಿಗೆ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಜಿಟಿ ಎದುರಿಸುತ್ತಿದ್ದು ಕುತೂಹಲ ಮೂಡಿಸಿದೆ. ಮತ್ತೊಂದೆಡೆ ಆರಂಭಿಕ ಎರಡು ಪಂದ್ಯಗಳನ್ನು ಸೋತ ನಂತರ ಅದ್ಭುತ ರೀತಿಯಲ್ಲಿ ಕಮ್‌ಬ್ಯಾಕ್ ಮಾಡಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದ ಎಲ್ಲಾ ಪಂದ್ಯಗಳನ್ನು ಗೆಲ್ಲುತ್ತಾ ಅಬ್ಬರಿಸುತ್ತಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಗುಜರಾತ್ ಟೈಟನ್ಸ್ ತಂಡವನ್ನು ಟೂರ್ನಿಯಲ್ಲಿ ಸೋಲಿಸಿರುವ ಏಕೈಕ ತಂಡವಾಗಿದ್ದು ಬುಧವಾರ ನಡೆಯಲಿರುವ ಪಂದ್ಯದಲ್ಲಿಯೂ ಈ ಪ್ರದರ್ಶನವನ್ನು ಮುಂದುವರಿಸುವ ಉತ್ಸಾಹದಲ್ಲಿದೆ ಸನ್‌ರೈಸರ್ಸ್ ಹೈದರಾಬಾದ್ ತಂಡ.

ಸ್ಕ್ವಾಡ್‌ಗಳು: ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ರಶೀದ್ ಖಾನ್, ಮೊಹಮ್ಮದ್ ಶಮಿ, ಲಾಕಿ ಫರ್ಗುಸನ್, ಅಭಿನವ್ ಸದಾರಂಗನಿ, ರಾಹುಲ್ ತೆವಾಟಿಯಾ, ನೂರ್ ಅಹ್ಮದ್, ಆರ್ ಸಾಯಿ ಕಿಶೋರ್, ಡೊಮಿನಿಕ್ ಡ್ರೇಕ್ಸ್, ಜಯಂತ್ ಯಾದವ್, ವಿಜಯ್ ಶಂಕರ್, ದರ್ಶನ್ ನಲ್ಕಂಡೆ, ಯಶ್ ದಯಾಳ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಗುರುಕೀರತ್ ಸಿಂಗ್, ವರುಣ್ ಆರೋನ್, ಬಿ ಸಾಯಿ ಸುದರ್ಶನ್, ರಹಮಾನುಲ್ಲಾ ಗುರ್ಬಾಜ್

ಸನ್‌ರೈಸರ್ಸ್ ಹೈದರಾಬಾದ್: ಕೇನ್ ವಿಲಿಯಮ್ಸನ್ (ನಾಯಕ), ಅಬ್ದುಲ್ ಸಮದ್, ಉಮ್ರಾನ್ ಮಲಿಕ್, ವಾಷಿಂಗ್ಟನ್ ಸುಂದರ್, ನಿಕೋಲಸ್ ಪೂರನ್, ಟಿ ನಟರಾಜನ್, ಭುವನೇಶ್ವರ್ ಕುಮಾರ್, ಪ್ರಿಯಮ್ ಗಾರ್ಗ್, ರಾಹುಲ್ ತ್ರಿಪಾಠಿ, ಅಭಿಷೇಕ್ ಶರ್ಮಾ, ಕಾರ್ತಿಕ್ ತ್ಯಾಗಿ, ಶ್ರೇಯಸ್ ಗೋಪಾಲ್, ಜಗದೀಶ ಸುಚಿತ್, ಐಡೆನ್ ಮಾರ್ಕ್ರಾಮ್, ಮಾರ್ಕೊ ಜಾನ್ಸೆನ್, ರೊಮಾರಿಯೊ ಶೆಫರ್ಡ್, ಸೀನ್ ಅಬಾಟ್, ಆರ್ ಸಮರ್ಥ್, ಸೌರಭ್ ದುಬೆ, ಶಶಾಂಕ್ ಸಿಂಗ್, ವಿಷ್ಣು ವಿನೋದ್, ಗ್ಲೆನ್ ಫಿಲಿಪ್ಸ್, ಫಜಲ್ಹಕ್ ಫಾರೂಕಿ.

ಪಂದ್ಯದ ದಿನಾಂಕ, ಸಮಯ ಹಾಗೂ ಸ್ಥಳ: ಗುಜರಾತ್ ಟೈಟನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯ ಏಪ್ರಿಲ್ 27 ರಂದು ಬುಧವಾರ ನಡೆಯಲಿದ್ದು ಸಂಜೆ 7:30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ: ವಾಂಖೆಡೆ ಕ್ರೀಡಾಂಗಣದ ಪಿಚ್ ಬ್ಯಾಟರ್‌ಗಳಿಗೆ ಸ್ವರ್ಗ ಎನಿಸಿಕೊಂಡಿದೆ. ಜಿಟಿ ಹಾಗೂ ಎಸ್‌ಆರ್‌ಹೆಚ್ ಎರಡೂ ತಂಡಗಳ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದಲ್ಲಿ ಬಲಿಷ್ಠ ಆಟಗಾರರನ್ನು ಹೊಂದಿರುವ ಕಾರಣ ಕದನ ಸಾಕಷ್ಟು ಕುತೂಹಲಕಾರಿಯಾಗಿದೆ. ಇನ್ನಿಂಗ್ಸ್‌ನ ಆರಂಭದಲ್ಲಿ ವೇಗಿಗಳಿಗೆ ಸ್ವಲ್ಪ ನೆರವು ಸಿಗಬಹುದು. ಇನ್ನು ಇಬ್ಬನಿ ಈ ಪಂದ್ಯದಲ್ಲಿಯೂ ಹೆಚ್ಚಿನ ಪರಿಣಾಮವನ್ನು ಬೀರಬಹುದು.

ಸಂಭಾವ್ಯ ಆಡುವ ಬಳಗ: ಗುಜರಾತ್ ಟೈಟಾನ್ಸ್: ಶುಬ್ಮನ್ ಗಿಲ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಯಶ್ ದಯಾಲ್, ಲಾಕಿ ಫರ್ಗುಸನ್

ಸನ್‌ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್, ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಶಶಾಂಕ್ ಸಿಂಗ್, ಜಗದೀಶ ಸುಚಿತ್/ವಾಷಿಂಗ್ಟನ್ ಸುಂದರ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್, ಟಿ ನಟರಾಜನ್

Story first published: Tuesday, April 26, 2022, 20:38 [IST]
Other articles published on Apr 26, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+