For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2022: ಸೂಪರ್ ಸಂಡೇ ಎರಡು ಕದನ; ಡೆಲ್ಲಿಗೆ ಲಕ್ನೋ ಸವಾಲು, ಹೈದರಾಬಾದ್‌ಗೆ ಚೆನ್ನೈ ಪೈಪೋಟಿ

IPL 2022: Super sunday Double header: DC vs LSG and CSK vs SRH

ಐಪಿಎಲ್‌ನಲ್ಲಿ ಭಾನುವಾರ ಮತ್ತೊಂದು ಡಬಲ್ ಹೆಡ್ಡರ್ ಪಂದ್ಯಗಳು ನಡೆಯಲಿದೆ. ಶನಿವಾರ ನಡೆದ ರೋಚಕ ಡಬಲ್ ಹೆಡ್ಡರ್‌ನ ನಂತರ ಇಂದು ಕೂಡ ರೋಮಾಂಚನಕಾರಿ ಮುಖಾಮುಖಿಗಾಗಿ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಇಂದು ನಡೆಯಲಿರುವ ಪಂದ್ಯಗಳ ಪೈಕಿ ಮೊದಲಿಗೆ ಡೆಲ್ಲಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾದರೆ ನಂತರ ಸನ್‌ರೈಸರ್ಸ್ ಹೈ್ರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಪೈಪೋಟಿ ನಡೆಸಲಿದೆ.

ಡೆಲ್ಲಿ ಕ್ಯಾಪಿಟಲ್ಸ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವಿನ ಕದನ ಎರಡು ತಂಡಗಳಿಗೂ ಬಹಳ ಮಹತ್ವದ್ದಾಗಿದೆ. ಲಕ್ನೋ ಸೂಪರ್ ಜೈಂಟ್ಸ್ ತಂಡ ಪ್ರಸ್ತುತ 9ನೇ ಸ್ಥಾನದಲ್ಲಿದ್ದು ಅಗ್ರ ನಾಲ್ಕರಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಲು ಪ್ರಯತ್ನಿಸುತ್ತಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ ತಂಡ ಆಡಿದ 8 ಪಂದ್ಯಗಳಲ್ಲಿ ನಾಲ್ಕು ಗೆಲುವು ನಾಲ್ಕು ಸೋಲು ಅನುಭವಿಸಿದ್ದು ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಹೀಗಾಗಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳುವತ್ತ ಡೆಲ್ಲಿ ಕ್ಯಾಪಿಟಲ್ಸ್ ಚೆತ್ತ ನೆಡಲಿದೆ.

ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಮಾರ್ಕಸ್ ಸ್ಟೋನಿಸ್, ದೀಪಕ್ ಹೂಡಾ, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಜೇಸನ್ ಹೋಲ್ಡರ್, ಕೃಷ್ಣಪ್ಪ ಗೌತಮ್, ದುಷ್ಮಂತ ಚಮೀರಾ, ರವಿ ಬಿಷ್ಣೋಯ್, ಅವೇಶ್ ಖಾನ್, ಎವಿನ್ ಲೂಯಿಸ್, ಆಂಡ್ರ್ಯೂ ಟೈ, ಮನೀಶ್ ಪಾಂಡೆ, ಶಹಬಾಜ್ ನದೀಮ್, ಮನನ್ ವೋಹ್ರಾ, ಕೈಲ್ ಮೇಯರ್ಸ್, ಅಂಕಿತ್ ರಾಜ್‌ಪೂತ್, ಮೊಹ್ಸಿನ್ ಖಾನ್, ಕರಣ್ ಶರ್ಮಾ, ಮಯಾಂಕ್ ಯಾದವ್

ಡೆಲ್ಲಿ ಕ್ಯಾಪಿಟಲ್ಸ್ ಸಂಪೂರ್ಣ ತಂಡ: ರಿಷಬ್ ಪಂತ್ (ನಾಯಕ & ವಿಕೆಟ್ ಕೀಪರ್), ಪೃಥ್ವಿ ಶಾ, ಟಿಮ್ ಸೀಫರ್ಟ್, ಮನ್‌ದೀಪ್ ಸಿಂಗ್, ಲಲಿತ್ ಯಾದವ್, ರೋವ್‌ಮನ್ ಪೊವೆಲ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಖಲೀಲ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಅಶ್ವಿನ್ ಹೆಬ್ಬಾರ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಶ್ರೀಕರ್, ಭರತ್ ಸರ್ಫರಾಜ್ ಖಾನ್, ಲುಂಗಿ ಎನ್‌ಗಿಡಿ, ಪ್ರವೀಣ್ ದುಬೆ, ಅನ್ರಿಚ್ ನಾರ್ಟ್ಜೆ, ಕಮಲೇಶ್ ನಾಗರಕೋಟಿ, ಚೇತನ್ ಸಕರಿಯಾ, ರಿಪಾಲ್ ಪಟೇಲ್, ಯಶ್ ಧುಲ್, ವಿಕ್ಕಿ ಒಸ್ತ್ವಾಲ್

