IPL 2022: ಕ್ವಾಲಿಫೈಯರ್ ಪಂದ್ಯದಲ್ಲಿ ಕೊಹ್ಲಿ ಆರ್‌ಸಿಬಿಗೆ ಕೈಕೊಟ್ಟು ಫ್ಲಾಪ್ ಆದದ್ದು ಇದು ಮೂರನೇ ಬಾರಿ!

ಶುಕ್ರವಾರ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ ಅಂಗಳದಲ್ಲಿ ನಡೆದ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕಣಕ್ಕಿಳಿದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೀನಾಯ ಸೋಲನ್ನು ಕಾಣುವುದರ ಮೂಲಕ ಟೂರ್ನಿಯಿಂದ ಹೊರಬಿದ್ದು ಮುಖಭಂಗಕ್ಕೊಳಗಾಗಿದೆ.

RCB vs RR: ಕ್ವಾಲಿಫೈಯರ್‌ನಲ್ಲಿ ಗೆಲ್ಲಲು ನಿಮ್ಮ ಡ್ರೀಮ್ ತಂಡದಿಂದ ಈ ಮೂವರನ್ನು ಹೊರಗಿಡಿRCB vs RR: ಕ್ವಾಲಿಫೈಯರ್‌ನಲ್ಲಿ ಗೆಲ್ಲಲು ನಿಮ್ಮ ಡ್ರೀಮ್ ತಂಡದಿಂದ ಈ ಮೂವರನ್ನು ಹೊರಗಿಡಿ

ಹೌದು, ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಫೀಲ್ಡಿಂಗ್ ಆಯ್ದುಕೊಂಡು ಎದುರಾಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 157 ರನ್ ಕಲೆಹಾಕಿ 158 ರನ್‌ಗಳ ಸಾಧಾರಣ ಗುರಿಯನ್ನು ನೀಡಿತು. ರಜತ್ ಪಾಟಿದಾರ್ ಹೊರತುಪಡಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಉಳಿದ ಬ್ಯಾಟ್ಸ್‌ಮನ್‌ಗಳು ರಾಜಸ್ಥಾನ್ ರಾಯಲ್ಸ್ ಬೌಲರ್‌ಗಳ ಮುಂದೆ ಅಕ್ಷರಶಃ ಮಂಕಾದರು.

RCB vs RR Qualifier 2: ಈ ಡೇಂಜರಸ್ ಆಟಗಾರನ ವಿಕೆಟ್ ಪಡೆಯದಿದ್ದರೆ ಆರ್‌ಸಿಬಿ ಗೆಲುವು ಅನುಮಾನ!RCB vs RR Qualifier 2: ಈ ಡೇಂಜರಸ್ ಆಟಗಾರನ ವಿಕೆಟ್ ಪಡೆಯದಿದ್ದರೆ ಆರ್‌ಸಿಬಿ ಗೆಲುವು ಅನುಮಾನ!

ಅದರಲ್ಲಿಯೂ ತಂಡದ ಪ್ರಮುಖ ಆಟಗಾರ ವಿರಾಟ್ ಕೊಹ್ಲಿ ಇಂತಹ ಮಹತ್ವದ ಪಂದ್ಯದಲ್ಲಿ 7 ರನ್ ಗಳಿಸಿ ಔಟ್ ಆದದ್ದು ತಂಡದ ಹಿನ್ನೆಡೆಗೆ ಪ್ರಮುಖ ಕಾರಣವಾಯಿತು. ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಲಿದ್ದಾರೆ ಎಂಬ ಭರವಸೆ ಹಲವಾರು ಅಭಿಮಾನಿಗಳಲ್ಲಿತ್ತು. ಆದರೆ ಅಭಿಮಾನಿಗಳ ಈ ನಂಬಿಕೆಯನ್ನು ಹುಸಿಗೊಳಿಸಿದ ಕೊಹ್ಲಿ ಮೂರನೇ ಬಾರಿಗೆ ಕ್ವಾಲಿಫೈಯರ್ ಪಂದ್ಯದಲ್ಲಿ ಫ್ಲಾಪ್ ಆಗಿದ್ದಾರೆ. ಹೌದು, ವಿರಾಟ್ ಕೊಹ್ಲಿ ಮಹತ್ವದ ಕ್ವಾಲಿಫೈಯರ್ ಪಂದ್ಯದಲ್ಲಿ ಮುಗ್ಗರಿಸಿರುವುದು ಇದೇ ಮೊದಲೇನಲ್ಲ. ಕೊಹ್ಲಿ ಎರಡನೇ ಕ್ವಾಲಿಫೈಯರ್ ಪಂದ್ಯಗಳಲ್ಲಿ ಕಣಕ್ಕಿಳಿದಾಗೆಲ್ಲಾ ಯಾವ ರೀತಿ ಮುಗ್ಗರಿಸಿದ್ದಾರೆ ಎಂಬುದರ ಕುರಿತ ಮಾಹಿತಿ ಕೆಳಕಂಡಂತಿದೆ.

ಕೊಹ್ಲಿ ಇಲ್ಲಿಯವರೆಗೂ ಆಡಿರುವ ಎಲ್ಲಾ ಎರಡನೇ ಕ್ವಾಲಿಫೈಯರ್ ಪಂದ್ಯಗಳಲ್ಲಿಯೂ ಫ್ಲಾಪ್!

