IPL 2022: ಸೌರಭ್ ದುಬೆ ಬದಲಿಗೆ ಸುಶಾಂತ್ ಮಿಶ್ರಾ SRHಗೆ ಸೇರ್ಪಡೆ
15ನೇ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್‌ನ ಉಳಿದ ಭಾಗಕ್ಕೆ ಗಾಯಗೊಂಡಿರುವ ಸೌರಭ್ ದುಬೆ ಬದಲಿಗೆ ಎಡಗೈ ಮಧ್ಯಮ ವೇಗಿ ಸುಶಾಂತ್ ಮಿಶ್ರಾ ಅವರನ್ನು ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಆಯ್ಕೆ ಮಾಡಲಾಗಿದೆ.
ರಾಂಚಿ ಮೂಲದ 21 ವರ್ಷದ ಸುಶಾಂತ್ ಮಿಶ್ರಾ ನಾಲ್ಕು ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು, 13 ವಿಕೆಟ್ ಪಡೆದಿದ್ದಾರೆ. ಇನ್ನು ಉತ್ತರಪ್ರದೇಶ ಮಧ್ಯಮ ವೇಗಿ ದುಬೆ ಬೆನ್ನುನೋವಿನಿಂದ ಬಳಲುತ್ತಿದ್ದಾರೆ ಮತ್ತು ಪಂದ್ಯಾವಳಿಯ ಉಳಿದ ಪಂದ್ಯಗಳಿಂದ ಹೊರಗುಳಿಯಲಾಗಿದೆ ಎಂದು ಐಪಿಎಲ್ ಬುಧವಾರ ಪ್ರಕಟಣೆಯಲ್ಲಿ ತಿಳಿಸಿದೆ. ಸೌರಭ್ ದುಬೆ ಈ ಬಾರಿಯ ಐಪಿಎಲ್ ಋತುವಿನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಪರವಾಗಿ ಒಂದೇ ಒಂದು ಪಂದ್ಯದಲ್ಲಿ ಕಾಣಿಸಿಕೊಂಡಿಲ್ಲ.

ಸುಶಾಂತ್ ಮಿಶ್ರಾರನ್ನು ಸನ್‌ರೈಸರ್ಸ್ ಹೈದರಾಬಾದ್ ತಂಡ 20 ಲಕ್ಷ ರೂ.ಗಳನ್ನು ನೀಡಿ ಖರೀದಿಸಿದೆ. ಸನ್‌ರೈಸರ್ಸ್ ಹೈದರಾಬಾದ್ ತಂಡವು ಈವರೆಗೆ ಒಂಬತ್ತು ಪಂದ್ಯಗಳನ್ನು ಆಡಿದ್ದು, ಐದು ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.
ಇನ್ನು ಗುರುವಾರ ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸನ್‌ರೈಸರ್ಸ್ ಹೈದರಾಬಾದ್ ತಂಡ ಎದುರಿಸಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications