ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

SRH vs KKR Preview: ಪ್ರಿವ್ಯೂ, ಸಂಭಾವ್ಯ ತಂಡ, ಪಿಚ್ ರಿಪೋರ್ಟ್, ಹವಾಮಾನ ವರದಿ

IPL 2022: SRH vs KKR Preview, Predicted Playing 11, Pitch Report, And Weather Forecast

ಐಪಿಎಲ್ 15ನೇ ಆವೃತ್ತಿಯ 25ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಈ ಭಾರಿಯ ಆವೃತ್ತಿಯಲ್ಲಿ ಉತ್ತಮ ಆರಂಭವನ್ನು ಪಡೆದುಕೊಂಡಿದೆ. ಆದರೆ ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲು ಅನುಭವಿಸಿದ್ದು ಮತ್ತೆ ಗೆಲುವಿನ ಹಾದಿಗೆ ಮರಳುವ ಪ್ರಯತ್ನ ನಡೆಸಲಿದೆ. ಇತ್ತ ಸನ್‌ರೈಸರ್ಸ್ ಹೈದರಾಬಾದ ತಂಡ ಮೊದಲ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದ ಬಳಿಕ ಈಗ ಗೆಲುವಿನ ಹಾದಿ ಕಂಡುಕೊಂಡಿದ್ದು ಸತತ ಎರಡು ಗೆಲುವು ಸಾಧಿಸಿ ಹ್ಯಾಟ್ರಿಕ್ ಗೆಲುವಿನತ್ತ ಚಿತ್ತ ನೆಟ್ಟಿದೆ.

ಸನ್‌ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕ ಆಟಗಾರರಾದ ನಾಯಕ ಕೇನ್ ವಿಲಿಯಮ್ಸನ್ ಹಾಗೂ ಅಭಿಷೇಕ್ ಶರ್ಮಾ ಇಬ್ಬರೂ ಫಾರ್ಮ್‌ಗೆ ಮರಳಿದ್ದಾರೆ. ಇತರ ಆಟಗಾರರಿಂದಲೂ ಉತ್ತಮ ಕೊಡುಗೆ ದೊರೆಯುವ ನಿರೀಕ್ಷೆಗಳಿದೆ. ಸನ್‌ರೈಸರ್ಸ್ ಹೈದರಾಬಾದ್ ಪಡೆಯ ಬೌಲಿಂಗ್ ಅದ್ಭುತವಾಗಿದ್ದು ಭುವನೇಶ್ವರ್ ಕುಮಾರ್ ನೇತೃತ್ವದ ಬೌಲಿಂಗ್ ಪಡೆಗೆ ನಟರಾಜನ್, ಉಮ್ರಾನ್ ಮಲಿಕ್ ಮತ್ತು ಮಾರ್ಕೋ ಜಾನ್ಸನ್ ಉತ್ತಮ ಲಯದಲ್ಲಿದ್ದಾರೆ. ಇತ್ತ ಸನ್‌ರೈಸರ್ಸ್ ಹೈದರಾಬಾದ್ ತಂಡದ ಆಡುವ ಬಳಗಕ್ಕೆ ಆರೋನ್ ಫಿಂಚ್ ಸೇರ್ಪಡೆಯಾಗುವ ಸಾಧ್ಯತೆಯಿದ್ದು ವೆಂಕಟೇಶ್ ಐಯ್ಯರ್ ಹಾಗೂ ಆರೋನ್ ಫಿಂಚ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಇನ್ನು ವೇಗಿ ಉಮೇಶ್ ಯಾದವ್ ಅದ್ಭುತ ಫಾರ್ಮ್‌ನಲ್ಲಿದ್ದು ಎದುರಾಳಿಗೆ ಯಾವ ರೀತಿ ಕಂಟಕವಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ

IPL 2022: SRH vs KKR Preview, Predicted Playing 11, Pitch Report, And Weather Forecast

IPL 2022: ಸತತ 5 ಪಂದ್ಯ ಸೋತ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್‌IPL 2022: ಸತತ 5 ಪಂದ್ಯ ಸೋತ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್‌

ಸ್ಕ್ವಾಡ್‌ಗಳು: ಸನ್‌ರೈಸರ್ಸ್ ಹೈದರಾಬಾದ್: ಕೇನ್ ವಿಲಿಯಮ್ಸನ್ (ನಾಯಕ), ಅಬ್ದುಲ್ ಸಮದ್, ಉಮ್ರಾನ್ ಮಲಿಕ್, ವಾಷಿಂಗ್ಟನ್ ಸುಂದರ್, ನಿಕೋಲಸ್ ಪೂರನ್, ಟಿ ನಟರಾಜನ್, ಭುವನೇಶ್ವರ್ ಕುಮಾರ್, ಪ್ರಿಯಮ್ ಗಾರ್ಗ್, ರಾಹುಲ್ ತ್ರಿಪಾಠಿ, ಅಭಿಷೇಕ್ ಶರ್ಮಾ, ಕಾರ್ತಿಕ್ ತ್ಯಾಗಿ, ಶ್ರೇಯಸ್ ಗೋಪಾಲ್, ಜಗದೀಶ ಸುಚಿತ್, ಐಡೆನ್ ಮಾರ್ಕ್ರಾಮ್, ಮಾರ್ಕೊ ಜಾನ್ಸೆನ್, ರೊಮಾರಿಯೊ ಶೆಫರ್ಡ್, ಸೀನ್ ಅಬಾಟ್, ಆರ್ ಸಮರ್ಥ್, ಸೌರಭ್ ದುಬೆ, ಶಶಾಂಕ್ ಸಿಂಗ್, ವಿಷ್ಣು ವಿನೋದ್, ಗ್ಲೆನ್ ಫಿಲಿಪ್ಸ್, ಫಜಲ್ಹಕ್ ಫಾರೂಕಿ.

ಕೊಲ್ಕತ್ತಾ ನೈಟ್ ರೈಡರ್ಸ್: ಆಂಡ್ರೆ ರಸೆಲ್, ವರುಣ್ ಚಕ್ರವರ್ತಿ, ವೆಂಕಟೇಶ್ ಅಯ್ಯರ್, ಸುನಿಲ್ ನರೈನ್, ಶ್ರೇಯಸ್ ಅಯ್ಯರ್(ನಾಯಕ), ಪ್ಯಾಟ್ ಕಮ್ಮಿನ್ಸ್, ಅಭಿಜೀತ್ ತೋಮರ್, ಸ್ಯಾಮ್ ಬಿಲ್ಲಿಂಗ್ಸ್, ಆರೋನ್ ಫಿಂಚ್, ರಮೇಶ್ ಕುಮಾರ್, ಮೊಹಮ್ಮದ್ ನಬಿ, ಅಮನ್ ಖಾನ್, ಉಮೇಶ್ ಯಾದವ್, ನಿತೀಶ್ ರಾಣಾ, ಶಿವಂ ಮಾವಿ, ಶೆಲ್ಡನ್ ಜಾಕ್ಸನ್ , ರಿಂಕು ಸಿಂಗ್, ಅನುಕುಲ್ ರಾಯ್, ರಸಿಖ್ ದಾರ್, ಚಮಿಕಾ ಕರುಣಾರತ್ನೆ, ಬಾಬಾ ಇಂದ್ರಜಿತ್, ಅಶೋಕ್ ಶರ್ಮಾ, ಪ್ರಥಮ್ ಸಿಂಗ್.

ಪಂದ್ಯದ ದಿನಾಂಕ, ಸಮಯ ಹಾಗೂ ಸ್ಥಳ: ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯ ಏಪ್ರಿಲ್ 15 ರಂದು ಶುಕ್ರವಾರ ನಡೆಯಲಿದ್ದು ಸಂಜೆ 7:30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಮುಂಬೈನ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ: ಬ್ರೆಬೋರ್ನ್ ಕ್ರೀಡಾಂಗಣದ ಪಿಚ್ ಸಾಮಾನ್ಯವಾಗಿ ಬ್ಯಾಟರ್ ಹಾಗೂ ಬೌಲರ್‌ ಇಬ್ಬರಿಗೂ ಸಮಾನಾಗಿ ಬೆಂಬಲ ನೀಡುವ ಪಿಚ್ ಆಗಿದೆ. ಪಂದ್ಯ ಮುಂದುವರಿಯುತ್ತಿದ್ದಂತೆ ಇಬ್ಬನಿ ಬೀಳುವ ಕಾರಣ ಎರಡನೇ ಸರದಿಯಲ್ಲಿ ಬೌಲಿಂಗ್ ತಡೆಸುವ ತಂಡಗಳು ಸವಾಲನ್ನು ಎದುರಿಸುತ್ತದೆ. ಈ ಅಂಗಳದಲ್ಲಿನ ಮೊದಲ ಇನ್ನಿಂಗ್ಸ್‌ನ ಸರಾಸರಿ ಮೊತ್ತ 180 ಆಗಿದೆ.

ರಶೀದ್ ಖಾನ್‌ರನ್ನ SRH ರೀಟೈನ್ ಮಾಡದೆ ಇರಲು, ಕಾರಣ ತಿಳಿಸಿದ ಮುತ್ತಯ್ಯ ಮುರಳೀಧರನ್ರಶೀದ್ ಖಾನ್‌ರನ್ನ SRH ರೀಟೈನ್ ಮಾಡದೆ ಇರಲು, ಕಾರಣ ತಿಳಿಸಿದ ಮುತ್ತಯ್ಯ ಮುರಳೀಧರನ್

ಸಂಭಾವ್ಯ ಆಡುವ ಬಳಗ: ಸನ್‌ರೈಸರ್ಸ್ ಹೈದರಾಬಾದ್: ಕೇನ್ ವಿಲಿಯಮ್ಸನ್ (ನಾಯಕ), ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಶಶಾಂಕ್ ಸಿಂಗ್, ಮಾರ್ಕೊ ಜಾನ್ಸೆನ್, ಶ್ರೇಯಸ್ ಗೋಪಾಲ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್ ಮತ್ತು ಟಿ ನಟರಾಜನ್

ಕೊಲ್ಕತ್ತಾ ನೈಟ್ ರೈಡರ್ಸ್: ವೆಂಕಟೇಶ್ ಅಯ್ಯರ್, ಆರೋನ್ ಫಿಂಚ್, ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ಆಂಡ್ರೆ ರಸೆಲ್, ಶೆಲ್ಡನ್ ಜಾಕ್ಸನ್ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್, ಸುನಿಲ್ ನರೈನ್, ಉಮೇಶ್ ಯಾದವ್, ರಸಿಖ್ ಸಲಾಂ ಮತ್ತು ವರುಣ್ ಚಕ್ರವರ್ತಿ

Story first published: Thursday, April 14, 2022, 17:21 [IST]
Other articles published on Apr 14, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X