Virat Kohli : 43ನೇ ಅರ್ಧಶತಕ ಸಿಡಿಸಿದ ಕೊಹ್ಲಿ; ಕಿಂಗ್ ಈಸ್ ಬ್ಯಾಕ್ ಎಂದ ಅಭಿಮಾನಿಗಳು

ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಹದಿನೈದನೇ ಆವೃತ್ತಿಯ 43ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿವೆ. ಇತ್ತಂಡಗಳ ನಡುವಿನ ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ಫಾಫ್ ಡು ಪ್ಲೆಸಿಸ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಹೀಗೆ ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಮಾಜಿ ನಾಯಕ ವಿರಾಟ್ ಕೊಹ್ಲಿ ಅರ್ಧಶತಕ ಬಾರಿಸಿದ್ದಾರೆ. ಹೌದು, ಮುಂಬೈನ ಬ್ರಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ 45 ಎಸೆತಗಳಿಗೆ 50 ರನ್ ಪೂರೈಸಿರುವ ವಿರಾಟ್ ಕೊಹ್ಲಿಗೆ ಫಾರ್ಮ್‌ಗೆ ಮರಳಿದ್ದಾರೆ. ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮೊದಲ 9 ಪಂದ್ಯಗಳಲ್ಲಿ ಕೇವಲ 128 ರನ್ ಗಳಿಸಿದ್ದ ವಿರಾಟ್ ಕೊಹ್ಲಿ ಗರಿಷ್ಟ 48 ರನ್ ಗಳಿಸಿ ಒಂದೇ ಒಂದು ಅರ್ಧ ಶತಕವನ್ನೂ ಬಾರಿಸಲಾಗದೇ ಮಂಕಾಗಿದ್ದರು. ಅದರಲ್ಲಿಯೂ ಎರಡು ಪಂದ್ಯಗಳಲ್ಲಿ ಡಕ್ ಔಟ್ ಆಗಿದ್ದ ವಿರಾಟ್ ಕೊಹ್ಲಿ ಸಾಕಷ್ಟು ಟೀಕೆಗಳನ್ನು ಎದುರಿಸಿದ್ದರು.
ಈ ಟೀಕೆಗಳಿಗೆಲ್ಲಾ ಇದೀಗ ಬ್ಯಾಟ್ ಮೂಲಕ ಉತ್ತರಿಸಿರುವ ವಿರಾಟ್ ಕೊಹ್ಲಿ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ. ಈ ಅರ್ಧ ಶತಕದಲ್ಲಿ ಒಂದು ಸಿಕ್ಸರ್ ಮತ್ತು ಆರು ಬೌಂಡರಿಗಳೂ ಸಹ ಸೇರಿವೆ. ಪಂದ್ಯದಲ್ಲಿ ನಾಯಕ ಫಾಫ್ ಡು ಪ್ಲೆಸಿಸ್ ಜೊತೆ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 53 ಎಸೆತಗಳಿಗೆ 58 ರನ್ ಬಾರಿಸಿ ಮೊದಮ್ಮದ್ ಶಮಿಗೆ ವಿಕೆಟ್ ಒಪ್ಪಿಸಿದ್ದಾರೆ. ಫಾಫ್ ಡು ಪ್ಲೆಸಿಸ್ ಶೂನ್ಯಕ್ಕೆ ಔಟ್ ಆದ ನಂತರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಜತ್ ಪಾಟಿದರ್ ಜೊತೆ ಕೈಜೋಡಿಸಿದ ವಿರಾಟ್ ಕೊಹ್ಲಿ 99 ರನ್‌ಗಳ ಜತೆಯಾಟವನ್ನಾಡಿದರು. ಇನ್ನು ರಜತ್ ಪಾಟಿದರ್ 32 ಎಸೆತಗಳಲ್ಲಿ 52 ರನ್ ಬಾರಿಸಿ ಮಿಂಚಿದರು. ಇನ್ನು ವಿರಾಟ್ ಕೊಹ್ಲಿ ಸಿಡಿಸಿದ 43ನೇ ಇಂಡಿಯನ್ ಪ್ರೀಮಿಯರ್ ಲೀಗ್ ಅರ್ಧಶತಕ ಇದಾಗಿದ್ದು, ಕೊಹ್ಲಿ ಅರ್ಧಶತಕದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿರುವ ಅವರ ಅಭಿಮಾನಿಗಳು ಕಿಂಗ್ ಈಸ್ ಬ್ಯಾಕ್ ಎಂದು ಬರೆದುಕೊಂಡು ಸಂಭ್ರಮಿಸುತ್ತಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ ಇಲೆವೆನ್: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ಮಹಿಪಾಲ್ ಲೊಮ್ರೋರ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್
ಗುಜರಾತ್ ಟೈಟನ್ಸ್ ಪ್ಲೇಯಿಂಗ್ ಇಲೆವೆನ್: ಶುಭಮನ್ ಗಿಲ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಪ್ರದೀಪ್ ಸಾಂಗ್ವಾನ್, ಅಲ್ಜಾರಿ ಜೋಸೆಫ್, ಲಾಕಿ ಫರ್ಗುಸನ್, ಮೊಹಮ್ಮದ್ ಶಮಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications