ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2022: ಕೊಹ್ಲಿ ನಂತರ ಆರ್‌ಸಿಬಿ ನಾಯಕನಾಗಲು ರೇಸ್‌ನಲ್ಲಿದ್ದಾರೆ ಈ ಮೂವರು ಆಟಗಾರರು

IPL 2022: Top 3 choices for new captain of Royal Challengers Bangalore after Virat Kohli

ಕಳೆದ ಬಾರಿ ಭಾರತದಲ್ಲಿ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಕೊರೋನಾವೈರಸ್ ಕಾರಣದಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಂಡ ನಂತರ ಯುಎಇಗೆ ಸ್ಥಳಾಂತರಿಸಲ್ಪಟ್ಟಿತ್ತು. ಹೀಗೆ ಯುಎಇಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಂದುವರಿಯುವ ಮುನ್ನವೇ ಪ್ರಮುಖ ಘೋಷಣೆಯೊಂದನ್ನು ಹೊರಡಿಸಿದ ವಿರಾಟ್ ಕೊಹ್ಲಿ ತಾನು ಟೂರ್ನಿ ಮುಗಿದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕತ್ವವನ್ನು ತ್ಯಜಿಸುತ್ತಿರುವ ವಿಷಯವನ್ನು ತಿಳಿಸಿದ್ದರು. ಹೀಗೆ ನಾಯಕತ್ವ ತ್ಯಜಿಸುವ ನಿರ್ಧಾರವನ್ನು ಕೈಗೊಂಡಿದ್ದ ವಿರಾಟ್ ಕೊಹ್ಲಿ ಓರ್ವ ಆಟಗಾರನಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿಯೇ ಮುಂದುವರಿಯುವುದಾಗಿ ಭರವಸೆಯನ್ನು ನೀಡಿದ್ದರು.

ಈ ಕಾರಣದಿಂದಲೇ ಸುರೇಶ್ ರೈನಾರನ್ನು ಮೆಗಾ ಹರಾಜಿನಲ್ಲಿ ಖರೀದಿಸಲಿಲ್ಲ ಎಂದ ಚೆನ್ನೈ ಸೂಪರ್ ಕಿಂಗ್ಸ್ ಸಿಇಒ!ಈ ಕಾರಣದಿಂದಲೇ ಸುರೇಶ್ ರೈನಾರನ್ನು ಮೆಗಾ ಹರಾಜಿನಲ್ಲಿ ಖರೀದಿಸಲಿಲ್ಲ ಎಂದ ಚೆನ್ನೈ ಸೂಪರ್ ಕಿಂಗ್ಸ್ ಸಿಇಒ!

ಕೊಟ್ಟ ಮಾತಿನಂತೆ ಕೊಹ್ಲಿ ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿಯೇ ಉಳಿದುಕೊಂಡಿದ್ದು, ಕಳೆದ ನವೆಂಬರ್ ತಿಂಗಳಿನಲ್ಲಿ ನಡೆದ ರಿಟೆನ್ಷನ್ ಪ್ರಕ್ರಿಯೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯಿಂದ 15 ಕೋಟಿಗೆ ರಿಟೈನ್ ಆಗಿದ್ದಾರೆ. ವಿರಾಟ್ ಕೊಹ್ಲಿ ಜೊತೆಗೆ ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ರಿಟೈನ್ ಮಾಡಿಕೊಂಡಿದೆ. ಹೀಗೆ ಈ ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ನೂತನ ನಾಯಕ ಯಾರು ಎಂಬ ಮಾಹಿತಿಯನ್ನು ಮಾತ್ರ ತಿಳಿಸಿರಲಿಲ್ಲ. ರಿಟೈನ್ ಆಗಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ನಾಯಕನನ್ನಾಗಿ ಘೋಷಿಸುತ್ತಾ ಅಥವಾ ಮೆಗಾ ಹರಾಜಿನಲ್ಲಿ ನೂತನ ಆಟಗಾರನನ್ನು ಖರೀದಿಸಿ ನಾಯಕತ್ವವನ್ನು ನೀಡಲಿದೆಯಾ ಎಂಬ ಪ್ರಶ್ನೆಗಳು ಅಭಿಮಾನಿಗಳಲ್ಲಿ ಎದ್ದಿದ್ದವು.

ರಣಜಿ 2022: ಕರ್ನಾಟಕ vs ರೈಲ್ವೇಸ್ ಪ್ಲೇಯಿಂಗ್ ಇಲೆವೆನ್, ಪಿಚ್ ವರದಿ ಮತ್ತು ಹವಾಮಾನ ವರದಿರಣಜಿ 2022: ಕರ್ನಾಟಕ vs ರೈಲ್ವೇಸ್ ಪ್ಲೇಯಿಂಗ್ ಇಲೆವೆನ್, ಪಿಚ್ ವರದಿ ಮತ್ತು ಹವಾಮಾನ ವರದಿ

ಹೀಗೆ ನೂತನ ನಾಯಕ ಬೇಕಾದ ಅನಿವಾರ್ಯತೆಯಲ್ಲಿಯೇ ಮೆಗಾ ಹರಾಜು ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಮುಗಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸದ್ಯ 22 ಆಟಗಾರರನ್ನು ತಂಡದಲ್ಲಿ ಹೊಂದಿದೆ. ಈ ಆಟಗಾರರ ಪೈಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಯಾರ ಹೆಗಲಿಗೆ ನಾಯಕತ್ವವನ್ನು ಹಾಕಲಿದೆ ಎಂಬ ಚರ್ಚೆಗಳು ಹೆಚ್ಚಾಗಿ ನಡೆಯುತ್ತಿದ್ದು, ವಿರಾಟ್ ಕೊಹ್ಲಿ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಾರಥ್ಯವನ್ನು ವಹಿಸಿಕೊಳ್ಳಲು ಈ ಕೆಳಕಂಡ ಮೂವರು ಆಟಗಾರರು ರೇಸ್‌ನಲ್ಲಿದ್ದಾರೆ.

ದಿನೇಶ್ ಕಾರ್ತಿಕ್

ದಿನೇಶ್ ಕಾರ್ತಿಕ್

ಈ ಬಾರಿಯ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ವಿಕೆಟ್ ಕೀಪರ್ ಮತ್ತು ಬ್ಯಾಟ್ಸ್‌ಮನ್‌ ಆಗಿರುವ ದಿನೇಶ್ ಕಾರ್ತಿಕ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ 5.5 ಕೋಟಿಗೆ ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಹಿರಿಯ ಆಟಗಾರ ಎನಿಸಿಕೊಂಡಿರುವ ದಿನೇಶ್ ಕಾರ್ತಿಕ್ 2018 ಹಾಗೂ 2019ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗಳಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ನಾಯಕನಾಗಿ ಮುನ್ನಡೆಸಿದ ಅನುಭವವನ್ನು ಹೊಂದಿದ್ದಾರೆ. ಹೀಗಾಗಿ ದಿನೇಶ್ ಕಾರ್ತಿಕ್ ವಿರಾಟ್ ಕೊಹ್ಲಿ ಉತ್ತರಾಧಿಕಾರಿಯಾಗಬಹುದಾದ ಆಟಗಾರರಲ್ಲಿ ಒಬ್ಬರಾಗಿದ್ದಾರೆ.

ಗ್ಲೆನ್ ಮ್ಯಾಕ್ಸ್‌ವೆಲ್

ಗ್ಲೆನ್ ಮ್ಯಾಕ್ಸ್‌ವೆಲ್

ಆಸ್ಟ್ರೇಲಿಯಾದ ಆಲ್ ರೌಂಡರ್ ಆಟಗಾರನಾದ ಗ್ಲೆನ್ ಮ್ಯಾಕ್ಸ್‌ವೆಲ್ ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಉತ್ತಮ ಪ್ರದರ್ಶನವನ್ನು ನೀಡಿದ್ದರು. ಹೀಗೆ ತಂಡದ ಪರ ಮಿಂಚಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು 11 ಕೋಟಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ರಿಟೈನ್ ಮಾಡಿಕೊಂಡಿದೆ. ವಿರಾಟ್ ಕೊಹ್ಲಿ ನಾಯಕ ಸ್ಥಾನದಿಂದ ಕೆಳಗಿಳಿದ ನಂತರ ಶುರುವಾದ ಮುಂದಿನ ನಾಯಕ ಯಾರು ಎಂಬ ಚರ್ಚೆಯಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಮುಂಚೂಣಿಯಲ್ಲಿದ್ದು, ನಾಯಕನಾಗುವ ಸಾಧ್ಯತೆಗಳು ಹೆಚ್ಚಿವೆ.

RCB ಹಂಚಿಕೊಂಡ ಹೊಸ ಪೋಸ್ಟ್ ನೋಡಿ ಅಭಿಮಾನಿಗಳು ಥ್ರಿಲ್ | Oneindia Kannada
ಫಾಫ್ ಡು ಪ್ಲೆಸಿಸ್

ಫಾಫ್ ಡು ಪ್ಲೆಸಿಸ್

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜು ಪ್ರಕ್ರಿಯೆಯಲ್ಲಿ 7 ಕೋಟಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿರುವ ಫಾಫ್ ಡು ಪ್ಲೆಸಿಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವವನ್ನು ನಿರ್ವಹಿಸಬಲ್ಲ ಆಟಗಾರರಲ್ಲಿ ಓರ್ವರಾಗಿದ್ದಾರೆ. ಈ ಹಿಂದೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸದಸ್ಯನಾಗಿದ್ದ ಫಾಫ್ ಡು ಪ್ಲೆಸಿಸ್ ಎಂಎಸ್ ಧೋನಿ ನೇತೃತ್ವದಲ್ಲಿ ಆಡಿರುವ ಅನುಭವವನ್ನು ಹೊಂದಿದ್ದಾರೆ ಹಾಗೂ ಸದ್ಯ ನಡೆಯುತ್ತಿರುವ ಬಾಂಗ್ಲಾದೇಶ ಪ್ರೀಮಿಯರ್ ಲೀಗ್‌ನಲ್ಲಿ ಕೋಮಿಲ್ಲಾ ವಿಕ್ಟೋರಿಯನ್ಸ್ ತಂಡವನ್ನು ಕೆಲ ಪಂದ್ಯಗಳಲ್ಲಿ ಫಾಫ್ ಡು ಪ್ಲೆಸಿಸ್ ನಾಯಕನಾಗಿ ಮುನ್ನಡೆಸಿರುವ ಅನುಭವವನ್ನು ಕೂಡ ಹೊಂದಿದ್ದಾರೆ.

Story first published: Thursday, February 17, 2022, 14:05 [IST]
Other articles published on Feb 17, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X