ಕೊಹ್ಲಿ ಇಲ್ಲಿಯವರೆಗೂ ಆಡಿರುವ ಎಲ್ಲಾ ಎರಡನೇ ಕ್ವಾಲಿಫೈಯರ್ ಪಂದ್ಯಗಳಲ್ಲಿಯೂ ಫ್ಲಾಪ್!

ವಿರಾಟ್ ಕೊಹ್ಲಿ ಐಪಿಎಲ್ ಇತಿಹಾಸದಲ್ಲಿ ಇಲ್ಲಿಯವರೆಗೂ ಒಟ್ಟು 3 ಬಾರಿ ಎರಡನೇ ಕ್ವಾಲಿಫೈಯರ್ ಪಂದ್ಯಗಳನ್ನು ಆಡಿದ್ದಾರೆ. 2011ರಲ್ಲಿ ಮೊದಲ ಬಾರಿಗೆ ಎರಡನೇ ಕ್ವಾಲಿಫೈಯರ್ ಪಂದ್ಯ ಆಡಿದ್ದ ವಿರಾಟ್ ಕೊಹ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಆ ಪಂದ್ಯದಲ್ಲಿ 8 ರನ್ ಗಳಿಸಿ ಔಟ್ ಆಗಿದ್ದರು, ನಂತರ 2015ರ ಐಪಿಎಲ್ ಆವೃತ್ತಿಯಲ್ಲಿ ಮತ್ತೊಮ್ಮೆ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಆ ಪಂದ್ಯದಲ್ಲಿ 12 ರನ್ ಕಲೆಹಾಕಿ ನಿರ್ಗಮಿಸಿದ್ದರು ಹಾಗೂ ಇದೀಗ ಈ ಬಾರಿ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ 7 ರನ್‌ಗೆ ಔಟ್ ಆಗಿ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ವಿಫಲರಾಗುವುದನ್ನು ಮುಂದುವರೆಸಿದ್ದಾರೆ.

ಕೊಹ್ಲಿ ಫ್ಲಾಪ್ ಆದದ್ದು ತಂಡದ ಸೋಲಿಗೆ ಪ್ರಮುಖ ಕಾರಣ

ಕೊಹ್ಲಿ ಫ್ಲಾಪ್ ಆದದ್ದು ತಂಡದ ಸೋಲಿಗೆ ಪ್ರಮುಖ ಕಾರಣ

ವಿರಾಟ್ ಕೊಹ್ಲಿ ಈ ರೀತಿ ಪಂದ್ಯದಲ್ಲಿ ಮುಗ್ಗರಿಸಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸೋಲಿಗೆ ಕಾರಣವಾದ ಅಂಶಗಳಲ್ಲೊಂದು ಎಂದು ಹೇಳಬಹುದು. ಕಳೆದ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ನೀಡಿದ್ದ ರೀತಿಯ ಪ್ರದರ್ಶನವನ್ನೇನಾದರೂ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೀಡಿದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಉತ್ತಮ ಮೊತ್ತ ಕಲೆಹಾಕಿ ರಾಜಸ್ಥಾನ್ ರಾಯಲ್ಸ್ ಮೇಲೆ ಒತ್ತಡ ಹೇರಬಹುದಿತ್ತು.

Faf Du plessis ಸೋತ ನಂತರ ಹೇಳಿದ್ದೇನು | Oneindia Kannada
ಕೊಹ್ಲಿ ಜೊತೆ ಫಾಫ್, ಮ್ಯಾಕ್ಸಿ ಮತ್ತು ಡಿಕೆ ಕೂಡ ವಿಫಲ

ಕೊಹ್ಲಿ ಜೊತೆ ಫಾಫ್, ಮ್ಯಾಕ್ಸಿ ಮತ್ತು ಡಿಕೆ ಕೂಡ ವಿಫಲ

ಇನ್ನು ವಿರಾಟ್ ಕೊಹ್ಲಿ ಮಾತ್ರವಲ್ಲದೇ ಈ ಪಂದ್ಯದಲ್ಲಿ ಪ್ರಮುಖ ಆಟಗಾರರಾದ ಫಾಫ್ ಡು ಪ್ಲೆಸಿಸ್ 25 ರನ್, ಗ್ಲೆನ್ ಮ್ಯಾಕ್ಸ್‌ವೆಲ್ 24 ರನ್ ಮತ್ತು ದಿನೇಶ್ ಕಾರ್ತಿಕ್ 6 ರನ್ ಗಳಿಸಿ ಔಟ್ ಆದದ್ದು ಕೂಡ ತಂಡದ ಸೋಲಿಗೆ ಕಾರಣವಾಯಿತು ಎನ್ನಬಹುದು. ಈ ಆಟಗಾರರಲ್ಲಿ ಯಾರಾದರೂ ಓರ್ವ ಆಟಗಾರ ಅರ್ಧಶತಕ ಬಾರಿಸಿದ್ದರೂ ತಂಡ ಉತ್ತಮ ಸ್ಥಿತಿಯನ್ನು ತಲುಪುತ್ತಿತ್ತು ಎನ್ನಬಹುದು.

For Quick Alerts
ALLOW NOTIFICATIONS
For Daily Alerts
Story first published: Saturday, May 28, 2022, 9:39 [IST]
Other articles published on May 28, 2022

Latest Videos

  + More
  POLLS
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Yes No
  Settings X