SRH vs PBKS: ಮುಖಾಮುಖಿ ಪಂದ್ಯಗಳಲ್ಲಿ ಹೆಚ್ಚು ಗೆದ್ದಿರುವ ಬಲಿಷ್ಠ ತಂಡ ಯಾವುದು?

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಅಂತಿಮ ಪಂದ್ಯ ನಾಳೆ ( ಮೇ 22 ) ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಇನ್ನು ಈ ಎರಡೂ ತಂಡಗಳು ಸಹ ಈ ಬಾರಿಯ ಟೂರ್ನಿಯಲ್ಲಿ ಪ್ಲೇ ಆಫ್ ಪ್ರವೇಶಿಸುವ ಅವಕಾಶವನ್ನು ಈಗಾಗಲೇ ಕಳೆದುಕೊಂಡಿರುವ ಕಾರಣ ಈ ಪಂದ್ಯ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದೇ ಹೇಳಬಹುದು. ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಪಂದ್ಯ ನಡೆಯುವುದಕ್ಕೂ ಮುನ್ನ ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ಎರಡೂ ತಂಡಗಳು ಸಹ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದ್ದವು.
ಆದರೆ ಗುಜರಾತ್ ಟೈಟನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಜಯ ಸಾಧಿಸಿದ ನಂತರ ಕಡಿಮೆ ಅಂಕಗಳನ್ನು ಪಡೆದುಕೊಂಡಿದ್ದ ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಟೂರ್ನಿಯಿಂದ ಎಲಿಮಿನೇಟ್ ಆದವು. ಹೀಗಾಗಿ ಈ ಪಂದ್ಯದ ಫಲಿತಾಂಶ ಟೂರ್ನಿಯ ಮೇಲೆ ಯಾವುದೇ ರೀತಿಯ ಪರಿಣಾಮ ಬೀರದ ಕಾರಣ ಈ ಪಂದ್ಯವನ್ನು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದೇ ಪರಿಗಣಿಸಬಹುದು. ಇನ್ನು ಈ ಎರಡೂ ತಂಡಗಳು ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಇದುವರೆಗೂ ಒಟ್ಟು ಎಷ್ಟು ಬಾರಿ ಮುಖಾಮುಖಿಯಾಗಿವೆ ಮತ್ತು ಯಾವ ತಂಡ ಎಷ್ಟು ಪಂದ್ಯಗಳಲ್ಲಿ ಜಯ ಸಾಧಿಸಿದೆ ಎಂಬುದರ ಕುರಿತಾದ ವಿವರ ಕೆಳಕಂಡಂತಿದೆ..
ಒಟ್ಟಾರೆ ಇಂಡಿಯನ್ ಪ್ರಿಮಿಯರ್ ಲೀಗ್ ಮುಖಾಮುಖಿ:
ಸನ್ ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಇದುವರೆಗೂ ಒಟ್ಟು 18 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಮುಖಾಮುಖಿ ಪಂದ್ಯಗಳ ಪೈಕಿ ಸನ್ ರೈಸರ್ಸ್ ಹೈದರಾಬಾದ್ ತಂಡ 13 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಪಂಜಾಬ್ ಕಿಂಗ್ಸ್ ತಂಡ 5 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ನಡುವಿನ ಐಪಿಎಲ್ ಒಟ್ಟಾರೆ ಮುಖಾಮುಖಿಯಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂಡ ಸ್ಪಷ್ಟ ಹಾಗೂ ದೊಡ್ಡ ಮೇಲುಗೈ ಸಾಧಿಸಿದೆ.
ಕಳೆದ 5 ಪಂದ್ಯಗಳ ಮುಖಾಮುಖಿ:
ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಇತ್ತಂಡಗಳ ನಡುವೆ ನಡೆಯಲಿರುವ ಎರಡನೇ ಮುಖಾಮುಖಿ ಪಂದ್ಯ ಇದಾಗಿದ್ದು ಇದಕ್ಕೂ ಮುನ್ನ ನಡೆದ ಮೊದಲನೇ ಮುಖಾಮುಖಿ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ 7 ವಿಕೆಟ್‍ಗಳ ಗೆಲುವನ್ನು ಕಂಡಿತ್ತು. ಹೀಗೆ ಈ ಬಾರಿಯ ಆವೃತ್ತಿಯ ಮೊದಲ ಮುಖಾಮುಖಿ ಪಂದ್ಯವೂ ಸೇರಿದಂತೆ ಇತ್ತಂಡಗಳ ನಡುವೆ ನಡೆದಿರುವ ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ 3 ಪಂದ್ಯಗಳಲ್ಲಿ ಗೆದ್ದಿದ್ದರೆ, ಪಂಜಾಬ್ ಕಿಂಗ್ಸ್ 2 ಪಂದ್ಯಗಳಲ್ಲಿ ಮಾತ್ರ ಗೆದ್ದು, ಈ ಮುಖಾಮುಖಿಯಲ್ಲಿಯೂ ಸಹ ಹಿನ್ನಡೆ ಅನುಭವಿಸಿದೆ.
ಕಳೆದ ಆವೃತ್ತಿಯ ಮುಖಾಮುಖಿಯ ಫಲಿತಾಂಶ:
2021ರ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯಲ್ಲಿ ಇತ್ತಂಡಗಳು ಲೀಗ್ ಹಂತದ 2 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದವು. ಈ ಪೈಕಿ ಪ್ರಥಮ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಜಯ ಸಾಧಿಸಿದ್ದರೆ, ದ್ವಿತೀಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಗೆಲುವು ಕಂಡಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications