ಗೆಲ್ಲಬೇಕೆಂದರೆ ಕೊಹ್ಲಿ ಬೇಡ ಈ ಇಬ್ಬರು ಆರ್‌ಸಿಬಿ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿಯಬೇಕು: ಜಾಫರ್

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ದಿನಗಣನೆ ಆರಂಭವಾಗಿದ್ದು, ಟೂರ್ನಿಯ ಚೊಚ್ಚಲ ಪಂದ್ಯ ಮಾರ್ಚ್ 26ರ ಶನಿವಾರದಂದು ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ನಡೆಯಲಿದೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಬಾರಿಯ ಟೂರ್ನಿಯ ಎರಡನೇ ದಿನದಂದು ( ಮಾರ್ಚ್ 27 ) ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸೆಣಸಾಡುವ ಮೂಲಕ ತನ್ನ ಚೊಚ್ಚಲ ಪಂದ್ಯವನ್ನಾಡಲಿದೆ. ಹಾಗೂ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಾಕಷ್ಟು ವಿಭಿನ್ನ ಆಟಗಾರರಿಂದ ಕೂಡಿದ್ದು, ನೂತನ ನಾಯಕ ಫಾಫ್ ಡು ಪ್ಲೆಸಿಸ್ ನಾಯಕತ್ವದಡಿಯಲ್ಲಿ ತಂಡ ಕಣಕ್ಕಿಳಿಯಲಿದೆ.
ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹಲವಾರು ನೂತನ ಆಟಗಾರರ ಆಗಮನವಾಗಿದ್ದು, ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ ತಂಡದಲ್ಲಿದ್ದ ಹಲವಾರು ಆಟಗಾರರು ಈ ಬಾರಿ ಬೇರೆ ತಂಡಗಳ ಪರ ಕಣಕ್ಕಿಳಿಯುತ್ತಿದ್ದಾರೆ ಹಾಗೂ ಕೆಲವರು ಐಪಿಎಲ್ ಟೂರ್ನಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ನೂತನ ಆಟಗಾರರನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಆಡುವ ಬಳಗ ಯಾವ ರೀತಿ ಇರಬೇಕು, ಯಾವ ಆಟಗಾರರು ಯಾವ ಕ್ರಮಾಂಕದಲ್ಲಿ ಕಣಕ್ಕಿಳಿಯಬೇಕು ಎಂಬುದರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಭಾರತದ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ಕೂಡ ಈ ಕುರಿತಾಗಿ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆರಂಭಿಕ ಆಟಗಾರರಾಗಿ ಯಾರು ಕಣಕ್ಕಿಳಿಯಬೇಕು ಮತ್ತು ವಿರಾಟ್ ಕೊಹ್ಲಿ ಯಾವ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬೇಕು ಎಂಬುದನ್ನು ವಾಸಿಮ್ ಜಾಫರ್ ಈ ಕೆಳಕಂಡಂತೆ ತಿಳಿಸಿದ್ದಾರೆ.

ಈ ಇಬ್ಬರು ಆರಂಭಿಕ ಆಟಗಾರರಾಗಿ ಕಣಕ್ಕಿಳಿಯಬೇಕು
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕುರಿತು ಮಾತನಾಡಿರುವ ವಾಸಿಂ ಜಾಫರ್ ಈ ಬಾರಿಯ ಟೂರ್ನಿಯಲ್ಲಿ ತಂಡದ ಆರಂಭಿಕ ಆಟಗಾರರಾಗಿ ಫಾಫ್ ಡು ಪ್ಲೆಸಿಸ್ ಮತ್ತು ಯುವ ಕ್ರಿಕೆಟಿಗ ಅನೂಜ್ ರಾವತ್ ಕಣಕ್ಕಿಳಿಯಬೇಕು ಎಂದಿದ್ದಾರೆ. ಕಳೆದ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಆರಂಭಿಕ ಆಟಗಾರನಾಗಿ ವಿರಾಟ್ ಕೊಹ್ಲಿ ಕಣಕ್ಕಿಳಿದಿದ್ದರು. ಆದರೆ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಆರಂಭಿಕ ಆಟಗಾರರಾಗಿ ಕಣಕ್ಕಿಳಿಯಬಾರದು ಎಂದೂ ಸಹ ವಾಸಿಂ ಜಾಫರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೊಹ್ಲಿ ಈ ಕ್ರಮಾಂಕದಲ್ಲಿಯೇ ಆಡಬೇಕು
ಇನ್ನೂ ಮುಂದುವರಿದು ಮಾತನಾಡಿರುವ ವಾಸಿಮ್ ಜಾಫರ್ ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಬ್ಯಾಟ್ ಬೀಸಬೇಕು ಎಂದಿದ್ದಾರೆ. ತಂಡದಲ್ಲಿ ಈ ಬಾರಿ ಎಬಿ ಡಿ ವಿಲಿಯರ್ಸ್ ಇಲ್ಲ ಎಂಬುದನ್ನು ನೆನಪಿನಲ್ಲಿಟ್ಟುಕೊಂಡು ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಬ್ಯಾಟ್ ಬೀಸಬೇಕು ಹೀಗಿದ್ದರೆ ಮಾತ್ರ 14 ಹಾಗೂ 15ನೇ ಓವರ್ ತನಕ ವಿರಾಟ್ ಕೊಹ್ಲಿ ಕಣದಲ್ಲಿ ಉಳಿಯಲಿದ್ದಾರೆ ಹಾಗೂ ತಂಡಕ್ಕೆ ರನ್ ಬರಲಿದೆ ಎಂದು ವಾಸಿಂ ಜಾಫರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ
ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡು ಪ್ಲೆಸಿಸ್, ಹರ್ಷಲ್ ಪಟೇಲ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಜೋಶ್ ಹೇಜಲ್‌ವುಡ್, ಶಹಬಾಜ್ ಅಹ್ಮದ್, ಅನುಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೋರ್, ಫಿನ್ ಅಲೆನ್, ಶೆರ್ಫಾನ್ ರುದರ್‌ಫೋರ್ಡ್, ಜೇಸನ್ ಬೆಹ್ರೆಂಡ್, ಜೇಸನ್ ಬೆಹ್ರಾಯ್ ಮಿಲಿಂದ್, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಡೇವಿಡ್ ವಿಲ್ಲಿ, ಲುವ್ನಿತ್ ಸಿಸೋಡಿಯಾ, ಸಿದ್ಧಾರ್ಥ್ ಕೌಲ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications