ಐಪಿಎಲ್: ನೂತನ ನಾಯಕ ಯಾರೆಂದು ಘೋಷಿಸುವಲ್ಲಿ ಆರ್‌ಸಿಬಿ ತಡ ಮಾಡುತ್ತಿರುವುದು ಈ ಮೂವರಿಂದ!

ಎಲ್ಲಾ ಯೋಜನೆಯಂತೆ ನಡೆದರೆ ಮುಂಬರುವ ಮಾರ್ಚ್ 26ರಿಂದ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಗೊಳ್ಳಲಿದೆ. ಸದ್ಯ ಬಿಸಿಸಿಐ ನಡೆಸುತ್ತಿರುವ ಯೋಜನೆಗಳ ಪ್ರಕಾರ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಎಲ್ಲಾ ಪಂದ್ಯಗಳೂ ಕೂಡ ಸಂಪೂರ್ಣವಾಗಿ ಭಾರತದ ನೆಲದಲ್ಲಿಯೇ ನಡೆಯಲಿವೆ. ಸದ್ಯ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಂಬೈ ಹಾಗೂ ಪುಣೆ ನಗರಗಳಲ್ಲಿ ನಡೆಯುವುದಾಗಿ ಮಾಹಿತಿಗಳು ಹರಿದಾಡುತ್ತಿದ್ದು, ಪ್ಲೇ ಆಫ್ ಹಂತದ ಪಂದ್ಯಗಳನ್ನು ಅಹಮದಾಬಾದ್ ನಗರದ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಸಲು ಚಿಂತನೆಗಳು ನಡೆಯುತ್ತಿವೆ. ಹೀಗೆ ಟೂರ್ನಿ ಆಯೋಜನೆಯ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು ದಿನದಿಂದ ದಿನಕ್ಕೆ ಕುತೂಹಲಗಳು ಹೆಚ್ಚಾಗುತ್ತಿವೆ.
ಹೀಗೆ ಈ ಬಾರಿಯ ಐಪಿಎಲ್ ಟೂರ್ನಿ ಯಾವಾಗ ಆರಂಭವಾಗಲಿದೆ ಎಂಬ ವಿಷಯ ಒಂದೆಡೆ ಕುತೂಹಲವನ್ನು ಮೂಡಿಸಿದ್ದರೆ, ಸದ್ಯ ನಾಯಕನನ್ನು ಹೊಂದಿಲ್ಲದ ಫ್ರಾಂಚೈಸಿಗಳಿಗೆ ಯಾರು ನಾಯಕನಾಗಿ ಆಯ್ಕೆಯಾಗಲಿದ್ದಾರೆ ಎಂಬ ವಿಚಾರವೂ ಕೂಡ ಸಾಕಷ್ಟು ಕುತೂಹಲವನ್ನು ಮೂಡಿಸಿದ್ದು ಚರ್ಚೆಗಳಿಗೆ ಕಾರಣವಾಗಿದೆ. ಅದರಲ್ಲಿಯೂ ರಾಯಲ್ ಚಾಲೆಂಜರ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳಿಗೆ ಯಾರು ನಾಯಕರಾಗಲಿದ್ದಾರೆ ಎಂಬ ವಿಷಯ ದೊಡ್ಡ ಮಟ್ಟದಲ್ಲಿ ಹರಿದಾಡುತ್ತಿತ್ತು. ಈ ಪೈಕಿ ಇದೀಗ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಇಂದು ( ಫೆಬ್ರವರಿ 28 ) ಮಯಾಂಕ್ ಅಗರ್ವಾಲ್ ಅವರನ್ನು ತಮ್ಮ ತಂಡದ ನಾಯಕ ಎಂದು ನೇಮಿಸಿತು. ಹೀಗೆ ಪಂಜಾಬ್ ಕಿಂಗ್ಸ್ ತಂಡ ಕೂಡ ನಮ್ಮ ತಂಡದ ನಾಯಕ ಯಾರೆಂಬುದನ್ನು ಬಿಚ್ಚಿಟ್ಟಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ವಿರಾಟ್ ಕೊಹ್ಲಿ ನಂತರ ತನ್ನ ತಂಡವನ್ನು ಮುನ್ನಡೆಸಲಿದ್ದಾರೆ ಎಂಬುದನ್ನು ಮಾತ್ರ ಇದುವರೆಗೂ ಬಿಚ್ಚಿಟ್ಟಿಲ್ಲ.
ಹೌದು, ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವದಿಂದ ವಿರಾಟ್ ಕೊಹ್ಲಿ ಕೆಳಗಿಳಿದಿದ್ದು, ಈ ಬಾರಿಯ ಐಪಿಎಲ್ ಮೆಗಾ ಹರಾಜಿನ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ನೂತನ ನಾಯಕನನ್ನು ಘೋಷಿಸಲಿದೆ ಎಂಬ ಊಹೆಗಳು ಇದ್ದವು. ಆದರೆ ಇದೀಗ ಮೆಗಾ ಹರಾಜು ಪ್ರಕ್ರಿಯೆ ನಡೆದು 2 ವಾರಗಳು ಕಳೆದಿದ್ದರೂ ಸಹ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮಾತ್ರ ತನ್ನ ಮುಂದಿನ ನಾಯಕ ಯಾರು ಎಂಬುದನ್ನು ಬಹಿರಂಗಪಡಿಸಿಲ್ಲ. ಸದ್ಯ ಈ ಕುರಿತಾಗಿ ಹಲವಾರು ಚರ್ಚೆಗಳು ನಡೆಯುತ್ತಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಯಾರ ಹೆಗಲಿಗೆ ನಾಯಕತ್ವದ ಜವಾಬ್ದಾರಿಯನ್ನು ಹಾಕಲಿದೆ ಎನ್ನುವುದು ದೊಡ್ಡ ಪ್ರಶ್ನೆಯಾಗಿದೆ. ಈ ಕುರಿತಾಗಿ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬಲ್ಲ ಮೂಲಗಳು ಮಾಹಿತಿ ನೀಡಿದ್ದು, ಈ ಕೆಳಕಂಡ ಕಾರಣದಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ನಾಯಕನ ಘೋಷಣೆ ವಿಳಂಬವಾಗುತ್ತಿದೆ ಎಂದು ತಿಳಿಸಿದ್ದಾರೆ.

