
ಐಪಿಎಲ್ 15ನೇ ಆವೃತ್ತಿಯಲ್ಲಿ ಮತ್ತೊಂದು ಡಬಲ್ ಹೆಡ್ಡರ್ ಪಂದ್ಯ ನಡೆಯಲಿದೆ. ಶನಿವಾರ ನಡೆದ ಎರಡು ರೋಚಕ ಪಂದ್ಯಗಳಿಗೆ ಸಾಕ್ಷಿಯಾದ ಬಳಿಕ ಐಪಿಎಲ್ ಅಭಿಮಾನಿಗಳು ಭಾನುವಾರ ಮತ್ತೊಮ್ಮೆ ಎರಡು ಪಂದ್ಯಗಳಿಗೆ ಸಾಕ್ಷಿಯಾಗುವ ಅವಕಾಶವಿದೆ. ಇಂದು ನಡಯುವ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾದರೆ ಎರಡನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ.
ಮಯಾಂಕ್ ಅಗರ್ವಾಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ಕದನ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದೆ. ಈ ಎರಡು ತಂಡಗಳು ಕೂಡ ತಮ್ಮ ಕೊನೆಯ ಪಂದ್ಯವನ್ನು ಗೆದ್ದು ಆತ್ಮವಿಶ್ವಾಸದಿಂದ ಈ ಪಂದ್ಯಕ್ಕೆ ಸಜ್ಜಾಗುತ್ತಿದೆ. ಪಂಜಾಬ್ ಕಿಂಗ್ಸ್ ಕೊನೆಯ ಪಂದ್ಯವನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಆಡಿದ್ದು ಈ ಪಂದ್ಯದಲ್ಲಿ 12 ರನ್‌ಗಳ ಅಂತರದಿಂದ ಗೆದ್ದು ಬೀಗಿತ್ತು. ಈ ಬಾರಿಯ ಟೂರ್ನುಯಲ್ಲಿ ಒಟ್ಟು 5 ಪಂದ್ಯಗಳಲ್ಲಿ ಆಡಿರುವ ಪಂಜಾಬ್ ಕಿಂಗ್ಸ್ ತಂಡ 3 ಗೆಲುವು ಸಾಧಿಸಿದ್ದು 2 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.
ಇನ್ನು ಸನ್‌ರೈಸರ್ಸ್ ಹೈದರಾಬಾದ್ ತಂಡ ಕಳಪೆ ಆರಂಭವನ್ನು ಪಡೆದಿದ್ದರೂ ಅಂತಿಮ ಮೂರು ಪಂದ್ಯಗಳಲ್ಲಿ ಅಮೋಘ ಪ್ರದರ್ಶನ ನೀಡುವ ಮೂಲಕ ಹ್ಯಾಟ್ರಿಕ್ ಗೆಲುವು ಸಾಧಿಸಿದೆ. ಈ ಮೂಲಕ ಇತರ ಎಲ್ಲಾ ತಂಡಗಳು ಕೂಡ ತಿರುಗಿ ನೋಡುವಂತೆ ಕಮ್‌ಬ್ಯಾಕ್ ಮಾಡಿದೆ. ಚೆನ್ನೈ ಸೂಪರ್ ಕಿಂಗ್ಸ್, ಗುಜರಾತ್ ಟೈಟನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳಿಗೆ ಸೋಲುಣಿಸುವ ಮೂಲಕ ಇತರ ತಂಡಗಳಿಗೆ ಕಠಿಣ ಸಂದೇಶ ರವಾನಿಸಿದೆ. ಹೀಗಾಗಿ ಮಯಾಂಕ್ ಅಗರ್ವಾಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡಕ್ಕೆ ಸನ್‌ರೈಸರ್ಸ್ ಹೈದರಾಬಾದ್ ಕಠಿಣ ಸವಾಲೊಡ್ಡುವುದರಲ್ಲಿ ಅನುಮಾನವಿಲ್ಲ.
ಸನ್‌ರೈಸರ್ಸ್ ಹೈದರಾಬಾದ್: ಕೇನ್ ವಿಲಿಯಮ್ಸನ್ (ನಾಯಕ), ಅಬ್ದುಲ್ ಸಮದ್, ಉಮ್ರಾನ್ ಮಲಿಕ್, ವಾಷಿಂಗ್ಟನ್ ಸುಂದರ್, ನಿಕೋಲಸ್ ಪೂರನ್, ಟಿ ನಟರಾಜನ್, ಭುವನೇಶ್ವರ್ ಕುಮಾರ್, ಪ್ರಿಯಮ್ ಗಾರ್ಗ್, ರಾಹುಲ್ ತ್ರಿಪಾಠಿ, ಅಭಿಷೇಕ್ ಶರ್ಮಾ, ಕರಿಕ್ ತ್ಯಾಗಿ, ಶ್ರೇಯಸ್ ಗೋಪಾಲ್, ಜಗದೀಶ ಸುಚಿತ್, ಐಡೆನ್ ಮಾರ್ಕ್ರಾಮ್, ಮಾರ್ಕೊ ಜಾನ್ಸೆನ್, ರೊಮಾರಿಯೊ ಶೆಫರ್ಡ್, ಸೀನ್ ಅಬಾಟ್, ಆರ್ ಸಮರ್ಥ್, ಸೌರಭ್ ದುಬೆ, ಶಶಾಂಕ್ ಸಿಂಗ್, ವಿಷ್ಣು ವಿನೋದ್, ಗ್ಲೆನ್ ಫಿಲಿಪ್ಸ್, ಫಜಲ್ಹಕ್ ಫಾರೂಕಿ.
ಪಂಜಾಬ್ ಕಿಂಗ್ಸ್ : ಶಿಖರ್ ಧವನ್, ಕಗಿಸೊ ರಬಾಡ, ಜಾನಿ ಬೈರ್‌ಸ್ಟೋವ್, ರಾಹುಲ್ ಚಾಹರ್, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ಪ್ರಭಾಸಿಮ್ರಾನ್ ಸಿಂಗ್, ಇಶಾನ್ ಪೊರೆಲ್, ಲಿಯಾಮ್ ಲಿವಿಂಗ್‌ಸ್ಟೋನ್, ಒಡಿಯನ್ ಸ್ಮಿತ್, ಸಂದೀಪ್ ಶರ್ಮಾ, ರಾಜ್ ಅಂಗದ್ ಬಾವಾ, ರಿಷಿ ಧವನ್, ಪ್ರೇರಕ್ ಮಂಕಡ್, ಅಥರ್ವ ಟೈಡೆ, ವೈಭವ್ ಅರೋರಾ, ಭಾನುಕಾ ರಾಜಪಕ್ಸೆ, ರಿಟಿಕ್ ಚಟರ್ಜಿ, ಬಲ್ತೇಜ್ ಧಂಡಾ, ಅನ್ಶ್ ಪಟೇಲ್, ಜಿತೇಶ್ ಶರ್ಮಾ, ಬೆನ್ನಿ ಹೋವೆಲ್, ನಾಥನ್ ಎಲ್ಲಿಸ್
ಗುಜರಾತ್ ಟೈಟನ್ಸ್ vs ಚೆನ್ನೈ ಸೂಪರ್ ಕಿಂಗ್ಸ್: ಇನ್ನು ಐಪಿಎಲ್‌ಗೆ ಮೊದಲ ಬಾರಿಗೆ ಕಾಲಿಟ್ಟಿರುವ ಗುಜರಾತ್ ಟೈಟನ್ಸ್ ತಂಡ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಾ ಬಂದಿದೆ. ಈ ಬಾರಿಯ ಐಪಿಎಲ್‌ನಲ್ಲಿ ಆಡಿರುವ 5 ಪಂದ್ಯಗಳಲ್ಲಿ ಹಾರ್ದಿಕ್ ಪಾಂಡ್ಯ ಪಡೆ ಒಂದು ಸೋಲನ್ನು ಮಾತ್ರವೇ ಅನುಭವಿಸಿದ್ದು ನಾಲ್ಕು ಗೆಲುವುಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಬಲಿಷ್ಠ ಆಟಗಾರರ ಪಡೆಯನ್ನು ಹೊಂದಿರುವ ಗುಜರಾತ್ ಟೈಟನ್ಸ್ ತಂಡದ ಬಹುತೇಕ ಆಟಗಾರರು ಉತ್ತಮ ಫಾರ್ಮ್‌ನಲ್ಲಿರುವುದು ತಂಡದ ಯಶಸ್ಸಿಗೆ ಪ್ರಮುಖ ಕಾರಣವಾಗಿದೆ.
ಮತ್ತೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಟೂರ್ನಿಯ ಆರಂಭಿಕ ನಾಲ್ಕು ಪಂದ್ಯಗಳನ್ನು ಸೋಲುವ ಮೂಲಕ ಭಾರೀ ನಿರಾಸೆ ಅನುಭವಸಿದೆ. ಆದರೆ ಅಂತಿಮ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಸಾಧಿಸಿರುವ ಭರ್ಜರಿ ಗೆಲುವು ತಂಡಕ್ಕೆ ಹೊಸ ಆತ್ಮವಿಶ್ವಾಸ ಮೂಡಿಸಿರುವುದರಲ್ಲಿ ಅನುಮಾನವಿಲ್ಲ. ಹೀಗಾಗಿ ಈ ಪಂದ್ಯದಲ್ಲಿ ಟೈಟನ್ಸ್ ಸವಾಲನ್ನು ಕಿಂಗ್ಸ್ ಪಡೆ ಯಾವ ರೀತಿ ಎದುರಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.
ಗುಜರಾತ್ ಟೈಟನ್ಸ್ ಸ್ಕ್ವಾಡ್: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ರಶೀದ್ ಖಾನ್, ಮೊಹಮ್ಮದ್ ಶಮಿ, ಲಾಕಿ ಫರ್ಗುಸನ್, ಅಭಿನವ್ ಸದಾರಂಗನಿ, ರಾಹುಲ್ ತೆವಾಟಿಯಾ, ನೂರ್ ಅಹ್ಮದ್, ಆರ್ ಸಾಯಿ ಕಿಶೋರ್, ಡೊಮಿನಿಕ್ ಡ್ರೇಕ್ಸ್, ಜಯಂತ್ ಯಾದವ್, ವಿಜಯ್ ಶಂಕರ್, ದರ್ಶನ್ ನಲ್ಕಂಡೆ, ಯಶ್ ದಯಾಳ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಗುರುಕೀರತ್ ಸಿಂಗ್, ವರುಣ್ ಆರೋನ್, ಬಿ ಸಾಯಿ ಸುದರ್ಶನ್, ರಹಮಾನುಲ್ಲಾ ಗುರ್ಬಾಜ್
ಚೆನ್ನೈ ಸೂಪರ್ ಕಿಂಗ್ಸ್ ಸ್ಕ್ವಾಡ್: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ರವೀಂದ್ರ ಜಡೇಜಾ (ನಾಯಕ), ಶಿವಂ ದುಬೆ, ಎಂಎಸ್ ಧೋನಿ (ವಿಕೆಟ್ ಕೀಪರ್), ಡ್ವೇನ್ ಬ್ರಾವೋ, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ತುಷಾರ್ ದೇಶಪಾಂಡೆ, ಕ್ರಿಸ್ ಜೋರ್ಡಾನ್, ರಾಜವರ್ಧನ್ ಹಂಗರ್ಗೇಕರ್, ಮಹೇಶ್ ತೀಕ್ಷಣ, ಹರಿ ನಿಶಾಂತ್, ಎನ್ ಜಗದೀಸನ್, ಸುಭ್ರಾಂಶು ಸೇನಾಪತಿ, ಪ್ರಶಾಂತ್ ಸೋಲಂಕಿ, ಮುಖೇಶ್ ಚೌಧರಿ, ಕೆಎಂ ಆಸಿಫ್, ಸಿಮರ್ಜೀತ್ ಸಿಂಗ್, ಭಗತ್ ವರ್ಮಾ, ಮೊಯಿನ್ ಅಲಿ, ಡ್ವೈನ್ ಪ್ರಿಟೋರಿಯಸ್