CSK vs SRH: ಸನ್ ರೈಸರ್ಸ್ ಪರ ಅಭಿಷೇಕ್ ಶರ್ಮಾ ಅಬ್ಬರ; ಸತತ ನಾಲ್ಕನೇ ಸೋಲು ಕಂಡ ಸಿಎಸ್‌ಕೆ!

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಏಪ್ರಿಲ್ 9ರಂದು ಎರಡು ಪಂದ್ಯಗಳು ಆಯೋಜನೆಯಾಗಿದ್ದು, ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಸೆಣಸಾಟ ನಡೆಸಿದವು. ಇತ್ತಂಡಗಳ ನಡುವಿನ ಈ ಪಂದ್ಯ ಡಾ ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದು, ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸನ್ ರೈಸರ್ಸ್ ಹೈದರಾಬಾದ್ ಸೋಲುಣಿಸಿದೆ.
ಇನ್ನು ಈ ಪಂದ್ಯಕ್ಕೂ ಮುನ್ನ ಟೂರ್ನಿಯಲ್ಲಿ ಒಟ್ಟು 3 ಪಂದ್ಯಗಳನ್ನಾಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ಎಲ್ಲಾ ಪಂದ್ಯಗಳಲ್ಲಿಯೂ ಸೋಲನ್ನು ಅನುಭವಿಸಿತ್ತು. ಹಾಗೂ 2 ಪಂದ್ಯಗಳನ್ನಾಡಿದ್ದ ಸನ್ ರೈಸರ್ಸ್ ಹೈದರಾಬಾದ್ ಕೂಡ ಯಾವುದೇ ಪಂದ್ಯದಲ್ಲಿಯೂ ಜಯ ಸಾಧಿಸಲಾಗದೇ ಸೋಲನ್ನು ಅನುಭವಿಸಿತ್ತು. ಹೀಗೆ ಟೂರ್ನಿಯಲ್ಲಿ ಗೆಲುವನ್ನೇ ಕಾಣದಿದ್ದ ಇತ್ತಂಡಗಳ ನಡುವಿನ ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ದುಕೊಂಡು ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ರನ್ ಹೊಳೆ ಹರಿಸುವಲ್ಲಿ ವಿಫಲವಾಯಿತು.
ಚೆನ್ನೈ ಸೂಪರ್ ಕಿಂಗ್ಸ್ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ರಾಬಿನ್ ಉತ್ತಪ್ಪ 15 ರನ್ ಗಳಿಸಿ ಔಟ್ ಆದರೆ, ರುತುರಾಜ್ ಗಾಯಕ್ವಾಡ್ 16 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಹೀಗೆ ಉತ್ತಮ ಆರಂಭ ನೀಡುವಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಆರಂಭಿಕ ಆಟಗಾರರು ವಿಫಲರಾದ ನಂತರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮೊಯಿನ್ ಅಲಿ 48 ರನ್ ಗಳಿಸಿದರೆ, ನಂತರ ಕಣಕ್ಕಿಳಿದ ಅಂಬಟಿ ರಾಯುಡು 27 ರನ್, ಶಿವಮ್ ದುಬೆ 3, ರವೀಂದ್ರ ಜಡೇಜಾ 23, ಎಂಎಸ್ ಧೋನಿ 3 ರನ್, ಡ್ವೇನ್ ಬ್ರಾವೋ ಅಜೇಯ 8 ರನ್ ಮತ್ತು ಕ್ರಿಸ್ ಜೋರ್ಡನ್ ಅಜೇಯ 6 ರನ್ ಕಲೆಹಾಕಿದರು. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿ ಎದುರಾಳಿ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ 155 ರನ್‌ಗಳ ಸಾಮಾನ್ಯ ಗುರಿಯನ್ನು ನೀಡಿತು.
ಕಳೆದ ಪಂದ್ಯಗಳಲ್ಲಿ ಸಾಮಾನ್ಯ ಪ್ರದರ್ಶನ ನೀಡಿದ್ದ ಕಾರಣ ಸನ್ ರೈಸರ್ಸ್ ಹೈದರಾಬಾದ್ ಈ ಪಂದ್ಯದಲ್ಲಿ ಈ ಮೊತ್ತವನ್ನು ಬೆನ್ನತ್ತತ್ತಾ ಎಂಬ ಅನುಮಾನ ಹಲವು ಕ್ರಿಕೆಟ್ ಅಭಿಮಾನಿಗಳಲ್ಲಿತ್ತು. ಆದರೆ ಈ ಅನುಮಾನಗಳನ್ನೆಲ್ಲಾ ಸನ್ ರೈಸರ್ಸ್ ಹೈದರಾಬಾದ್ ತಂಡದ ಅಭಿಷೇಕ್ ಶರ್ಮಾ ಹುಸಿಗೊಳಿಸಿದ್ದು, 75 ರನ್ ಬಾರಿಸಿ ಮಿಂಚಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಹೌದು, ಸನ್ ರೈಸರ್ಸ್ ಹೈದರಾಬಾದ್ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಮತ್ತು ನಾಯಕ ಕೇನ್ ವಿಲಿಯಮ್ಸನ್ 89 ರನ್‌ಗಳ ಜತೆಯಾಟವನ್ನಾಡಿ ತಂಡಕ್ಕೆ ಉತ್ತಮ ಆರಂಭವನ್ನು ನೀಡಿದರು. ಕೇನ್ ವಿಲಿಯಮ್ಸನ್ 32 ರನ್ ಗಳಿಸಿ ಔಟ್ ಆದರೆ, ಅಂತಿಮ ಹಂತದವರೆಗೂ ಹೋರಾಡಿ ವಿಕೆಟ್ ಒಪ್ಪಿಸಿದ ಅಭಿಷೇಕ್ ಶರ್ಮಾ 75 ರನ್ ಗಳಿಸಿದರು. ಇನ್ನುಳಿದಂತೆ ರಾಹುಲ್ ತ್ರಿಪಾಠಿ 15 ಎಸೆತಗಳಲ್ಲಿ ಅಜೇಯ 39 ರನ್ ಬಾರಿಸಿ ಅಬ್ಬರಿಸಿದರೆ, ನಿಕೋಲಸ್ ಪೂರನ್ ಅಜೇಯ 5 ರನ್ ಬಾರಿಸಿದರು. ಈ ಮೂಲಕ ಸನ್ ರೈಸರ್ಸ್ ಹೈದರಾಬಾದ್ 17.4 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಜೆ 155 ರನ್ ಕಲೆಹಾಕಿ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ಗೆಲುವಿನ ಖಾತೆ ತೆರೆದಿದೆ. ಹಾಗೂ ಈ ಪಂದ್ಯದಲ್ಲಿ ಹೀನಾಯ ಸೋಲು ಕಂಡ ಚೆನ್ನೈ ಸೂಪರ್ ಕಿಂಗ್ಸ್ ಟೂರ್ನಿಯಲ್ಲಿ ಸತತ ನಾಲ್ಕನೇ ಸೋಲನ್ನು ಕಂಡಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications