IPL 2022: ಟೀಮ್ ಇಂಡಿಯಾಗೆ ಹಾರ್ದಿಕ್ ಪಾಂಡ್ಯ ನಾಯಕ?; ಮಾಜಿ ಕ್ರಿಕೆಟಿಗ ಗವಾಸ್ಕರ್ ಹೇಳಿದ್ದಿಷ್ಟು

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮೇ 29ರ ಭಾನುವಾರದಂದು ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ಮತ್ತು ಗುಜರಾತ್ ಟೈಟನ್ಸ್ ನಡುವಿನ ಫೈನಲ್ ಪಂದ್ಯದ ಮೂಲಕ ಅಂತ್ಯಗೊಂಡಿದೆ.
ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಹಾರ್ದಿಕ್ ಪಾಂಡ್ಯ ಬಳಗ 7 ವಿಕೆಟ್‍ಗಳ ಭರ್ಜರಿ ಜಯ ಸಾಧಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ 9 ವಿಕೆಟ್ ನಷ್ಟಕ್ಕೆ 130 ರನ್ ಕಲೆಹಾಕಿತು. ನಂತರ ಸಾಧಾರಣ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟನ್ 18.1 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 133 ರನ್ ಕಲೆಹಾಕಿ ಚಾಂಪಿಯನ್ ಆಗಿ ಹೊರಹೊಮ್ಮಿತು.
ಈ ಮೂಲಕ ಈ ಬಾರಿಯ ಐಪಿಎಲ್ ಆವೃತ್ತಿಯ ಆರಂಭದಲ್ಲಿ ಗುಜರಾತ ಟೈಟಾನ್ಸ್ ತಂಡಕ್ಕೆ ಹಾರ್ದಿಕ್ ಪಾಂಡ್ಯ ನಾಯಕನಾಗಲಿದ್ದಾರೆ ಎಂದಾಗ ದೊಡ್ಡ ಮಟ್ಟದಲ್ಲಿ ಟೀಕೆ ವ್ಯಕ್ತಪಡಿಸಿದ್ದ ಹಾಗೂ ಕಾಲೆಳೆದಿದ್ದ ಹಲವಾರು ವಿರೋಧಿಗಳಿಗೆ ಹಾರ್ದಿಕ್ ಪಾಂಡ್ಯ ತಕ್ಕ ಉತ್ತರ ನೀಡಿದ್ದಾರೆ. ಬೌಲಿಂಗ್ ಕೂಡ ಮಾಡಲಾಗದ ಈತ ತಂಡವನ್ನು ಹೇಗೆ ಮುನ್ನಡೆಸುತ್ತಾನೆ, ಪಾಂಡ್ಯ ನಾಯಕತ್ವದಲ್ಲಿ ಕಣಕ್ಕಿಳಿಯಲಿರುವ ತಂಡ ಮುಗ್ಗರಿಸಲಿದೆ ಎಂಬ ಅಭಿಪ್ರಾಯಗಳು ದೊಡ್ಡಮಟ್ಟದಲ್ಲಿ ವ್ಯಕ್ತವಾಗಿದ್ದವು. ಆದರೆ ಇದೀಗ ಹಾರ್ದಿಕ್ ಪಾಂಡ್ಯ ಅಬ್ಬರವನ್ನು ಕಂಡ ಹಲವಾರು ಟೀಕಾಕಾರರು ಪಾಂಡ್ಯ ಅವರೇ ಮುಂಬರುವ ದಿನಗಳಲ್ಲಿ ಟೀಮ್ ಇಂಡಿಯಾವನ್ನು ನಾಯಕನಾಗಿ ಮುನ್ನಡೆಸಬೇಕು ಎಂಬ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ಸಾಲಿಗೆ ಇದೀಗ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕೂಡ ಸೇರಿಕೊಂಡಿದ್ದು, ಈ ಕೆಳಕಂಡಂತೆ ಹೇಳಿಕೆ ನೀಡಿದ್ದಾರೆ.

ಪಾಂಡ್ಯಗೆ ಟೀಮ್ ಇಂಡಿಯಾ ಮುನ್ನಡೆಸುವ ಸಾಮರ್ಥ್ಯವಿದೆ
ಹಾರ್ದಿಕ್ ಪಾಂಡ್ಯಗೆ ಮುಂಬರುವ ದಿನಗಳಲ್ಲಿ ಟೀಮ್ ಇಂಡಿಯಾದ ನಾಯಕತ್ವವನ್ನು ನೀಡುವುದರ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಸುನೀಲ್ ಗವಾಸ್ಕರ್ ಖಂಡಿತವಾಗಿಯೂ ಪಾಂಡ್ಯ ಟೀಮ್ ಇಂಡಿಯಾದ ಮುಂದಿನ ನಾಯಕನಾಗಬೇಕು, ಇದು ತನ್ನ ಊಹೆ ಮಾತ್ರವಲ್ಲ ಪ್ರತಿಯೊಬ್ಬರ ಊಹೆ ಕೂಡ ಹೌದು ಎಂದು ಹೇಳಿಕೆ ನೀಡಿದ್ದಾರೆ. ಹಾರ್ದಿಕ್ ಪಾಂಡ್ಯ ನಾಯಕನಾಗಿ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ ಎಂದು ಹೊಗಳಿರುವ ಗವಾಸ್ಕರ್ ಪಾಂಡ್ಯಗೆ ಟೀಮ್ ಇಂಡಿಯಾ ಮುನ್ನಡೆಸುವ ಎಲ್ಲಾ ಅರ್ಹತೆಗಳು ಕೂಡ ಇವೆ ಎಂದಿದ್ದಾರೆ.

ಪಾಂಡ್ಯ ಆಲ್ ರೌಂಡರ್ ಆಟದ ಕುರಿತು ಗವಾಸ್ಕರ್ ಮೆಚ್ಚುಗೆ
ಇನ್ನೂ ಮುಂದುವರೆದು ಹಾರ್ದಿಕ್ ಪಾಂಡ್ಯ ವೈಯಕ್ತಿಕ ಆಟದ ಕುರಿತು ಮಾತನಾಡಿದ ಸುನಿಲ್ ಗವಾಸ್ಕರ್ ಟೂರ್ನಿಯ ಆರಂಭಕ್ಕೂ ಮುನ್ನ ಪಾಂಡ್ಯ 4 ಓವರ್ ಬೌಲಿಂಗ್ ಮಾಡುತ್ತಾರಾ ಎಂಬ ಅನುಮಾನ ವ್ಯಕ್ತವಾಗಿತ್ತು. ಆದರೆ ಇದೀಗ ಅದನ್ನೂ ಕೂಡ ಮಾಡಿ ತೋರಿಸಿರುವ ಹಾರ್ದಿಕ್ ಪಾಂಡ್ಯ ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡೂ ವಿಭಾಗಗಳಲ್ಲಿಯೂ ಮಿಂಚಿದ್ದು ತಂಡವನ್ನು ಮುನ್ನಡೆಸಲು ಸರಿಯಾದ ಅಭ್ಯರ್ಥಿ ಎಂದಿದ್ದಾರೆ ಹಾಗೂ ನಾಯಕನ ಸ್ಥಾನಕ್ಕೆ ಈಗಾಗಲೇ ಮೂರ್ನಾಲ್ಕು ಆಟಗಾರರ ಹೆಸರುಗಳು ಓಡಾಡುತ್ತಿದ್ದು, ಹಾರ್ದಿಕ್ ಪಾಂಡ್ಯ ಕೂಡ ಉತ್ತಮ ಆಯ್ಕೆ ಎಂದಿದ್ದಾರೆ.

ಟೂರ್ನಿಯಲ್ಲಿ ಹಾರ್ದಿಕ್ ಪಾಂಡ್ಯ ಪ್ರದರ್ಶನ
ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ 15 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಹಾರ್ದಿಕ್ ಪಾಂಡ್ಯ 487 ರನ್ ದಾಖಲಿಸಿದ್ದು, 8 ವಿಕೆಟ್ ಪಡೆದಿದ್ದಾರೆ. ಅದರಲ್ಲಿಯೂ ಹಾರ್ದಿಕ್ ಪಾಂಡ್ಯಾ ಫೈನಲ್ ಪಂದ್ಯದಲ್ಲಿ ಎದುರಾಳಿ ರಾಜಸ್ಥಾನ್ ರಾಯಲ್ಸ್ ಪರ ತಂಡದ ಪರ ದೊಡ್ಡ ಮೊತ್ತ ಕಲೆ ಹಾಕಬಲ್ಲ ಆಟಗಾರರಾದ ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ ಮತ್ತು ಶಿಮ್ರಾನ್ ಹೆಟ್ಮೆಯರ್ ವಿಕೆಟ್‍ಗಳನ್ನು ಪಡೆದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications