ಮ್ಯಾಕ್ಸ್‌ವೆಲ್ ಮದುವೆಯಲ್ಲಿ 'ಊ ಅಂಟಾವಾ ಮಾವ' ಹಾಡಿಗೆ ಹೆಜ್ಜೆ ಹಾಕಿದ ವಿರಾಟ್ ಕೊಹ್ಲಿ; ವಿಡಿಯೋ ಇಲ್ಲಿದೆ

ಆಸ್ಟ್ರೇಲಿಯಾದ ಆಲ್ ರೌಂಡರ್ ಆಟಗಾರ ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪ್ರಸಕ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರನಾಗಿರುವ ಗ್ಲೆನ್ ಮ್ಯಾಕ್ಸ್‌ವೆಲ್ ಕಳೆದ ಮಾರ್ಚ್ ತಿಂಗಳಲ್ಲಿ ಚೆನ್ನೈ ಮೂಲದ ಯುವತಿ ವಿನಿ ರಾಮನ್ ಜತೆ ಆಸ್ಟ್ರೇಲಿಯಾದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆಸ್ಟ್ರೇಲಿಯಾದಲ್ಲಿ ಮ್ಯಾಕ್ಸ್‌ವೆಲ್ ಮನೆಯವರ ಸಂಪ್ರದಾಯದಂತೆ ಮದುವೆ ನಡೆದಿತ್ತು. ಹಾಗೂ ಅದೇ ತಿಂಗಳು ಚೆನ್ನೈನಲ್ಲಿ ವಿನಿ ರಾಮನ್ ಕುಟುಂಬಸ್ಥರು ಭಾರತೀಯ ಸಂಪ್ರದಾಯದಂತೆ ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ವಿನಿ ರಾಮನ್ ಮದುವೆಯನ್ನು ನೆರವೇರಿಸಿದರು.
ಇನ್ನು ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ವಿನಿ ರಾಮನ್ ಹಲವು ವರ್ಷಗಳಿಂದ ಸ್ನೇಹಿತರಾಗಿದ್ದು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದಾರೆ. 2020ರಲ್ಲಿಯೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ಈ ಜೋಡಿ ಕೊರೋನಾ ಲಾಕ್ ಡೌನ್ ಕಾರಣದಿಂದಾಗಿ 2 ವರ್ಷಗಳ ಬಳಿಕ ವೈವಾಹಿಕ ಜೀವನಕ್ಕೆ ಕಾಲಿಟ್ಟಿದೆ.
ಹೀಗೆ ಮಾರ್ಚ್ ತಿಂಗಳಲ್ಲಿ ಮದುವೆ ಕಾರ್ಯಕ್ರಮಗಳು ಇದ್ದ ಕಾರಣದಿಂದಾಗಿ ಈ ಬಾರಿಯ ಐಪಿಎಲ್ ಆವೃತ್ತಿಯ ಆರಂಭದ ಪಂದ್ಯಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಆಟಗಾರರಾದ ಗ್ಲೆನ್ ಮ್ಯಾಕ್ಸ್‌ವೆಲ್ ಅಲಭ್ಯರಾಗಿದ್ದರು. ಇದೀಗ ವಿವಾಹದ ಕಾರ್ಯಗಳನ್ನೆಲ್ಲಾ ಮುಗಿಸಿಕೊಂಡು ತಂಡ ಸೇರಿರುವ ಗ್ಲೆನ್ ಮ್ಯಾಕ್ಸ್‌ವೆಲ್ ಅವರ ವಿವಾಹದ ವಿಶೇಷ ಔತಣ ಕೂಟವನ್ನು ಕಳೆದ ರಾತ್ರಿ ( ಏಪ್ರಿಲ್ 27 ) ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಭಾಗವಹಿಸಿ ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.
ಹೀಗೆ ನಡೆದ ಔತಣಕೂಟದ ಕಾರ್ಯಕ್ರಮದ ಚಿತ್ರಗಳನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಧಿಕೃತ ಇನ್ ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಆಟಗಾರರು ತನ್ನ ಸಹ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ವಿನಿ ರಾಮನ್ ಜೋಡಿಗೆ ಶುಭಾಶಯವನ್ನು ಕೋರಿ ಹರಸಿದ್ದಾರೆ. ಹಾಗೂ ಈ ಕಾರ್ಯಕ್ರಮದ ಕೆಲ ವಿಶೇಷ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಕ್ರಿಕೆಟಿಗ ವಿರಾಟ್ ಕೊಹ್ಲಿ ಅಲ್ಲು ಅರ್ಜುನ್ ಅಭಿನಯದ ಪುಷ್ಪ ಚಿತ್ರದ 'ಊ ಅಂಟಾವಾ ಮಾವ ಊಊ ಅಂಟಾವಾ ಮಾವ' ಹಾಡಿಗೆ ಹೆಜ್ಜೆ ಹಾಕಿರುವ ವಿಡಿಯೋ ಈ ಪೈಕಿ ಸಖತ್ ಸದ್ದು ಮಾಡುತ್ತಿದೆ.
ವಿರಾಟ್ ಕೊಹ್ಲಿ ತನ್ನ ಸಹ ಆಟಗಾರರೊಂದಿಗೆ ಈ ಹಾಡಿಗೆ ಮೈಕುಣಿಸಿ ಹೆಜ್ಜೆ ಹಾಕಿದ್ದು, ಕ್ರಿಕೆಟ್ ಅಭಿಮಾನಿಗಳು ಈ ವಿಡಿಯೋವನ್ನು ಹಂಚಿಕೊಳ್ಳುವುದರ ಮೂಲಕ ಕೊಹ್ಲಿ ಕುಣಿತ ಕಂಡು ಸಂತಸ ವ್ಯಕ್ತಪಡಿಸುತ್ತಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications