ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

SRH vs KKR: ಎಸ್‌ಆರ್‌ಎಚ್ ಗೆಲ್ಲಲು ಉತ್ತಮ ಮೊತ್ತದ ಗುರಿ ನೀಡಿದ ಕೆಕೆಆರ್

IPL 2022: Sunrisers Hyderabad Needs 178 Runs To Win Against Kolkata Knight Riders

ಪ್ರಸ್ತುತ ನಡೆಯುತ್ತಿರುವ 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 61ನೇ ಪಂದ್ಯ ಇಂದು (ಮೇ 14) ಸನ್‌ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯ ಸಾಕಷ್ಟು ಕುತೂಹಲ ಘಟ್ಟಕ್ಕೆ ತಲುಪಿದೆ.

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಟಾಸ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಹೀಗಾಗಿ ಕೇನ್ ವಿಲಿಯಮ್ಸನ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡ ಮೊದಲು ಬೌಲಿಂಗ್ ಮಾಡಿ ಉತ್ತಮ ಮೊತ್ತ ಕಲೆ ಹಾಕಿದೆ.

SRH vs KKR: ಪಂದ್ಯದ ಟಾಸ್ ವರದಿ ಮತ್ತು ಆಡುವ 11ರ ಬಳಗSRH vs KKR: ಪಂದ್ಯದ ಟಾಸ್ ವರದಿ ಮತ್ತು ಆಡುವ 11ರ ಬಳಗ

ಮೊದಲು ಬ್ಯಾಟಿಂಗ್ ಮಾಡಿರುವ ಕೋಲ್ಕತ್ತಾ ನೈಟ್ ರೈಡರ್ಸ್ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 177 ರನ್ ಕಲೆಹಾಕಿದ್ದು, ಸನ್‌ರೈಸರ್ಸ್ ಹೈದರಾಬಾದ್ ಗೆಲುವಿಗೆ 178 ರನ್‌ಗಳ ಟಾರ್ಗೆಟ್ ನೀಡಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಆರಂಭಿಕರಾದ ವೆಂಕಟೇಶ್ ಅಯ್ಯರ್ (7) ಮತ್ತು ಅಜಿಂಕ್ಯಾ ರಹಾನೆ (28) ಅಬ್ಬರಿಸುವ ಮೊದಲೇ ಜೊತೆಯಾಟ ಮುರಿದು ಬಿತ್ತು. ಮಾರ್ಕೋ ಜಾನ್ಸೆನ್ ಬೌಲಿಂಗ್‌ನಲ್ಲಿ ವೆಂಕಟೇಶ್ ಅಯ್ಯರ್ ಬೌಲ್ಡ್ ಆದರು. ನಂತರ ಬಂದ ನಿತೀಶ್ ರಾಣಾ ಜೊತೆಗೂಡಿ ಉತ್ತಮ ರನ್ ಕಲೆ ಹಾಕಿದರು.

IPL 2022: Sunrisers Hyderabad Needs 178 Runs To Win Against Kolkata Knight Riders

ಇನ್ನೇನು ನಿತೀಶ್ ರಾಣಾ (26) ಅಬ್ಬರಿಸುವ ಸೂಚನೆ ಕೊಟ್ಟಾಗಲೇ ಅವರನ್ನು ಉಮ್ರಾನ್ ಮಲ್ಲಿಕ್ ಔಟ್ ಮಾಡಿದರು. ನಂತರ ಅಜಿಂಕ್ಯಾ ರಹಾನೆ ಮಲ್ಲಿಕ್‌ಗೆ ವಿಕೆಟ್ ಒಪ್ಪಿಸಿದರು. ಯುವ ಆಟಗಾರ ರಿಂಕು ಸಿಂಗ್ (6) ಅವರನ್ನು ನಟರಾಜನ್ ಎಲ್‌ಬಿ ಬಲೆಗೆ ಕೆಡವಿದರು.

ನಂತರ 6ನೇ ವಿಕೆಟ್‌ಗೆ ಆಂಡ್ರೆ ರಸೆಲ್ ಮತ್ತು ಸ್ಯಾಮ್ ಬಿಲ್ಲಿಂಗ್ಸ್ ಜೊತೆಗೂಡಿ ಸನ್‌ರೈಸರ್ಸ್ ಹೈದರಾಬಾದ್ ಬೌಲರ್‌ಗಳನ್ನು ದಂಡಿಸಿದರು. ಈ ಜೊತೆಯಾಟವನ್ನು ಭವನೇಶ್ವರ್ ಕುಮಾರ್ ಸ್ಯಾಮ್ ಬಿಲ್ಲಿಂಗ್ಸ್ (34) ವಿಕೆಟ್ ಪಡೆಯುವುದರೊಂದಿಗೆ ಮುರಿದರು. ನಂತರ ಬಂದ ಸುನಿಲ್ ನರೈನ್ 1 ರನ್ ಗಳಿಸಿದರೆ, ಆಂಡ್ರೆ ರಸೆಲ್ 28 ಎಸೆತಗಳಲ್ಲಿ 49 ರನ್ ಗಳಿಸಿ ಅಜೇಯರಾಗುಳಿದರು.

ಇನ್ನು ಸನ್‌ರೈಸರ್ಸ್ ಹೈದರಾಬಾದ್ ತಂಡದ ಬೌಲರ್‌ಗಳಾದ ಉಮ್ರಾನ್ ಮಲಿಕ್ 4 ಓವರ್ ಬೌಲಿಂಗ್ ಮಾಡಿ 33 ರನ್ ನೀಡಿ 3 ವಿಕೆಟ್ ಪಡೆದರು. ಇದೇ ವೇಳೆ ಟಿ. ನಟರಾಜನ್ 4 ಓವರ್ ಬೌಲಿಂಗ್ ಮಾಡಿ 43 ರನ್ ನೀಡಿ 1 ವಿಕೆಟ್ ಪಡೆದರು. ಮಾರ್ಕೋ ಜಾನ್ಸೆನ್ 30 ರನ್ ನೀಡಿ ಒಂದು ವಿಕೆಟ್ ಪಡೆದರು.

Story first published: Saturday, May 14, 2022, 21:32 [IST]
Other articles published on May 14, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X