ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2022: ಆರ್‌ಸಿಬಿ ತಂಡದ ಸ್ಥಿರತೆಗೆ ಅವರಿಬ್ಬರು ಕಾರಣ ಎಂದ ವೀರೇಂದ್ರ ಸೆಹ್ವಾಗ್

IPL 2022: Virender Sehwag credits Sanjay Bangar and Faf du Plessis for RCB teams consistency

ರಾಯಲ್ ಚಾಲಂಜರ್ಸ್ ಬೆಂಗಳೂರು ತಂಡ ಈ ಬಾರಿಯ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದು ಫೈನಲ್ ಹಂತಕ್ಕೇರಲು ಸರ್ವ ಪ್ರಯತ್ನಗಳನ್ನು ನಡೆಸುತ್ತಿದೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನಡೆದ ಫ್ಲೇಆಫ್‌ನ ಎಲಿಮಿನೇಟರ್ ಪಂದ್ಯದಲ್ಲಿ ಪಂದ್ಯದಲ್ಲಿ ಗೆಲುವು ಸಾಧಿಸಿರುವ ಆರ್‌ಸಿಬಿ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಕ್ವಾಲಿಫೈಯರ್ ಪಂದ್ಯವನ್ನು ಗೆಲ್ಲುವತ್ತ ಚಿತ್ತ ನೆಟ್ಟಿದೆ.

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ಆರ್‌ಸಿಬಿ ತಂಡದ ಪ್ರದರ್ಶನದ ಬಗ್ಗೆ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಆರ್‌ಸಿಬಿ ತಂಡ ಈ ಟೂರ್ನಿಯಲ್ಲಿ ಸ್ಥಿರವಾಗಿರಲು ಇಬ್ಬರ ಪಾತ್ರ ಮಹತ್ವದ್ದಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆ ಕಾರಣದಿಂದಾಗಿಯೇ ಆರ್‌ಸಿಬಿ ತಂಡ ಲೀಗ್‌ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿ ಪ್ಲೇಆಫ್‌ಗೆ ಪ್ರವೇಶ ಪಡೆದುಕೊಂಡಿದ್ದು ಈಗ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಆಡುವ ಅರ್ಹತೆ ಪಡೆದುಕೊಂಡಿದೆ ಎಂದಿದ್ದಾರೆ ವೀರೇಂದ್ರ ಸೆಹ್ವಾಗ್.

RCB vs LSG: ಈ ಮೂವರು ಇಲ್ಲದಿದ್ದರೆ ಲಕ್ನೋ ವಿರುದ್ಧ ಆರ್‌ಸಿಬಿ ಗೆದ್ದು ಕ್ವಾಲಿಫೈಯರ್ 2ಕ್ಕೆ ಮುನ್ನುಗ್ಗುತ್ತಿರಲಿಲ್ಲ!RCB vs LSG: ಈ ಮೂವರು ಇಲ್ಲದಿದ್ದರೆ ಲಕ್ನೋ ವಿರುದ್ಧ ಆರ್‌ಸಿಬಿ ಗೆದ್ದು ಕ್ವಾಲಿಫೈಯರ್ 2ಕ್ಕೆ ಮುನ್ನುಗ್ಗುತ್ತಿರಲಿಲ್ಲ!

ಹಾಗಾದರೆ ಈ ಬಾರಿಯ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡ ಬಹುತೇಕ ಸಂದರ್ಭಗಳಲ್ಲಿ ಸ್ಥಿರ ಪ್ರದರ್ಶನ ನೀಡಲು ಕಾರಣ ಎಂದು ಸೆಹ್ವಾಗ್ ಹೇಳಿದ್ದು ಯಾರನ್ನು? ಮುಂದೆ ಓದಿ..

ಫಾಫ್ ನಾಯಕತ್ವವನ್ನು ಹೊಗಳಿದ ಸೆಹ್ವಾಗ್

ಫಾಫ್ ನಾಯಕತ್ವವನ್ನು ಹೊಗಳಿದ ಸೆಹ್ವಾಗ್

ಈ ಬಾರಿಯ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡವನ್ನು ಫಾಫ್ ಡು ಪ್ಲೆಸಿಸ್ ಮುನ್ನಡೆಸುತ್ತಿದ್ದಾರೆ. ದಕ್ಷಿಣ ಆಫ್ರಿಕಾದ ಅನುಭವಿ ಆಟಗಾರ ಆರ್‌ಸಿಬಿ ತಂಡವನ್ನು ಮುನ್ನಡೆಸುತ್ತಿರುವ ರೀತಿಗೆ ಸೆಹ್ವಾಗ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ನಾಯಕನಾಗಿ ಫಾಫ್ ಈ ಆವೃತ್ತಿಯಲ್ಲಿ ಯಶಸ್ಸು ಗಳಿಸುವ ಜೊತೆಗೆ ಆಟಗಾರನಾಗಿಯೂ ಮಿಂಚಿದ್ದಾರೆ. ಹೆಚ್ಚಿನ ಪಂದ್ಯಗಳಲ್ಲಿ ಆರ್‌ಸಿಬಿ ನಾಯಕನ ಬ್ಯಾಟರ್‌ನಿಂದ ಉತ್ತಮ ಪ್ರಮಾಣದಲ್ಲಿ ರನ್ ಹರಿದು ಬಂದಿದೆ.

ಫಾಫ್ ಹಾಗೂ ಸಂಜಯ್ ಬಂಗಾರ್ ಕೊಡುಗೆಯನ್ನು ಉಲ್ಲೇಖಿಸಿದ ಸೆಹ್ವಾಗ್

ಫಾಫ್ ಹಾಗೂ ಸಂಜಯ್ ಬಂಗಾರ್ ಕೊಡುಗೆಯನ್ನು ಉಲ್ಲೇಖಿಸಿದ ಸೆಹ್ವಾಗ್

ಈ ಬಾರಿಯ ಟೂರ್ನಿಯಲ್ಲಿ ಆರ್‌ಸಿಬಿ ತಂಡಕ್ಕೆ ಹೆಡ್ ಕೋಚ್ ಆಗಿ ಸಂಜಯ್ ಬಂಗಾರ್ ನೇಮಕವಾಗಿದ್ದರೆ ನಾಯಕತ್ವ ಫಾಫ್ ಹೆಗಲೆರಿತ್ತು. ಈ ಇಬ್ಬರ ಆಗಮನದಿಂದಾಗಿ ಆರ್‌ಸಿಬಿ ತಂಡದ ಯೋಚನಾ ಶೈಲಿ ಬದಲಾಯಿತು ಎಂದಿದ್ದಾರೆ ಸೆಹ್ವಾಗ್. ಈ ಇಬ್ಬರ ಕಾರಣದಿಂದಾಗಿಯೇ ಆರ್‌ಸಿಬಿ ಬಹುತೇಕ ಪಂದ್ಯಗಳಲ್ಲಿ ಸ್ಥಿರ ಪ್ರದರ್ಶನ ನೀಡಲು ಸಾಧ್ಯವಾಯಿತು ಎಂದು ಸೆಹ್ವಾಗ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಹೆಚ್ಚಿನ ಬದಲಾವಣೆ ಮಾಡದೆ ತಂಡ ಯಶಸ್ಸು

ಹೆಚ್ಚಿನ ಬದಲಾವಣೆ ಮಾಡದೆ ತಂಡ ಯಶಸ್ಸು

ಆರ್‌ಸಿಬಿ ಈ ಬಾರಿಯ ಆವೃತ್ತಿಯಲ್ಲಿ ಹೆಚ್ಚಿನ ಬದಲಾವಣೆ ಮಾಡದೆ ಬಹುತೇಕ ಪಂದ್ಯಗಳಲ್ಲಿ ಸ್ಥಿರ ತಂಡವನ್ನು ಉಳಿಸಿಕೊಂಡಿತ್ತು. ಇದು ತಂಡದ ಪ್ರದರ್ಶನಕ್ಕೆ ಪೂರಕವಾಯಿತು ಎಂಬ ಅಭಿಪ್ರಾಯವನ್ನು ಸೆಹ್ವಾಗ್ ವ್ಯಕ್ತಪಡಿಸಿದ್ದಾರೆ. "ವಿರಾಟ್ ಕೊಹ್ಲಿ ಈ ಹಿಂದೆ ಆಟಗಾರ ಎರಡು ಅಥವಾ ಮೂರು ಪಂದ್ಯಗಳಲ್ಲಿ ವಿಫಲವಾದರೆ ಆತನನ್ನು ತಂಡದಿಂದ ಕೈ ಬಿಡುತ್ತಿದ್ದರು. ಆದರೆ ಅದು ಈ ಬಾರಿ ನಡೆಯಲಿಲ್ಲ. ಬಂಗಾರ್ ಹಾಗೂ ಫಾಫ್ ಇಬ್ಬರು ಟೂರ್ನಿಯುದ್ದಕ್ಕೂ ಬಹುತೇಕ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಯಶಸ್ವಿಯಾದರು" ಎಂದಿದ್ದಾರೆ ಸೆಹ್ವಾಗ್.

KGF ಮತ್ತು ರಜತ್ ಕಟ್ಟಿಹಾಕೋಕೆ ರಾಜಸ್ತಾನ್ ರಣತಂತ್ರ:ಗೆದ್ದೋರು ಪೈನಲ್,ಸೋತೋರು ಮನೆಗೆ | Oneindia Kannada
ರಾಜಸ್ಥಾನ್ ರಾಯಲ್ಸ್ ವಿರುದ್ಧ ಕ್ವಾಲಿಫೈಯರ್ ಪಂದ್ಯಕ್ಕೆ ಸಜ್ಜಾದ ಆರ್‌ಸಿಬಿ

ರಾಜಸ್ಥಾನ್ ರಾಯಲ್ಸ್ ವಿರುದ್ಧ ಕ್ವಾಲಿಫೈಯರ್ ಪಂದ್ಯಕ್ಕೆ ಸಜ್ಜಾದ ಆರ್‌ಸಿಬಿ

ಇನ್ನು ಆರ್‌ಸಿಬಿ ತಂಡ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎಲಿಮಿನೇಟರ್ ಪಂದ್ಯದಲ್ಲಿ ಮಣಿಸುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಆರ್‌ಸಿಬಿ ಎದುರಿಸಲಿದೆ. ಎರಡೂ ತಂಡಗಳಲ್ಲಿಯೂ ಸಾಕಷ್ಟು ಬಲಿಷ್ಠ ಆಟಗಾರರಿದ್ದು ಶುಕ್ರವಾರದ ಪಂದ್ಯದಲ್ಲಿ ಯಾರಿಗೆ ಗೆಲುವು ದೊರೆಯಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

Story first published: Friday, May 27, 2022, 9:44 [IST]
Other articles published on May 27, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X