For Quick Alerts
ALLOW NOTIFICATIONS  
For Daily Alerts
 

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಿಂದ ರವೀಂದ್ರ ಜಡೇಜಾ ಹೊರಗುಳಿದಿದ್ದು ಯಾಕೆ? ಇಲ್ಲಿದೆ ಕಾರಣ

IPL 2022: Why Ravindra Jadeja not included in CSKs playing XI against Delhi Capitals

ಮುಂಬೈನ ಡಾ ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 55ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾದವು. ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ಆಟಗಾರ ರವೀಂದ್ರ ಜಡೇಜಾ ಕಣಕ್ಕಿಳಿಯದೇ ಇದ್ದದ್ದು ಹಲವಾರು ಕ್ರಿಕೆಟ್ ಅಭಿಮಾನಿಗಳಲ್ಲಿ ಆಶ್ಚರ್ಯವನ್ನು ಮೂಡಿಸಿತ್ತು ಹಾಗೂ ರವೀಂದ್ರ ಜಡೇಜಾ ಯಾಕೆ ಕಣಕ್ಕಿಳಿದಿಲ್ಲ ಎಂಬ ಪ್ರಶ್ನೆಯೂ ಕೂಡ ಹುಟ್ಟಿತ್ತು.

ಇನ್ನು ಈ ಪಂದ್ಯದ ಟಾಸ್ ನಂತರ ಮಾತನಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ತಂಡದ ಪ್ರಮುಖ ಆಲ್ ರೌಂಡರ್ ಆಟಗಾರ ರವೀಂದ್ರ ಜಡೇಜಾ ಈ ಪಂದ್ಯದಲ್ಲಿ ಕಣಕ್ಕಿಳಿಯುತ್ತಿಲ್ಲ ಎಂಬ ವಿಚಾರವನ್ನು ಬಿಚ್ಚಿಟ್ಟರು. ಹೀಗೆ ರವೀಂದ್ರ ಜಡೇಜಾ ಕುರಿತು ಮಾತನಾಡಿದ ಎಂ ಎಸ್ ಧೋನಿ ಅನ್ ಫಿಟ್ ಆದ ಕಾರಣ ಕಣಕ್ಕಿಳಿದಿಲ್ಲ ಎಂಬ ಕಾರಣವನ್ನು ನೀಡಿದರು.

ಇನ್ನು ರವೀಂದ್ರ ಜಡೇಜಾ ಕಳೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಕ್ಯಾಚ್ ಹಿಡಿಯಲು ಯತ್ನಿಸಿ ಬಿದ್ದ ಕಾರಣ ಗಾಯದ ಸಮಸ್ಯೆಗಳಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದಾರೆ. ಹೌದು, ಕಳೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟ್ಸ್‌ಮನ್‌ ಮಹಿಪಾಲ್ ಲೊಮ್ರೊರ್ ಅವರ ಕ್ಯಾಚ್ ಹಿಡಿಯಲು ವೇಗವಾಗಿ ಓಡಿ ಬಂದ ರವೀಂದ್ರ ಜಡೇಜಾ ಸಂಪೂರ್ಣವಾಗಿ ಎಡಗೈ ನೆಲಕ್ಕೆ ಬಡಿಯುವಂತೆ ಬಿದ್ದಿದ್ದರು. ಹೀಗಾಗಿಯೇ ರವೀಂದ್ರ ಜಡೇಜಾ ಗಾಯದ ಸಮಸ್ಯೆಗೊಳಗಾಗಿ ಈ ಪಂದ್ಯದಿಂದ ಹೊರಗುಳಿದಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ಮೊಯಿನ್ ಅಲಿ, ಎಂಎಸ್ ಧೋನಿ (ನಾಯಕ ಮತ್ತು ವಿಕೆಟ್ ಕೀಪರ್), ಶಿವಂ ದುಬೆ, ಡ್ವೇನ್ ಬ್ರಾವೋ, ಮಹೇಶ್ ತೀಕ್ಷಣ, ಸಿಮರ್ಜೀತ್ ಸಿಂಗ್, ಮುಖೇಶ್ ಚೌಧರಿ

ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಡೇವಿಡ್ ವಾರ್ನರ್, ಶ್ರೀಕರ್ ಭರತ್, ಮಿಚೆಲ್ ಮಾರ್ಷ್, ರಿಷಭ್ ಪಂತ್ ( ನಾಯಕ ಮತ್ತು ವಿಕೆಟ್ ಕೀಪರ್ ), ರೋವ್‌ಮನ್ ಪೊವೆಲ್, ಅಕ್ಸರ್ ಪಟೇಲ್, ರಿಪಾಲ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಖಲೀಲ್ ಅಹ್ಮದ್, ಅನ್ರಿಚ್ ನಾರ್ಟ್ಜೆ

ಗೆದ್ದ ಸಿಎಸ್‌ಕೆ:
ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡು ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 208 ರನ್ ಕಲೆಹಾಕಿ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 209 ರನ್‌ಗಳ ಕಠಿಣ ಗುರಿಯನ್ನು ನೀಡಿತು. ಆದರೆ ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾಗಿ ನೆಲಕಚ್ಚಿದ ಡೆಲ್ಲಿ ಕ್ಯಾಪಿಟಲ್ಸ್ 17.4 ಓವರ್‌ಗಳಲ್ಲಿ 117 ರನ್‌ಗಳಿಗೆ ಆಲ್ ಔಟ್ ಆಯಿತು. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ 91 ರನ್‌ಗಳ ಬೃಹತ್ ಗೆಲುವನ್ನು ಸಾಧಿಸಿತು.

Story first published: Monday, May 9, 2022, 9:44 [IST]
Other articles published on May 9, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+