ನಾಯಕನ ಘೋಷಣೆ ವಿಳಂಬಕ್ಕೆ ಈ ಮೂವರು ಕಾರಣ
ಸದ್ಯ ನಾಯಕನ ಪೋಷಣೆಯ ಸನಿಹದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಗೆ ತಂಡದಲ್ಲಿರುವ ಹೆಚ್ಚಿನ ಆಯ್ಕೆಗಳೇ ಅಡ್ಡಿಯನ್ನುಂಟುಮಾಡಿವೆ ಎನ್ನಲಾಗುತ್ತಿದೆ. ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ದಿನೇಶ್ ಕಾರ್ತಿಕ್ ಹೀಗೆ ನಾಯಕತ್ವ ನಿಭಾಯಿಸಬಲ್ಲ ಮೂವರು ಆಟಗಾರರು ಇರುವುದರಿಂದ ಫ್ರಾಂಚೈಸಿ ಸದ್ಯ ಗೊಂದಲಕ್ಕೀಡಾಗಿದೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಬಲ್ಲ ಮೂಲವೊಂದು ತಿಳಿಸಿದೆ.

ಇನ್ನೂ ನಡೆಯುತ್ತಿವೆ ಚರ್ಚೆಗಳು
ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ನಾಯಕತ್ವವನ್ನು ಅತೀ ಶೀಘ್ರದಲ್ಲಿಯೇ ಘೋಷಿಸಲಿದ್ದು, ಸದ್ಯ ಲಭ್ಯವಿರುವ ಆಯ್ಕೆಗಳಲ್ಲಿ ಯಾವುದು ಉತ್ತಮ ಆಯ್ಕೆ ಎಂಬುದನ್ನು ಮುಂಬರುವ ಸಭೆಯಲ್ಲಿ ಮೈಕ್ ಹೆಸ್ಸನ್ ಹಾಗೂ ಸಂಜಯ್ ಬಂಗಾರ್ ಚರ್ಚಿಸಿ ತೀರ್ಮಾನ ಕೈಗೊಂಡು ನಾಯಕನನ್ನು ಆಯ್ಕೆ ಮಾಡಲಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ
ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡು ಪ್ಲೆಸಿಸ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಫಿನ್ ಅಲೆನ್, ಆಕಾಶ್ ದೀಪ್, ಜೋಶ್ ಹ್ಯಾಜಲ್‌ವುಡ್, ಜೇಸನ್ ಬೆಹ್ರೆನ್‌ಡಾರ್ಫ್, ಚಾಮಾ ಮಿಲಿಂದ್, ಕರ್ಣ್ ಶರ್ಮಾ, ಹರ್ಷಲ್ ಪಟೇಲ್, ವನಿಂದು ಹಸರಂಗ, ಶಹಬಾಜ್ ಅಹ್ಮದ್, ಮಾಹಿ ಶೆಪಾಲ್ ಅಹ್ಮದ್ ರುದರ್‌ಫೋರ್ಡ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್, ಡೇವಿಡ್ ವಿಲ್ಲಿ, ಲುವ್ನಿತ್ ಸಿಸೋಡಿಯಾ, ಸಿದ್ಧಾರ್ಥ್ ಕೌಲ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications