For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2022: ಟೈಮಲ್ ಮಿಲ್ಸ್ ಬದಲಿಗೆ ಮುಂಬೈ ಇಂಡಿಯನ್ಸ್ ತಂಡಕ್ಕೆ ದ. ಆಫ್ರಿಕಾ ಆಟಗಾರ ಸೇರ್ಪಡೆ

IPL 2022: Tristan Stubbs replaces Tymal Mills in the Mumbai Indians squad
Photo Credit: twitter

ಈ ಬಾರಿಯ ಐಪಿಎಲ್‌ನಲ್ಲಿ ಸತತ 8 ಸೋಲು ಅನುಭವಿಸಿ ಏಕೈಕ ಗೆಲುವು ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲಿನ ಜೊತೆಗೆ ಗಾಯದ ಸಮಸ್ಯೆ ಕೂಡ ಕಾಡುತ್ತಿದೆ. ಎಡಗೈ ವೇಗಿ ಟೈಮಲ್ ಮಿಲ್ಸ್ ಗಾಯಗೊಂಡಿರುವ ಕಾರಣ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ದಕ್ಷಿಣ ಆಪ್ರಿಕಾದ ವಿಕೆಟ್ ಕೀಪರ್ ಬ್ಯಾಟರ್ ಟ್ರಿಸ್ಟನ್ ಸ್ಟಬ್ಸ್ ಅವರೊಂದಿಗೆ ಮುಂಬೈ ಇಂಡಿಯನ್ಸ್ ಒಪ್ಪಂದ ಮಾಡಿಕೊಂಡಿದೆ. ಹೀಗಾಗಿ ಈ ಬಾರಿಯ ಆವೃತ್ತಿಯ ಉಳಿದ ಪಂದ್ಯಗಳಿಗೆ ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಮುಂಬೈ ತಂಡದ ಪರವಾಗಿ ಆಡಲು ಲಭ್ಯವಾಗಲಿದ್ದಾರೆ.

21ರ ಹರೆಯದ ವಿಕೆಟ್ ಕೀಪರ್ ಬ್ಯಾಟರ್ ಟ್ರಿಸ್ಟನ್ ಸ್ಟಬ್ಸ್ ಮಧ್ಯಮ ಕ್ರಮಾಂಕದ ಪ್ರತಿಭಾವಂತ ಆಟಗಾರನಾಗಿದ್ದಾರೆ. ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾ ತಮಡದ ಪರವಾಗಿ ಜಿಂಬಾಬ್ವೆ ವಿರುದ್ಧ ಪದಾರ್ಪಣೆ ಮಾಡಿದ್ದಾರೆ. ಇದೀಗ ಐಪಿಎಲ್‌ನಂತಾ ವೇದಿಕೆಯಲ್ಲಿಯೂ ಅವಕಾಶ ಗಿಟ್ಟಿಸಿಕೊಳ್ಳಲು ಯಶಸ್ವಿಯಾಗಿದ್ದಾರೆ.

ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಈ ಬಗ್ಗೆ ಅಧಿಕೃತ ಪ್ರಕಟಣೆಯಲ್ಲಿ ಮಾಹಿತಿಯನ್ನು ನೀಡಿದೆ. "ಟ್ರಿಸ್ಟಿನ್ ಅವರು ಅದ್ಭುತವಾದ ದೇಶೀಯ ಆವೃತ್ತಿಯನ್ನು ಹೊಂದಿದ್ದರು. ಇತ್ತೀಚೆಗಷ್ಟೇ ಅಂತ್ಯವಾದ ದೇಶೀಯ ಟಿ20 ಲೀಗ್‌ನಲ್ಲಿ ತಮ್ಮ ತಂಡದ ಪರವಾಗಿ ಅದ್ಭುತವಾದ ಪ್ರದರ್ಶನ ನೀಡಿದ್ದರು. ಈ ಆವೃತ್ತಿಯ ಮುಂದಿನ ಪಂದ್ಯಗಳಿಗೆ ಟ್ರಿಸ್ಟನ್ ಮುಂಬೈ ಇಂಡಿಯನ್ಸ್ ಸ್ಕ್ವಾಡ್‌ಅನ್ನು ಸೇರಿಕೊಳ್ಳಲಿದ್ದಾರೆ" ಎಂದು ಮುಂಬೈ ಇಂಡಿಯನ್ಸ್ ಮಾಹಿತಿ ನೀಡಿದೆ.