IPL 2022: Super sunday Double header: DC vs LSG and CSK vs SRH

ಚೆನ್ನೈ ಸೂಪರ್ ಕಿಂಗ್ಸ್ vs ಸನ್‌ರೈಸರ್ಸ್ ಹೈದರಾಬಾದ್ ಪಂದ್ಯ: ಐಪಿಎಲ್ ಅಂಗಳದಲ್ಲಿ ಇಂದು ನಡೆಯಲಿರುವ ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಟೂರ್ನಿಯಲ್ಲಿ ಕೇವಲ ಒಂದೇ ಗೆಲುವು ಸಾಧಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮತ್ತೊಂದು ಗೆಲುವಿಗಾಗಿ ಹುಡುಕಾಟ ನಡೆಸುತ್ತಿದೆ. ಈ ಸಂದರ್ಭದಲ್ಲಿ ಸಿಎಸ್‌ಕೆ ತಂಡದ ನಾಯಕತ್ವ ಮತ್ತೆ ಬದಲಾವಣೆಯಾಗಿದ್ದು ರವೀಂದ್ರ ಜಡೇಜಾ ನಾಯಕತ್ವವನ್ನು ಮರಳಿ ಎಂಎಸ್ ಧೋನಿಗೆ ಒಪ್ಪಿಸಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಧೋನಿ ನೇತೃತ್ವದಲ್ಲಿಯೇ ಚೆನ್ನೈ ತಂಡ ಕಣಕ್ಕಿಳಿಯಲಿದೆ. ಮತ್ತೊಂದೆಡೆ ಸತತ ಗೆಲುವಿನಿಂದಾಗಿ ಆತ್ಮವಿಶ್ವಾಸದಿಂದ ಬೀಗುತ್ತಿದ್ದ ಎಸ್‌ಆರ್‌ಹೆಚ್ ತಂಡದ ಗೆಲುವಿನ ಸರಪಳಿಯನ್ನು ಜಿಟಿ ಈ ಹಿಂದಿನ ಪಂದ್ಯದಲ್ಲಿ ಮುರಿದಿದ್ದು ಮತ್ತೆ ಗೆಲುವಿನ ಲಯಕ್ಕೆ ಮರಳಲು ಪ್ರಯತ್ನಿಸಲಿದೆ. ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಎಸ್‌ಆರ್‌ಹೆಚ್ ಪ್ಲೇಆಫ್‌ಗೇರುವ ಅವಕಾಶವನ್ನು ಭದ್ರಪಡಿಸಿಕೊಳ್ಳುವ ಪ್ರಯತ್ನ ನಡೆಸಲಿದೆ.

ಸನ್‌ರೈಸರ್ಸ್ ಹೈದರಾಬಾದ್: ಕೇನ್ ವಿಲಿಯಮ್ಸನ್ (ನಾಯಕ), ಅಬ್ದುಲ್ ಸಮದ್, ಉಮ್ರಾನ್ ಮಲಿಕ್, ವಾಷಿಂಗ್ಟನ್ ಸುಂದರ್, ನಿಕೋಲಸ್ ಪೂರನ್, ಟಿ ನಟರಾಜನ್, ಭುವನೇಶ್ವರ್ ಕುಮಾರ್, ಪ್ರಿಯಮ್ ಗಾರ್ಗ್, ರಾಹುಲ್ ತ್ರಿಪಾಠಿ, ಅಭಿಷೇಕ್ ಶರ್ಮಾ, ಕರಿಕ್ ತ್ಯಾಗಿ, ಶ್ರೇಯಸ್ ಗೋಪಾಲ್, ಜಗದೀಶ ಸುಚಿತ್, ಐಡೆನ್ ಮಾರ್ಕ್ರಾಮ್, ಮಾರ್ಕೊ ಜಾನ್ಸೆನ್, ರೊಮಾರಿಯೊ ಶೆಫರ್ಡ್, ಸೀನ್ ಅಬಾಟ್, ಆರ್ ಸಮರ್ಥ್, ಸೌರಭ್ ದುಬೆ, ಶಶಾಂಕ್ ಸಿಂಗ್, ವಿಷ್ಣು ವಿನೋದ್, ಗ್ಲೆನ್ ಫಿಲಿಪ್ಸ್, ಫಜಲ್ಹಕ್ ಫಾರೂಕಿ.

Rohit Sharma ಪಂದ್ಯ ಗೆದ್ದರೂ formಗೆ ಮರಳಲಿಲ್ಲ | Oneindia Kannada

ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ರವೀಂದ್ರ ಜಡೇಜಾ , ಶಿವಂ ದುಬೆ, ಎಂಎಸ್ ಧೋನಿ (ನಾಯಕ/ ವಿಕೆಟ್ ಕೀಪರ್), ಡ್ವೇನ್ ಬ್ರಾವೋ, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ತುಷಾರ್ ದೇಶಪಾಂಡೆ, ಕ್ರಿಸ್ ಜೋರ್ಡಾನ್, ರಾಜವರ್ಧನ್ ಹಂಗರ್ಗೇಕರ್, ಮಹೇಶ್ ತೀಕ್ಷಣ, ಹರಿ ನಿಶಾಂತ್, ಎನ್ ಜಗದೀಸನ್, ಸುಭ್ರಾಂಶು ಸೇನಾಪತಿ, ಪ್ರಶಾಂತ್ ಸೋಲಂಕಿ, ಮುಖೇಶ್ ಚೌಧರಿ, ಕೆಎಂ ಆಸಿಫ್, ಸಿಮರ್ಜೀತ್ ಸಿಂಗ್, ಭಗತ್ ವರ್ಮಾ, ಮೊಯಿನ್ ಅಲಿ, ಡ್ವೈನ್ ಪ್ರಿಟೋರಿಯಸ್

Story first published: Sunday, May 1, 2022, 9:05 [IST]
Other articles published on May 1, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+