ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

RCB vs CSK: ಧೋನಿ ಔಟ್ ಆಗಿದ್ದಕ್ಕೆ ಕೊಹ್ಲಿ ಸಂಭ್ರಮಾಚರಣೆ; ವಿಡಿಯೋ ವೈರಲ್

IPL 2022: Virat Kohlis celebration after MS Dhonis wicket goes viral on social media

ಸದ್ಯ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಫಾಫ್ ಡು ಪ್ಲೆಸಿಸ್ ನಾಯಕತ್ವದಲ್ಲಿ ಕಣಕ್ಕಿಳಿದು ಮೊದಲ ಪಂದ್ಯದಲ್ಲಿ ಸೋತು ನಂತರ ಹ್ಯಾಟ್ರಿಕ್ ಗೆಲುವು ಸಾಧಿಸಿ ಮೆರೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇತ್ತೀಚೆಗೆ ಹ್ಯಾಟ್ರಿಕ್ ಸೋಲನ್ನು ಕಂಡು ಮಂಕಾಗಿತ್ತು. ಆದರೆ, ನಿನ್ನೆ ( ಮೇ 4 ) ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋಲಿನ ಸರಪಳಿಯನ್ನು ಬಿಡಿಸಿಕೊಂಡಿದೆ.

ಇನ್ನು ಈ ಬಾರಿ ನಾಯಕತ್ವದ ಜವಾಬ್ದಾರಿ ಇಲ್ಲದೇ ಓರ್ವ ಆಟಗಾರನಾಗಿ ಮಾತ್ರ ಕಣಕ್ಕಿಳಿದಿರುವ ವಿರಾಟ್ ಕೊಹ್ಲಿ ಎಂದಿನಂತೆ ಮೈದಾನದಲ್ಲಿ ಅಗ್ರೆಸಿವ್ ಆಗಿಯೇ ಕಾಣಿಸಿಕೊಳ್ಳುತ್ತಿದ್ದಾರೆ. ತಮ್ಮ ಅಗ್ರೆಷನ್‌ನಿಂದಲೇ ಅಪಾರ ಅಭಿಮಾನಿಗಳ ಮನ ಗೆದ್ದಿರುವ ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ನಾಯಕನಾಗಿ ಸಹ ಆಟಗಾರರಿಗೂ ಸ್ಪೂರ್ತಿಯಾಗಿದ್ದರು. ಹಲವಾರು ಕ್ರಿಕೆಟಿಗರು ಎದುರಾಳಿ ಆಟಗಾರರ ವಿಕೆಟ್ ಪಡೆದಾಗ ವಿರಾಟ್ ಕೊಹ್ಲಿ ರೀತಿಯೇ ಅಗ್ರೆಸ್ಸಿವ್ ಆಗಿ ಸಂಭ್ರಮಿಸುವುದನ್ನು ರೂಢಿ ಮಾಡಿಕೊಂಡಿದ್ದಾರೆ.

ಚೆನ್ನೈಗೆ ಮಣ್ಣುಮುಕ್ಕಿಸಿದ ಆರ್‌ಸಿಬಿ ಪ್ಲೇಆಫ್ ಪ್ರವೇಶಿಸಲು ಇನ್ನೂ ಇಷ್ಟು ಪಂದ್ಯಗಳಲ್ಲಿ ಗೆಲ್ಲಲೇಬೇಕು!ಚೆನ್ನೈಗೆ ಮಣ್ಣುಮುಕ್ಕಿಸಿದ ಆರ್‌ಸಿಬಿ ಪ್ಲೇಆಫ್ ಪ್ರವೇಶಿಸಲು ಇನ್ನೂ ಇಷ್ಟು ಪಂದ್ಯಗಳಲ್ಲಿ ಗೆಲ್ಲಲೇಬೇಕು!

ಇನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ನಡೆದ ಪಂದ್ಯದಲ್ಲಿಯೂ ವಿರಾಟ್ ಕೊಹ್ಲಿ ತಮ್ಮ ಅಗ್ರೆಸಿವ್ ಸಂಭ್ರಮಾಚರಣೆಯನ್ನು ಮಾಡಿದ್ದು, ಸಿಎಸ್‌ಕೆ ನಾಯಕ ಎಂಎಸ್ ಧೋನಿ ಜೋಶ್ ಹೇಜಲ್‌ವುಡ್ ಎಸೆತದಲ್ಲಿ ರಜತ್ ಪಡಿದಾರ್‌ಗೆ ಕ್ಯಾಚ್ ನೀಡಿ ವಿಕೆಟ್ ಒಪ್ಪಿಸಿದಾಗ ಕೊಹ್ಲಿ ರೋಷದಿಂದ ಸಂಭ್ರಮಿಸಿದ್ದಾರೆ. ಇನ್ನು ಎಂಎಸ್ ಧೋನಿ ಔಟ್ ಆಗಿದ್ದಕ್ಕೆ ವಿರಾಟ್ ಕೊಹ್ಲಿ ಮೈದಾನದಲ್ಲಿ ಸಂಭ್ರಮಿಸಿದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಈ ವಿಡಿಯೋ ಮುಂದೆ ಇದೆ ನೋಡಿ..

ಪಂದ್ಯದ ಫಲಿತಾಂಶ: ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯ ಎರಡೂ ತಂಡಗಳಿಗೂ ಪ್ಲೇ ಆಫ್ ಪ್ರವೇಶಿಸಲು ಮಾಡು ಇಲ್ಲವೇ ಮಡಿ ಪಂದ್ಯವಾಗಿ ಪರಿಣಮಿಸಿತ್ತು. ಒಂದುವೇಳೆ ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಪಂದ್ಯದಲ್ಲಿ ಸೋತಿದ್ದರೆ ಪ್ಲೇ ಆಫ್ ಪ್ರವೇಶಿಸುವ ಆಸೆಯನ್ನು ಕೈಬಿಡಬೇಕಾಗಿತ್ತು. ಆದರೆ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 173 ರನ್ ಬಾರಿಸಿ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 174 ರನ್‌ಗಳ ಗುರಿಯನ್ನು ನೀಡಿತು ಹಾಗೂ ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 160 ರನ್ ಕಲೆಹಾಕಿ ಸೋಲನ್ನು ಅನುಭವಿಸಿತು.

Story first published: Thursday, May 5, 2022, 18:13 [IST]
Other articles published on May 5, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X