ಮುಂಬೈ ಇಂಡಿಯನ್ಸ್ ತಂಡದ ವೇಗಿ ಜೋಫ್ರಾ ಆರ್ಚರ್ ಈ ಬಾರಿಯ ಆವೃತ್ತಿಗೆ ಅಲಭ್ಯವಾಗಿದ್ದ ಹಿನ್ನೆಲೆಯಲ್ಲಿ ಟೈಮಲ್ ಮಿಲ್ಸ್ ಎಂಐ ತಂಡದ ಪ್ರಮುಖ ಬೌಲಿಂಗ್ ಅಸ್ತ್ರವಾಗಿದ್ದರು. ಆದರೆ ಮಿಲ್ಸ್ ಮೊಣಕಾಲಿನ ಗಾಯಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ಮುಂದಿನ ಪಂದ್ಯಗಳಿಗೆ ಅಲಭ್ಯವಾಗಿದ್ದಾರೆ. ಆದರೆ ಟೈಮಲ್ ಮಿಲ್ಸ್ ಬದಲಿಗೆ ವಿಕೆಟ್ ಕೀಪರ್ ಬ್ಯಾಟರ್‌ನನ್ನು ತಂಡಕ್ಕೆ ಸೇರ್ಪಡೆಗೊಳಿಸುವ ಮೂಲಕ ಮುಂಬೈ ಇಂಡಿಯನ್ಸ್ ಅಚ್ಚರಿ ಮೂಡಿಸಿದೆ.

21ರ ಹರೆಯದ ವಿಕೆಟ್ ಕೀಪರ್ ಬ್ಯಾಟರ್ ಟ್ರಿಸ್ಟನ್ ಸ್ಟಬ್ಸ್ ಈವರೆಗೆ ಒಟ್ಟು 17 ಟಿ20 ಪಂದ್ಯಗಳನ್ನು ಆಡಿದ್ದು ಇದರಲ್ಲಿ 506 ರನ್‌ಗಳಿಸಿದ್ದಾರೆ. ಮೂರು ಅರ್ಧ ಶತಕವನ್ನು ಗಳಿಸಿರುವ ಈ ಯುವ ಆಟಗಾರ 157.14ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ್ದಾರೆ.

ಮುಂಬೈ ಇಂಡಿಯನ್ಸ್ ಸಂಪೂರ್ಣ ಸ್ಕ್ವಾಡ್: ರೋಹಿತ್ ಶರ್ಮಾ(ನಾಯಕ), ಕೀರನ್ ಪೊಲಾರ್ಡ್, ಸೂರ್ಯಕುಮಾರ್ ಯಾದವ್, ಜಸ್ಪ್ರೀತ್ ಬುಮ್ರಾ, ಇಶಾನ್ ಕಿಶನ್, ರಮಣ್‌ದೀಪ್ ಸಿಂಗ್, ರಾಹುಲ್ ಬುದ್ಧಿ, ಹೃತಿಕ್ ಶೋಕೀನ್, ಅರ್ಜುನ್ ತೆಂಡೂಲ್ಕರ್, ಆರ್ಯನ್ ಜುಯಲ್, ಫ್ಯಾಬಿಯನ್ ಅಲೆನ್, ಡೆವಾಲ್ಡ್ ಬ್ರೆವಿಸ್, ಬಾಸಿಲ್ ಥಂಪಿ, ಎಂ ಅಶ್ವಿನ್, ಜಯದೇವ್ ಉನದ್ಕತ್, ಮಯಾಂಕ್ ಮರ್ಕಂಡೆ, ತಿಲಕ್ ಮಾರ್ಕಂಡೆ , ಸಂಜಯ್ ಯಾದವ್, ರಿಲೆ ಮೆರೆಡಿತ್, ಮೊಹಮ್ಮದ್ ಅರ್ಷದ್ ಖಾನ್, ಅನ್ಮೋಲ್ಪ್ರೀತ್ ಸಿಂಗ್, ಟ್ರಿಸ್ಟನ್ ಸ್ಟಬ್ಸ್

Story first published: Friday, May 6, 2022, 11:31 [IST]
Other articles published on May 6, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+