ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IPL 2022: ಪ್ಲೇಆಫ್‌‍ನಲ್ಲಿ ಆರ್‌ಸಿಬಿ ಸೋಲಿಸಿದರೆ ಕಪ್ ಸಿಗುವುದಿಲ್ಲ; ಒಂದಲ್ಲ ಎರಡಲ್ಲ 5 ಬಾರಿ ಇದೇ ಕಥೆ!

IPL 2022: Teams which have knocked out RCB in playoffs were failed to won trophy

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ನೂತನ ನಾಯಕ ಫಾಫ್ ಡು ಪ್ಲೆಸಿಸ್ ನಾಯಕತ್ವದಡಿಯಲ್ಲಿ ಕಣಕ್ಕಿಳಿದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಲೀಗ್ ಹಂತದಲ್ಲಿ ಉತ್ತಮ ಪ್ರದರ್ಶನ ನೀಡಿ ಪ್ಲೇ ಆಫ್ ಸುತ್ತಿಗೆ ಅರ್ಹತೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಪ್ಲೇ ಆಫ್ ಸುತ್ತಿನ ಎಲಿಮಿನೇಟರ್ ಪಂದ್ಯದಲ್ಲಿಯೂ ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧ ಗೆಲುವು ಕಂಡಿದ್ದ ಚಾಲೆಂಜರ್ಸ್ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತು ಟೂರ್ನಿಯಿಂದ ಹೊರ ಬೀಳುವುದರ ಮೂಲಕ ಈ ಬಾರಿಯೂ ಸಹ ಟ್ರೋಫಿ ಎತ್ತಿಹಿಡಿಯುವ ತನ್ನ ಕನಸನ್ನು ನನಸು ಮಾಡಿಕೊಳ್ಳಲಾಗದೇ ನಿರಾಸೆ ಮೂಡಿಸಿತು.

IPL 2022: ಈ ಥರ ಇದ್ರೆ ಗುಜರಾತ್ ಅಲ್ಲದೇ ಆರ್‌ಸಿಬಿ ಕಪ್ ಗೆಲ್ಲೋಕಾಗುತ್ತಾ? ಶುರು ಫಿಕ್ಸಿಂಗ್ ಅನುಮಾನ!IPL 2022: ಈ ಥರ ಇದ್ರೆ ಗುಜರಾತ್ ಅಲ್ಲದೇ ಆರ್‌ಸಿಬಿ ಕಪ್ ಗೆಲ್ಲೋಕಾಗುತ್ತಾ? ಶುರು ಫಿಕ್ಸಿಂಗ್ ಅನುಮಾನ!

ಇತ್ತ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸೋಲುಣಿಸಿ ಫೈನಲ್ ಪಂದ್ಯವನ್ನು ಪ್ರವೇಶಿಸಿದ್ದ ರಾಜಸ್ಥಾನ್ ರಾಯಲ್ಸ್ ಕಳೆದ ಭಾನುವಾರ ( ಮೇ 29 ) ನಡೆದ ಮಹತ್ವದ ಫೈನಲ್ ಪಂದ್ಯದಲ್ಲಿ ಬಲಿಷ್ಠ ಗುಜರಾತ್ ಟೈಟನ್ಸ್ ವಿರುದ್ಧ ಸೋತು ರನ್ನರ್ ಅಪ್ ಆಗಿ ಟೂರ್ನಿಯಲ್ಲಿ ತನ್ನ ಪಯಣವನ್ನು ಅಂತ್ಯಗೊಳಿಸಿದೆ.

IPL 2022: ಒಂದೇ ಒಂದು ಪಂದ್ಯದಲ್ಲಿಯೂ ಆಡುವ ಅವಕಾಶ ಸಿಗದೇ ಮೂಲೆಗುಂಪಾದ 5 ಉತ್ತಮ ಆಟಗಾರರು!IPL 2022: ಒಂದೇ ಒಂದು ಪಂದ್ಯದಲ್ಲಿಯೂ ಆಡುವ ಅವಕಾಶ ಸಿಗದೇ ಮೂಲೆಗುಂಪಾದ 5 ಉತ್ತಮ ಆಟಗಾರರು!

ಹೌದು, ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 130 ರನ್ ಕಲೆಹಾಕಿ ಅಲ್ಪ ಮೊತ್ತಕ್ಕೆ ತನ್ನ ಆಟವನ್ನು ಮುಗಿಸಿತು. ಇದಕ್ಕೆ ಪ್ರತ್ಯುತ್ತರವಾಗಿ ಗುಜರಾತ್ ಟೈಟನ್ಸ್ 18.1 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 133 ರನ್ ಕಲೆಹಾಕಿ 7 ವಿಕೆಟ್‍ಗಳ ಜಯವನ್ನು ದಾಖಲಿಸಿತು. ಹೀಗೆ ಫೈನಲ್ ಹಂತದವರೆಗೂ ತಲುಪಿ ಟ್ರೋಫಿ ಎತ್ತಿಹಿಡಿಯುವಲ್ಲಿ ರಾಜಸ್ಥಾನ್ ರಾಯಲ್ಸ್ ವಿಫಲವಾದ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ಲೇ ಆಫ್ ಹಂತದಲ್ಲಿ ಸೋಲಿಸಿ ಟೂರ್ನಿಯಿಂದ ಹೊರಗಟ್ಟುವ ತಂಡ ಫೈನಲ್ ಪಂದ್ಯದಲ್ಲಿ ಮುಗ್ಗರಿಸಲಿದೆ ಎಂಬ ಅಂಕಿ ಅಂಶವೊಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಷ್ಟಕ್ಕೂ ಈ ಅಂಕಿಅಂಶಗಳು ಹೇಳುವುದೇನು, ಈ ರೀತಿ ಎಷ್ಟು ಬಾರಿ ತಂಡಗಳು ಫೈನಲ್ ಪಂದ್ಯದಲ್ಲಿ ಮುಗ್ಗರಿಸಿವೆ ಎಂಬುದರ ಕುರಿತ ವಿವರ ಕೆಳಕಂಡಂತಿದೆ.

ಪ್ಲೇ ಆಫ್ ಸುತ್ತಿನಲ್ಲಿ ಆರ್‌ಸಿಬಿಯನ್ನು ಸೋಲಿಸಿದರೆ ಕಪ್ ಸಿಗುವುದಿಲ್ಲ!

ಪ್ಲೇ ಆಫ್ ಸುತ್ತಿನಲ್ಲಿ ಆರ್‌ಸಿಬಿಯನ್ನು ಸೋಲಿಸಿದರೆ ಕಪ್ ಸಿಗುವುದಿಲ್ಲ!

ಹೌದು, ಪ್ಲೇ ಆಫ್ ಸುತ್ತಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸಿ ಮುನ್ನುಗ್ಗಿರುವ ತಂಡಗಳೆಲ್ಲ ಕಪ್ ಗೆಲ್ಲಲಾಗದೇ ವಿಫಲವಾಗಿವೆ. ಒಂದಲ್ಲ ಎರಡಲ್ಲ ಬರೋಬ್ಬರಿ 5 ಬಾರಿ ಈ ರೀತಿ ನಡೆದಿರುವ ಉದಾಹರಣೆಗಳಿವೆ. ಅವುಗಳ ಪಟ್ಟಿ ಮುಂದಿದೆ..

1. 2010ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ಲೇ ಆಫ್ ಸುತ್ತಿನಲ್ಲಿ ಸೋಲಿಸಿ ಫೈನಲ್ ಸುತ್ತಿಗೆ ಪ್ರವೇಶವನ್ನು ಪಡೆದುಕೊಂಡಿದ್ದ ಮುಂಬೈ ಇಂಡಿಯನ್ಸ್ ಫೈನಲ್ ಪಂದ್ಯದಲ್ಲಿ ಸೋಲನ್ನು ಅನುಭವಿಸಿ ಟ್ರೋಫಿ ಎತ್ತಿಹಿಡಿಯುವಲ್ಲಿ ವಿಫಲವಾಗಿತ್ತು.


2. 2015ರಲ್ಲಿ ವಿರಾಟ್ ಕೊಹ್ಲಿ ಪಡೆಯನ್ನು ಪ್ಲೇ ಆಫ್ ಸುತ್ತಿನಲ್ಲಿ ಸೋಲಿಸಿ ಟೂರ್ನಿಯಿಂದ ಹೊರಗಟ್ಟಿದ್ದ ಚೆನ್ನೈ ಸೂಪರ್ ಕಿಂಗ್ಸ್ ಫೈನಲ್ ಪಂದ್ಯದಲ್ಲಿ ಮುಗ್ಗರಿಸಿತ್ತು.


3. 2020ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ಲೇ ಆಫ್ ಸುತ್ತಿನಲ್ಲಿ ಸೋಲಿಸಿದ್ದ ಸನ್ ರೈಸರ್ಸ್ ಹೈದರಾಬಾದ್ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸೋಲನ್ನು ಅನುಭವಿಸಿತ್ತು.

4. 2021ರಲ್ಲಿ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸದೆಬಡಿದು ಫೈನಲ್ ಹಂತದವರೆಗೂ ಪ್ರವೇಶಿಸಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಸೋತು ಮುಖಭಂಗ ಅನುಭವಿಸಿತ್ತು.

5. ಸದ್ಯ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸಿ ಇದೀಗ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಸೋಲನ್ನು ಅನುಭವಿಸಿದೆ.

ಈ ವಿಷಯವನ್ನೂ ಟ್ರೋಲ್ ಮಾಡಿದ ಅಭಿಮಾನಿಗಳು

ಈ ವಿಷಯವನ್ನೂ ಟ್ರೋಲ್ ಮಾಡಿದ ಅಭಿಮಾನಿಗಳು

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ಲೇ ಆಫ್ ಸುತ್ತಿನಲ್ಲಿ ಸೋಲಿಸಿದರೆ ಕಪ್ ಗೆಲ್ಲಲು ಆಗುವುದಿಲ್ಲ ಎಂಬ ವಿಷಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳು ತಮ್ಮದೇ ಶೈಲಿಯಲ್ಲಿ ಟ್ರೋಲ್ ಮಾಡುತ್ತಿದ್ದಾರೆ. ನಮ್ಮ ತಂಡವನ್ನು ಸೋಲಿಸಿ ಮುನ್ನಡೆದರೆ ನಮ್ಮ ಶಾಪ ತಟ್ಟದೇ ಬಿಡುವುದಿಲ್ಲ ಎಂದು ಕೆಲ ಟ್ರೋಲಿಗರು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡುತ್ತಿದ್ದಾರೆ.

RCBಯನ್ನು ಸೋಲಿಸಿರುವ ಯಾವ ತಂಡಗಳೂ ಕೂಡ ಫೈನಲ್ ನಲ್ಲಿ ಗೆದ್ದಿಲ್ಲ ಯಾಕೆ ಗೊತ್ತಾ?? | #Cricket | Oneindia Kannada
ಹ್ಯಾಟ್ರಿಕ್ ಪ್ಲೇ ಆಫ್ ಸೋಲು ಕಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು

ಹ್ಯಾಟ್ರಿಕ್ ಪ್ಲೇ ಆಫ್ ಸೋಲು ಕಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2020, 2021 ಮತ್ತು 2022 ಈ 3 ವರ್ಷಗಳಲ್ಲಿಯೂ ಪ್ಲೇ ಆಫ್ ಸುತ್ತಿಗೆ ಅರ್ಹತೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಆದರೆ 3 ವರ್ಷಗಳಲ್ಲಿಯೂ ಸಹ ಫೈನಲ್ ಪಂದ್ಯಕ್ಕೆ ಪ್ರವೇಶ ಪಡೆದುಕೊಳ್ಳುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿಫಲ ಕೂಡ ಆಗಿದೆ.

Story first published: Monday, May 30, 2022, 13:13 [IST]
Other articles published on May 30, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X