LSG vs SRH: ರಾಹುಲ್, ಹೂಡಾ ಹೋರಾಟ: ಹೈದರಾಬಾದ್‌ಗೆ ಸವಾಲಿನ ಗುರಿ ನೀಡಿದ ಲಕ್ನೋ

ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸಿದ ಕೆಎಲ್ ರಾಹುಲ್ ಬಳಗ ಆರಂಭಿಕ ಆಘಾತದಿಂದ ಅದ್ಭುತ ರೀತಿಯಲ್ಲಿ ಚೇತರಿಸಿಕೊಂಡಿದೆ. ಈ ಮೂಲಕ ಎದುರಾಳಿ ತಂಡಕ್ಕೆ ಲಕ್ನೋ ಸವಾಲಿನ ಗುರಿ ನಿಗದಿಪಡಿಸುವಲ್ಲಿ ಯಶಸ್ವಿಯಾಯಿತು. ನಾಯಕ ಕೆಎಲ್ ರಾಹುಲ್ ಹಾಗೂ ದೀಪಕ್ ಹೂಡಾ ಅವರ ನಿರ್ಣಾಯಕ ಪ್ರದರ್ಶನ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಆಸರೆಯಾಯಿತು. ನಿಗದಿತ 20 ಓವರ್‌ಗಳಲ್ಲಿ ಎಲ್‌ಎಸ್‌ಜಿ ತಂಡ 7 ವಿಕೆಟ್ ಕಳೆದುಕೊಂಡು 169 ರನ್‌ಗಳಿಸಿದೆ.
ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್‌ಗೆ ಇಳಿದ ಲಕ್ನೋ ತಂಡ ಆರಂಭೀಕ ಆಘಾತವನ್ನು ಅನುಭವಿಸಿತು. ಪ್ರಮುಖ ಮೂರು ವಿಕೆಟ್‌ಗಳನ್ನು ಲಕ್ನೋ 27 ರನ್‌ಗಳಿಸುವಷ್ಟರಲ್ಲಿ ಕಳೆದುಕೊಂಡಿತ್ತು. ಹೀಗಾಗಿ ಅಲ್ಪ ಮೊತ್ತಕ್ಕೆ ಕುಸಿಯುವ ಬೀತಿಯನ್ನು ಎದುರಿಸಿತ್ತು. ಆದರೆ ನಾಯಕ ರಾಹುಲ್ ಹಾಗೂ ದೀಪಕ್ ಹೂಡಾ ಅದ್ಭುತವಾಗಿ ಇನ್ನಿಂಗ್ಸ್ ಕಟ್ಟಿದರು. ಈ ಇಬ್ಬರು ಆಟಗಾರರು ಕುಡ ತಲಾ ಅರ್ಧ ಶತಕ ಸಿಡಿಸುವಲ್ಲಿ ಯಶಸ್ವಿಯಾದರು. ಕೆಎಲ್ ರಾಹುಲ್ 68 ರನ್‌ಗಳಿಸಿದರೆ ದೀಪಕ್ ಹೂಡಾ 51 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರವಾಗಿ ಈ ಇಬ್ಬರು ಆಟಗಾರರನ್ನು ಹೊರತುಪಡಿಸಿ ಉಳಿದ ಯಾವುದೇ ಆಟಗಾರನಿಂದಲೂ ಉತ್ತಮ ಪ್ರದರ್ಶನ ಬರಲಿಲ್ಲ.

ಈ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಸ್ಪಿನ್ನರ್ ವಾಶಿಂಗ್ಟನ್ ಸುಂದರ್ ಆರಂಭದಲ್ಲಿಯೇ ಎರಡು ವಿಕೆಟ್ ಪಡೆಯುವ ಮೂಲಕ ಎದುರಾಳಿಗೆ ಆಘಾತ ನೀಡಿದರು. ರೊಮಾರಿಯೋ ಶೆಫರ್ಡ್ ಹಾಗೂ ಟಿ ನಟರಾಜನ್ ಕೂಡ ಎರಡು ವಿಕೆಟ್ ಕಬಳಿಸಿ ಮಿಂಚಿದರು.
ಲಕ್ನೋ ಸೂಪರ್ ಜೈಂಟ್ಸ್ ತಂಡ ನೀಡಿದ ಸವಾಲಿನ ಗುರಿಯನ್ನು ಸನ್‌ರೈಸರ್ಸ್ ಹೈದರಾಬಾದ್ ತಂಡ ಬೆನ್ನಟ್ಟಲು ಆರಂಭಿಸಿದೆ. ಟೂರ್ನಿಯಲ್ಲಿ ಹೈದರಾಬಾದ್ ಈವರೆಗೆ ಎರಡು ಪಂದ್ಯಗಳನ್ನಾಡಿದ್ದು ಎರಡರಲ್ಲಿಯೂ ಸೋಲು ಅನುಭವಿಸಿದೆ. ಹೀಗಾಗಿ ಮೊದಲ ಗೆಲುವಿಗಾಗಿ ಕೇನ್ ಬಳಗ ಹರಸಾಹಸ ಪಡಿಸುತ್ತಿದೆ.
ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI: ಕೇನ್ ವಿಲಿಯಮ್ಸನ್ (ನಾಯಕ), ಅಭಿಷೇಕ್ ಶರ್ಮಾ, ಏಡೆನ್ ಮಾರ್ಕ್ರಾಮ್, ರಾಹುಲ್ ತ್ರಿಪಾಠಿ, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಅಬ್ದುಲ್ ಸಮದ್, ರೊಮಾರಿಯೋ ಶೆಫರ್ಡ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಟಿ ನಟರಾಜನ್, ಉಮ್ರಾನ್ ಮಲಿಕ್
ಬೆಂಚ್ ಶ್ರೇಯಸ್ ಗೋಪಾಲ್, ಜಗದೀಶ ಸುಚಿತ್, ಗ್ಲೆನ್ ಫಿಲಿಪ್ಸ್, ಶಶಾಂಕ್ ಸಿಂಗ್, ರವಿಕುಮಾರ್ ಸಮರ್ಥ್, ವಿಷ್ಣು ವಿನೋದ್, ಪ್ರಿಯಾಂ ಗಾರ್ಗ್, ಕಾರ್ತಿಕ್ ತ್ಯಾಗಿ, ಫಜಲ್ಹಕ್ ಫಾರೂಕಿ, ಮಾರ್ಕೊ ಜಾನ್ಸೆನ್, ಸೌರಭ್ ದುಬೆ
ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ಎವಿನ್ ಲೂಯಿಸ್, ದೀಪಕ್ ಹೂಡಾ, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಜೇಸನ್ ಹೋಲ್ಡರ್, ಆಂಡ್ರ್ಯೂ ಟೈ, ರವಿ ಬಿಷ್ಣೋಯ್, ಅವೇಶ್ ಖಾನ್
ಬೆಂಚ್: ಶಹಬಾಜ್ ನದೀಮ್, ಕೃಷ್ಣಪ್ಪ ಗೌತಮ್, ಅಂಕಿತ್ ರಾಜ್‌ಪೂತ್, ಮೊಹ್ಸಿನ್ ಖಾನ್, ಕರಣ್ ಶರ್ಮಾ, ಮಯಾಂಕ್ ಯಾದವ್, ಕೈಲ್ ಮೇಯರ್ಸ್, ಮನನ್ ವೋಹ್ರಾ, ದುಷ್ಮಂತ ಚಮೀರಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications