SRH vs PBKS: ಲಿವಿಂಗ್‌ಸ್ಟನ್ ಏಕಾಂಗಿ ಹೋರಾಟ; 151 ರನ್‌ಗಳಿಗೆ ಇನ್ನಿಂಗ್ಸ್ ಮುಗಿಸಿದ ಪಂಜಾಬ್

ಐಪಿಎಲ್‌ನಲ್ಲಿ ಇಂದು ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಪಂಜಾಬ್ ಕಿಂಗ್ಸ್ ಮಧ್ಯೆ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದೆ. ನಿಗದಿತ 20 ಓವರ್‌ಗಳಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 151 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿದೆ. ಈ ಮೊತ್ತವನ್ನು ಕೇನ್ ವಿಲಿಯಮ್ಸನ್ ಪಡೆ ಬೆನ್ನಟ್ಟಲು ಯಶಸ್ವಿಯಾಗಲಿದೆಯಾ ಅಥವಾ ಪಂಜಾಬ್ ಕಿಂಗ್ಸ್ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಲಿದೆಯಾ ಎಂಬುದು ಕುತೂಹಲ ಮೂಡಿಸಿದೆ.
ಕೈ ಬೆರಳಿಗೆ ಗಾಯ ಮಾಡಿಕೊಂಡಿರುವ ಕಾರಣ ಪಂಜಾಬ್ ಕಿಂಗ್ಸ್ ತಂಡದ ನಾಯಕ ಮಯಾಂಕ್ ಅಗರ್ವಾಲ್ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಹೀಗಾಗಿ ಶಿಖರ್ ಧವನ್ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಆರಂಭಿಕನಾಗಿ ಶಿಖರ್ ಧವನ್‌ಗೆ ಪ್ರಭ್‌ಸಿಮ್ರಾನ್ ಸಾಥ್ ನೀಡಿದ್ದರು. ಆದರೆ ಉತ್ತಮ ಆರಂಭ ಈ ಜೊಡಿಯಿಂದ ದೊರೆಯಲಿಲ್ಲ. ಶಿಖರ್ ಧವನ್ ತಂಡದ ಮೊತ್ತ 10 ರನ್ ಆಗುವಷ್ಟರಲ್ಲಿ ವಿಕೆಟ್ ಒಪ್ಪಿಸಿ ಫೆವಿಲಿಯನ್‌ಗೆ ಸೇರಿಕೊಂಡರು. ಪ್ರಭ್‌ಸಿಮ್ರಾನ್, ಜಾನಿ ಬೈರ್‌ಸ್ಟೋವ್, ಜಿತೇಶ್ ಶರ್ಮಾ ಕೂಡ ವೈಫಲ್ಯ ಅನುಭವಿಸುವ ಮೂಲಕ ಎಸ್‌ಆರ್‌ಹೆಚ್ ಬೌಲರ್‌ಗಳ ಮೇಲುಗೈಗೆ ಕಾರಣವಾದರು.
ಆದರೆ ಲಿಯಾಮ್ ಲಿವಿಂಗ್‌ಸ್ಟನ್ ಈ ಪಂದ್ಯದಲ್ಲಿಯೂ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. 33 ಎಸೆತಗಳನ್ನು ಎದುರಿಸಿದ ಲಿವಿಂಗ್‌ಸ್ಟನ್ 60 ರನ್‌ಗಳ ಕೊಡುಗೆ ನೀಡುವ ಮೂಲಕ ಪಂಜಾಬ್ ಕಿಂಗ್ಸ್ ತಂಡ ಸವಾಲಿನ ಮೊತ್ತ ಪೇರಿಸಲು ಕಾರಣವಾದರು. ಶಾರೂಖ್ ಖಾನ್ ತಮ್ಮ ಸಾಮಾನ್ಯ ಶೈಲಿಯ ಬ್ಯಾಟಿಂಗ್ ನಡೆಸದೆ ನಿಧಾನಗತಿಯಿಂದ ಬ್ಯಾಟ್ ಬೀಸಿದರೂ ಒಂದುಹಂತದಲ್ಲಿ ವಿಕೆಟ್ ಬೀಳದಂತೆ ತಡೆಯುವಲ್ಲಿ ಯಶಸ್ವಿಯಾದರು.
ಇನ್ನು ಈ ಪಂದ್ಯದಲ್ಲಿ ಉಮ್ರಾನ್ ಮಲಿಕ್ ಅಂತಿಮ ಓವರ್ ಅನ್ನು ಮೇಡನ್ ಓವರ್ ಮಾಡಿದ್ದಲ್ಲದೆ ಪಂಜಾಬ್ ಕಿಂಗ್ಸ್ ತಂಡ ಈ ಒಂದು ಓವರ್‌ನಲ್ಲಿಯೇ ನಾಲ್ಕು ವಿಕೆಟ್ ಕಳೆದುಕೊಳ್ಳುವಂತೆ ಮಾಡಿದರು. ಇದರಲ್ಲಿ ಒಂದು ರನ್‌ಔಟ್ ಕೂಡ ಸೇರಿದೆ. ಉಮ್ರಾನ್ ಮಲಿಕ್ ಈ ಪಂದ್ಯದಲ್ಲಿ ಒಟ್ಟು 4 ವಿಕೆಟ್ ಸಂಪಾದಿಸಿದರು. ಇನ್ನು ಅನುಭವಿ ಭುವನೇಶ್ವರ್ ಕುಮಾರ್ ಮಹತ್ವದ 3 ವಿಕೆಟ್ ಪಡೆಯುವ ಮೂಲಕ ತಂಡ ಬೌಲಿಂಗ್‌ನಲ್ಲಿ ಮೇಲುಗೈ ಸಾಧಿಸಲು ಕಾರಣವಾದರು. ನಟರಾಜನ್ ಹಾಗೂ ಸುಜಿತ್ ತಲಾ ಒಂದು ವಿಕೆಟ್ ಸಂಪಾದಿಸಿದ್ದಾರೆ
ಪಂಜಾಬ್ ಕಿಂಗ್ಸ್: ಶಿಖರ್ ಧವನ್ (ನಾಯಕ), ಪ್ರಭಾಸಿಮ್ರಾನ್ ಸಿಂಗ್, ಜಾನಿ ಬೈರ್‌ಸ್ಟೋ, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್ ), ಶಾರುಖ್ ಖಾನ್, ಓಡಿಯನ್ ಸ್ಮಿತ್, ಕಗಿಸೊ ರಬಾಡ, ರಾಹುಲ್ ಚಾಹರ್, ವೈಭವ್ ಅರೋರಾ, ಅರ್ಶ್‌ದೀಪ್ ಸಿಂಗ್
ಬೆಂಚ್: ಮಯಾಂಕ್ ಅಗರ್ವಾಲ್, ಬೆನ್ನಿ ಹೋವೆಲ್, ಸಂದೀಪ್ ಶರ್ಮಾ, ರಿಷಿ ಧವನ್, ಬಲ್ತೇಜ್ ಸಿಂಗ್, ರಿಟಿಕ್ ಚಟರ್ಜಿ, ಪ್ರೇರಕ್ ಮಂಕಡ್, ಇಶಾನ್ ಪೊರೆಲ್, ಅಥರ್ವ ಟೈಡೆ, ಹರ್ಪ್ರೀತ್ ಬ್ರಾರ್, ನಾಥನ್ ಎಲ್ಲಿಸ್, ಅನ್ಶ್ ಪಟೇಲ್, ರಾಜ್ ಬಾವಾ, ಭಾನುಕಾ ರಾಜಪಕ್ಸೆ
ಸನ್‌ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್ (ನಾಯಕ), ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಶಶಾಂಕ್ ಸಿಂಗ್, ಜಗದೀಶ ಸುಚಿತ್, ಭುವನೇಶ್ವರ್ ಕುಮಾರ್, ಮಾರ್ಕೊ ಜಾನ್ಸೆನ್, ಉಮ್ರಾನ್ ಮಲಿಕ್, ಟಿ ನಟರಾಜನ್
ಪೀಠ: ಸೀನ್ ಅಬಾಟ್, ರವಿಕುಮಾರ್ ಸಮರ್ಥ್, ಶ್ರೇಯಸ್ ಗೋಪಾಲ್, ಗ್ಲೆನ್ ಫಿಲಿಪ್ಸ್, ವಿಷ್ಣು ವಿನೋದ್, ಪ್ರಿಯಮ್ ಗಾರ್ಗ್, ಕಾರ್ತಿಕ್ ತ್ಯಾಗಿ, ರೊಮಾರಿಯೋ ಶೆಫರ್ಡ್, ಫಜಲ್ಹಕ್ ಫಾರೂಕಿ, ಅಬ್ದುಲ್ ಸಮದ್, ಸೌರಭ್ ದುಬೆ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications