Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

GT vs SRH: ಟಾಸ್ ವರದಿ ಮತ್ತು ಪ್ಲೇಯಿಂಗ್ ಇಲೆವೆನ್ ಮಾಹಿತಿ

IPL 2022: Sunrisers Hyderabad vs Gujarat Titans toss report and playing 11

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 40ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿವೆ. ಇನ್ನು ಇತ್ತಂಡಗಳ ನಡುವಿನ ಈ ಪಂದ್ಯ ಮುಂಬೈನ ವಾಂಖಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದಿರುವ ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್ ಆಯ್ದುಕೊಂಡು ಎದುರಾಳಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.

ಆಡುವ ಬಳಗಗಳು

ಗುಜರಾತ್ ಟೈಟನ್ಸ್ ಆಡುವ ಬಳಗ: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭಮನ್ ಗಿಲ್, ಹಾರ್ದಿಕ್ ಪಾಂಡ್ಯ (ನಾಯಕ), ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅಲ್ಜಾರಿ ಜೋಸೆಫ್, ಲಾಕಿ ಫರ್ಗುಸನ್, ಯಶ್ ದಯಾಲ್ ಮತ್ತು ಮೊಹಮ್ಮದ್ ಶಮಿ

ಸನ್ ರೈಸರ್ಸ್ ಹೈದರಾಬಾದ್ ಆಡುವ ಬಳಗ: ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್ (ನಾಯಕ), ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಶಶಾಂಕ್ ಸಿಂಗ್, ವಾಷಿಂಗ್ಟನ್ ಸುಂದರ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್ ಮತ್ತು ಟಿ ನಟರಾಜನ್

ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್ ತಂಡ ಯಾವುದೇ ಬದಲಾವಣೆಗಳಿಲ್ಲದೇ ಕಣಕ್ಕಿಳಿದಿದ್ದರೆ, ಕೇನ್ ವಿಲಿಯಮ್ಸನ್ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಜಗದೀಶ ಸುಚಿತ್ ಬದಲು ವಾಷಿಂಗ್ಟನ್ ಸುಂದರ್ ಕಣಕ್ಕಿಳಿದಿದ್ದಾರೆ.

ಇನ್ನು ಇತ್ತಂಡಗಳು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸೆಣಸಾಡುತ್ತಿರುವ ಎರಡನೇ ಪಂದ್ಯ ಇದಾಗಿದ್ದು, ಇತ್ತಂಡಗಳ ನಡುವೆ ನಡೆದ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡದ ವಿರುದ್ಧ 8 ವಿಕೆಟ್‌ಗಳ ಜಯ ಸಾಧಿಸಿತ್ತು. ಹೀಗೆ ಟೂರ್ನಿಯಲ್ಲಿ ಅತಿ ಹೆಚ್ಚಿನ ಯಶಸ್ಸು ಸಾಧಿಸಿರುವ ತಂಡ ಎಂಬ ಖ್ಯಾತಿಗೆ ಒಳಗಾಗಿರುವ ಗುಜರಾತ್ ಟೈಟನ್ಸ್ ತಂಡದ ಆಟ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ನಡೆಯದೇ ಇದ್ದು, ಗುಜರಾತ್ ಈ ಪಂದ್ಯದಲ್ಲಿ ಗೆದ್ದು, ಕಳೆದ ಪಂದ್ಯದ ಸೋಲಿನ ಸೇಡನ್ನು ತೀರಿಸಿಕೊಳ್ಳುತ್ತಾ ಅಥವಾ ಮತ್ತೊಮ್ಮೆ ಸೋಲೊಪ್ಪುತ್ತಾ ಎಂಬುದನ್ನು ಕಾದುನೋಡಬೇಕಿದೆ.

Story first published: Wednesday, April 27, 2022, 19:43 [IST]
Other articles published on Apr 27, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+